AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆಗೆ ಮನೆಗಳಿಗೆ ಲಗ್ಗೆ ಇಡುತ್ತಿವೆ ವಿಷಸರ್ಪಗಳು! ಇರಲಿ ಎಚ್ಚರ

ಬೆಂಗಳೂರಿನ ಸುಡು ಬಿಸಿಲಿನಿಂದ ರಕ್ಷಣೆ ಪಡೆಯಲು ವಿಷಕಾರಿ ಹಾವುಗಳು ಮನೆಗಳ ಒಳಗೆ ನುಗ್ಗುತ್ತಿರುವ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಿವೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಉರಗ ತಜ್ಞರು ಸಲಹೆ ನೀಡಿದ್ದಾರೆ. ಅಲ್ಲದೆ, ಆಟವಾಡುವ ಮಕ್ಕಳ ಮೇಲೆ ಪೋಷಕರು ನಿಗಾ ವಹಿಸಬೇಕು ಹಾಗೂ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಹಾವುಗಳು ಆಶ್ರಯ ಪಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಉರಗ ತಜ್ಞರು ಸಲಹೆ ನೀಡಿದ್ದಾರೆ.

ಬಿಸಿಲ ಬೇಗೆಗೆ ಮನೆಗಳಿಗೆ ಲಗ್ಗೆ ಇಡುತ್ತಿವೆ ವಿಷಸರ್ಪಗಳು! ಇರಲಿ ಎಚ್ಚರ
ಸಾಂದರ್ಭಿಕ ಚಿತ್ರImage Credit source: MediaForge AI
Kiran Surya
| Edited By: |

Updated on: Apr 23, 2026 | 7:17 AM

Share

ಬೆಂಗಳೂರು, ಏಪ್ರಿಲ್ 23: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಈ ಬಾರಿ ಸೂರ್ಯನ ತಾಪ ದಾಖಲೆ ಮಟ್ಟಕ್ಕೆ ಏರಿದೆ. ಈಗಾಗಲೇ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, 38 ಡಿಗ್ರಿ ಸೆಲ್ಸಿಯಸ್ ವರೆಗೂ ಏರಿಕೆಯಾಗಬಹುದು ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಈ ರಣಬಿಸಿಲಿನ ಬೇಗೆಗೆ ಮನುಷ್ಯರು ಮಾತ್ರವಲ್ಲದೆ, ಮೂಕಪ್ರಾಣಿಗಳೂ ತತ್ತರಿಸುತ್ತಿವೆ. ಮುಖ್ಯವಾಗಿ ಹುತ್ತದೊಳಗಿನ ಶಾಖ ತಾಳಲಾರದೆ ವಿಷಕಾರಿ ಹಾವುಗಳು (Snakes) ತಂಪಾದ ಜಾಗ ಹುಡುಕುತ್ತಾ ಮನೆಗಳಿಗೆ ನುಗ್ಗುತ್ತಿವೆ. ಶೂಗಳ ಒಳಗೆ, ಅಡುಗೆ ಮನೆ, ಬಾತ್‌ರೂಮ್‌ ಹಾಗೂ ವಾಹನಗಳ ಎಂಜಿನ್ ಭಾಗದಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ನಗರವಾಸಿಗಳಲ್ಲಿ ಭೀತಿ ಸೃಷ್ಟಿಸಿದೆ.

