AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಗರೇಟ್​ ತಂದು ಕೊಡದಿದ್ದಕ್ಕೆ ಕಾರಿನಿಂದ ಗುದ್ದಿ ಯುವಕನ ಕೊಲೆ

ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ಸಿಗರೇಟ್ ಕೊಡದಿದ್ದಕ್ಕೆ ಕಾರಿನಿಂದ ಗುದ್ದಿ ಸಾಫ್ಟ್‌ವೇರ್ ಇಂಜಿನಿಯರ್ ಸಂಜಯ್ ಅವರನ್ನು ಕೊಲೆ ಮಾಡಲಾಗಿದೆ. ಆರೋಪಿ ಪ್ರತೀಕ್ ಯುವಕರಿಗೆ ಸಿಗರೇಟ್ ಕೇಳಿದಾಗ ನಿರಾಕರಿಸಿದ್ದರಿಂದ ಈ ಘಟನೆ ನಡೆದಿದೆ. ಗಾಯಗೊಂಡ ಚೇತನ್ ಚಿಕಿತ್ಸೆ ಪಡೆಯುತ್ತಿದ್ದಾರೆ.ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿ ಪ್ರತೀಕ್​ನನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಿಗರೇಟ್​ ತಂದು ಕೊಡದಿದ್ದಕ್ಕೆ ಕಾರಿನಿಂದ ಗುದ್ದಿ ಯುವಕನ ಕೊಲೆ
ಆರೋಪಿ ಪ್ರತೀಕ್​
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ|

Updated on: May 17, 2025 | 6:20 PM

Share

ಬೆಂಗಳೂರು, ಮೇಲೆ 17: ಸಿಗರೇಟ್​ ತಂದು ಕೊಡದಿದ್ದಕ್ಕೆ ಕಾರಿನಿಂದ ಗುದ್ದಿ ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Benagluru) ಕೋಣನಕುಂಟೆ ಕ್ರಾಸ್ (Konanakunte Cross) ಬಳಿ ನಡೆದಿದೆ. ಶನಿವಾರ (ಮೇ.10) ನಸುಕಿನ ಜಾವ ನಾಲ್ಕು ಗಂಟೆಗೆ ಘಟನೆ ನಡೆದಿದೆ. ಭಯಾನಕ‌ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಸಂಜಯ್ ಮೃತ ದುರ್ದೈವಿ. ಮತ್ತೋರ್ವ ಯುವಕ ಚೇತನ್​ ಎಂಬುವರಿಗೆ ಗಂಭೀರ ಗಾಯವಾಗಿದೆ. ಕಾರು ಚಾಲಕ ಆರೋಪಿ ಪ್ರತೀಕ್​ನನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಸಂಜಯ್​ ಮತ್ತು ಚೇತನ್​ ಇಬ್ಬರೂ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ರಾತ್ರಿ ವರ್ಕ್ ಫ್ರಮ್ ಹೋಂ ಕೆಲಸ ಮುಗಿಸಿ ನಸುಕಿನ ಜಾವ 4 ಗಂಟೆಗೆ ಕೋಣನಕುಂಟೆ ಕ್ರಾಸ್ ಬಳಿ ಇದ್ದ ತಳ್ಳುವ ಗಾಡಿ ಬಳಿ ನಿಂತು ಚಹಾ ಕುಡಿಯುತ್ತಿದ್ದ ನಿಂತಿದ್ದರು. ಈ ವೇಳೆ ಪ್ರತೀಕ್ ದಂಪತಿ ಬರ್ತ್​ ಡೇ ಪಾರ್ಟಿ ಮುಗಿಸಿ ಆರ್​ಆರ್ ನಗರದಲ್ಲಿನ ತಮ್ಮ ಮನೆಗೆ ಕ್ರೇಟಾ ಕಾರಲ್ಲಿ ತೆರಳುತ್ತಿದ್ದರು.

