ಬೆಂಗಳೂರು: ಸಿಗ್ನಲ್​ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ, ಬಂದ ಹಣದಲ್ಲಿ ಮೋಜುಮಸ್ತಿ; ಇಬ್ಬರು ಅರೆಸ್ಟ್

| Updated By: Rakesh Nayak Manchi

Updated on: Nov 26, 2023 | 7:03 AM

ಬೆಂಗಳೂರು ನಗರದಲ್ಲಿ ಸಿಗ್ನಲ್​ಗಳ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿ ಕಳವು ಮಾಡಿದ್ದ 80 ಬ್ಯಾಟರಿಗಳನ್ನು ಜಪ್ತಿ ಮಾಡಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗುತ್ತಿದ್ದವು.

ಬೆಂಗಳೂರು: ಸಿಗ್ನಲ್​ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ, ಬಂದ ಹಣದಲ್ಲಿ ಮೋಜುಮಸ್ತಿ; ಇಬ್ಬರು ಅರೆಸ್ಟ್
ಬೆಂಗಳೂರು ಟ್ರಾಫಿಕ್ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟಿಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು, ನ.26: ನಗರದಲ್ಲಿ ಸಿಗ್ನಲ್​ಗಳ ಬ್ಯಾಟರಿಗಳನ್ನು ಕಳ್ಳತನ (Theft) ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬನಶಂಕರಿ ಮೂಲದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ ಒಟ್ಟು ಐದು ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ ಆರೇಳು ತಿಂಗಳಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು, ಬರೋಬ್ಬರಿ 120 ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಲನವಲನಗಳು ಪತ್ತೆಯಾಗಿವೆ.

ಇದನ್ನೂ ಓದಿ: ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಕಂಟಕ: ನೀರು ಬರುವ ಮುನ್ನವೇ ಪೈಪ್​ಗಳ ಕಳ್ಳತನ

ಅದರಂತೆ, ಆರೋಪಿಗಳ ಗುರುತು ಪತ್ತೆಹಚ್ಚಿದ ಹೈಗ್ರೌಂಡ್ಸ್ ಪೊಲೀಸರು, ಆರೋಪಿಗಳಾದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಎಂಬವರನ್ನು ಬಂಧಿಸಿ ಕಳ್ಳತನ ಮಾಡಿದ್ದ 80 ಬ್ಯಾಟರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಟರಿ ಕಳ್ಳತನ ಮಾಡಿದ ನಂತರ ಅದನ್ನು ಗುಜರಿಗಳಲ್ಲಿ ಮಾರಾಟ ಮಾಡುತ್ತಿದ್ದರು ಮತ್ತು ಬಂದ ಹಣದಿಂದ ಮೋಜು ಮಸ್ತಿ ಮಾಡುತ್ತಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:02 am, Sun, 26 November 23