ಹಾವುಗಳು ಮರಿ ಮಾಡುವ ಸಮಯ: ಎಚ್ಚರ ಅಗತ್ಯ

ಮಾರ್ಚ್ ಮತ್ತು ಏಪ್ರಿಲ್ ತಿಂಗಳು ಹಾವುಗಳು ಮೊಟ್ಟೆಯಿಟ್ಟು ಮರಿ ಮಾಡುವ ಸಮಯ. ಹೀಗಾಗಿ ಈ ಅವಧಿಯಲ್ಲಿ ಹಾವುಗಳ ಸಂಚಾರ ಹೆಚ್ಚಾಗಿರುತ್ತದೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾ ಅಥವಾ ಯೂಟ್ಯೂಬ್ ನೋಡಿ ತಾವೇ ಹಾವು ಹಿಡಿಯಲು ಮುಂದಾಗುವವರ ಸಂಖ್ಯೆ ಹೆಚ್ಚಿದೆ. ಇದು ಅತ್ಯಂತ ಅಪಾಯಕಾರಿ. ಇದರಿಂದ ಹಾವುಗಳಿಗೆ ಹಾನಿಯಾಗುವುದಲ್ಲದೆ, ಅನಾಹುತಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಎಂದು ಉರಗ ತಜ್ಞ ಮೋಹನ್ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳ ಬಗ್ಗೆ ಇರಲಿ ವಿಶೇಷ ನಿಗಾ

ಶಾಲೆಗಳಿಗೆ ಬೇಸಿಗೆ ರಜೆ ನೀಡಿರುವುದರಿಂದ ಮಕ್ಕಳು ಮನೆಯಲ್ಲಿ ಅಥವಾ ಕಾಂಪೌಂಡ್ ಆವರಣದಲ್ಲಿ ಆಟವಾಡುತ್ತಿರುತ್ತಾರೆ. ಸಣ್ಣ ಮಕ್ಕಳಿಗೆ ಹಾವುಗಳ ಅಪಾಯದ ಬಗ್ಗೆ ಅರಿವಿರುವುದಿಲ್ಲ. ಪೋಷಕರು ಕೆಲಸಕ್ಕೆ ಹೋದಾಗ ಮಕ್ಕಳು ಒಂಟಿಯಾಗಿ ಆಟವಾಡುವಾಗ ಹೆಚ್ಚು ಜಾಗರೂಕರಾಗಿರಬೇಕು. ಬಿಸಿಲು ಆರಂಭವಾದ ಮೇಲೆ ಮಕ್ಕಳನ್ನು ಹೊರಗೆ ಕಳಿಸಲು ಭಯವಾಗುತ್ತಿದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

ಏನೇನು ಮುನ್ನೆಚ್ಚರಿಕೆ ವಹಿಸಬೇಕು?

  • ಮನೆಯ ಸುತ್ತಮುತ್ತ ಇರುವ ಹಳೆಯ ವಸ್ತುಗಳು, ಪ್ಲಾಸ್ಟಿಕ್ ಹಾಗೂ ಕಸದ ರಾಶಿಯನ್ನು ತಕ್ಷಣ ವಿಲೇವಾರಿ ಮಾಡಿ.
  • ಹೂದಾನಿಗಳನ್ನು (Flower Pots),  ಗಿಡಗಳ ಪಾಟ್​​ಗಳನ್ನು ಸ್ವಚ್ಛವಾಗಿಡಿ, ಅಲ್ಲಿ ತೇವಾಂಶ ಇರುವುದರಿಂದ ಹಾವುಗಳು ಆಶ್ರಯ ಪಡೆಯಬಹುದು.
  • ಶೂಗಳನ್ನು ಧರಿಸುವ ಮುನ್ನ ಅವುಗಳನ್ನು ಚೆನ್ನಾಗಿ ಕೊಡವಿ ಪರೀಕ್ಷಿಸಿ.
  • ಮನೆಯ ಬಾಗಿಲುಗಳ ಕೆಳಭಾಗದಲ್ಲಿ ಸಣ್ಣ ಸಂದಿ ಇಲ್ಲದಂತೆ ನೋಡಿಕೊಳ್ಳಿ.
  • ಹಾವು ಕಾಣಿಸಿಕೊಂಡರೆ ಕೂಡಲೇ ಬಿಬಿಎಂಪಿ ವನ್ಯಜೀವಿ ವಿಭಾಗ ಅಥವಾ ನುರಿತ ಉರಗ ತಜ್ಞರಿಗೆ ಕರೆ ಮಾಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