ಕೋಣನಕುಂಟೆ ಕ್ರಾಸ್​ ಬಳಿ ಕಾರು ನಿಲ್ಲಿಸಿದ ಆರೋಪಿ ಪ್ರತೀಕ್​ ಯುವಕರನ್ನು ಕರೆದು, ಸಿಗರೇಟ್ ತೆಗೆದುಕೊಡುವಂತೆ ಹೇಳಿದ್ದಾನೆ. ಇದಕ್ಕೆ ಸಂಜಯ್ ಹಾಗೂ ಚೇತನ್ ನಿರಾಕರಿಸಿದ್ದರು. ಬೇಕಿದ್ದರೇ ನೀವೆ ಬಂದು ತೆಗೆದುಕೊಳ್ಳಿ ಎಂದಿದ್ದರು. ಇಷ್ಟಕ್ಕೆ, ಚಹಾ ಅಂಗಡಿ ಬಳಿ ದಂಪತಿ ಹಾಗೂ ಯುವಕರ ಮಧ್ಯೆ ಗಲಾಟೆಯಾಗಿದೆ. ಆಗ, ಸ್ಥಳಿಯರು ಗಲಾಟೆ ತಿಳಿಗೊಳಿಸಿದ್ದಾರೆ. ನಂತರ, ಯುವಕರು ಯಮಹಾ R15 ಬೈಕ್‌ ಹತ್ತಿ ಹೊರಟಿದ್ದಾರೆ. ಸಂಜಯ್ ಬೈಕ್ ಚಾಲನೆ ಮಾಡುತ್ತಿದ್ದರೇ, ಚೇತನ್ ಹಿಂಬದಿ ಕೂತಿದ್ದರು. ಯುವಕರು ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಗುದ್ದಿದ್ದಾನೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಅಂಗಡಿಯ ಶೆಟರ್​ಗೆ ಬಡಿದಿದೆ.

ಇದನ್ನೂ ಓದಿ
Image
ಬೆಂಗಳೂರು ತುಮಕೂರು ಮೆಟ್ರೋ ಸ್ಟುಪಿಡ್ ಐಡಿಯಾ ಎಂದ ತೇಜಸ್ವಿ ಸೂರ್ಯ!
Image
160 ಮೆಟ್ರೋ ಪಿಲ್ಲರ್​ಗಳಿಗೆ ಕಲರ್ ಲೈಟಿಂಗ್ಸ್: ಪ್ರಯಾಣಿಕರು ಆಕ್ರೋಶ
Image
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗ ಕಾಮಗಾರಿ: 6 ತಿಂಗಳು ರೈಲುಗಳ ಸಂಚಾರ ರದ್ದು
Image
ಹೆಬ್ಬಾಳ ಫ್ಲೈಓವರ್​​ ಇಂದಿನಿಂದ ಮೇ 21ರವರೆಗೆ ಪ್ರತಿದಿನ 3 ಗಂಟೆ ಬಂದ್

ಸಂಜಯ್ ಅವರಿಗೆ ಗಂಭೀರ ಗಾಯವಾಗಿ ಪ್ರಜ್ಞಾಹೀನನಾಗಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನದ ಹಿಂದೆ ಸಂಜಯ್ ಮೃತಪಟ್ಟಿದ್ದಾರೆ. ಸಂಜಯ್ ಅಂಗಾಂಗ ದಾನ ಮಾಡಿ ಕುಟುಂಬ ಸಾರ್ಥಕತೆ ಮೆರೆದಿದೆ. ಇನ್ನು, ಮೃತ ಸಂಜಯ್ ಹಾಸನ ಮೂಲದವರು. ಗಾಯಾಳು ಚೇತನ್ ಉತ್ತರ ಕನ್ನಡದರು.

ಇದನ್ನೂ ಓದಿ: ವೈಟ್​ಫೀಲ್ಡ್​​ನ ಈ ರಸ್ತೆಯಲ್ಲಿ ಭಾನುವಾರದಿಂದ 4 ದಿನ ವಾಹನ ಸಂಚಾರ ನಿರ್ಬಂಧ

ಕೊಲೆ ಪ್ರಕರಣ ದಾಖಲಿಸಿಕೊಂಡು ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿ ಪ್ರತೀಕ್​ನನ್ನು ಬಂಧಿಸಿದ್ದಾರೆ. ಆರೋಪಿ ಪ್ರತೀಕ್ ಮಾಗಡಿ ರಸ್ತೆಯಲ್ಲಿರುವ ಖಾಸಗಿ ‌ಕಂಪನಿಯಲ್ಲಿ ಸೇಲ್ಸ್ ಮ್ಯಾನೆಜರ್ ಆಗಿದ್ದಾನೆ. ಗಲಾಟೆಯಾದಾಗ ಪತಿ ಪ್ರತೀಕ್​ಗೆ ಪತ್ನಿ ಬುದ್ದಿ ಹೇಳಿ ಸಮಾಧಾನ ಮಾಡಿದ್ದರು. ಮನೆಗೆ ಹೋಗೋಣ ಎಂದು ಹೇಳಿ ಕರೆದುಕೊಂಡು ಹೋಗುತ್ತಿದ್ದರು. ಬೈಕ್ ಮುಂದೆ ಹೋಗುತ್ತಿದ್ದಂತೆ ಯೂ ಟರ್ನ್ ತೆಗೆದುಕೊಳ್ಳುವಾಗ ಪ್ರತೀಕ್​ ಬೈಕ್​ಗೆ ಗುದ್ದಿದ್ದಾನೆ. ಗಂಡನ ವರ್ತನೆ ಕಂಡು ಮಡದಿ ಬೆಚ್ಚಿ ಬಿದ್ದಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್