AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ರಿಕ್ಷಾವನ್ನು ಚೆಂಡಿನಂತೆ ಎತ್ತಿಎಸೆದ ಕ್ಯಾಂಟರ್: ರಣಭೀಕರ ಅಪಘಾತದಲ್ಲಿ ಗರ್ಭಿಣಿ ಗ್ರೇಟ್ ಎಸ್ಕೇಪ್, ಸಿಸಿಟಿವಿ ವಿಡಿಯೋ ಇಲ್ಲಿದೆ

ಆ ಯುವತಿಗೆ ಮುಂದಿನ ತಿಂಗಳು ಮದುವೆ ನಿಶ್ಚಯವಾಗಿತ್ತು. ಪ್ರಾರ್ಥನೆ ಮಾಡುವುದಕ್ಕಾಗಿ ತಂದೆಯ ಜೊತೆ ಆಟೋದಲ್ಲಿ ಚರ್ಚ್ ಕಡೆ ಹೋಗುತ್ತಿದ್ದಳು. ಆದರೆ ಯಮದೂತನಂತೆ ಎದುರಾದ ಕ್ಯಾಂಟರ್ ಆ ತಂದೆ ಮಗಳನ್ನ ಬಲಿ ಪಡೆದಿದೆ. ಅದೃಷ್ಟವಶಾತ್ ಭೀಕರ ಅಪಘಾತದಲ್ಲಿ, ಕಾರಿನಲ್ಲಿದ್ದ ಗರ್ಭಿಣಿ ಹಾಗೂ ಕುಟುಂಬದವರು ಪಾರಾಗಿದ್ದಾರೆ. ಘಟನೆಯ ಎದೆ ಝಲ್ಲೆನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Ganapathi Sharma
|

Updated on:Sep 13, 2025 | 4:00 PM

Share

ಬೆಂಗಳೂರು, ಸೆಪ್ಟೆಂಬರ್ 13: ಕ್ಯಾಂಟರ್ ಕೆಳಗೆ ಸಿಲುಕಿ ಎರಡು ತುಂಡಾಗಿರುವ ಆಟೋ, ಯಮದೂತನಾಗಿ ಬಂದು ಎರಡು ಜೀವಗಳನ್ನು ಬಲಿ ಪಡೆದು ನಿಂತಿರುವ ಕ್ಯಾಂಟರ್. ಆಸ್ಪತ್ರೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ. ಇಷ್ಟೇ ಅಲ್ಲ, ಸಿಸಿಟಿವಿಯಲ್ಲಿ ಸೆರೆಯಾಗಿರುವ ಎದೆ ಝಲ್ಲೆನಿಸುವ ಅಪಘಾತದ ದೃಶ್ಯ. ಇಂಥದ್ದೊಂದು ಭೀಕರ ಅಪಘಾತಕ್ಕೆ ಶನಿವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ (Bengaluru) ಸುಮ್ಮನಹಳ್ಳಿ ಜಂಕ್ಷನ್ ಸಾಕ್ಷಿಯಾಗಿದೆ. ಚಿಕ್ಕಗೊಲ್ಲರಹಟ್ಟಿಯಲ್ಲಿ ವಾಸವಾಗಿದ್ದ ಯೇಸು ಮತ್ತು ಜೆನಿಫರ್ ಎಂಬ ಅಪ್ಪ ಮಗಳು ದುರಂತದಲ್ಲಿ ಮೃತಪಟ್ಟಿದ್ದಾರೆ. ಮುಂದಿನ ತಿಂಗಳು 22 ವರ್ಷದ ಜೆನಿಫರ್​​​ಗೆ ಮದುವೆ ನಿಶ್ಚಿತವಾಗಿತ್ತು. ಹೀಗಾಗಿ ಕ್ರಿಶ್ಚನ್ ಸಂಪ್ರದಾಯದಂತೆ ಇಂದು ಚರ್ಚಿನಲ್ಲಿ ಪ್ರಾರ್ಥನೆ ಸಲ್ಲಿಸಲು ತಂದೆ ಮಗಳಿಬ್ಬರು ತಮ್ಮದೇ ಆಟೋದಲ್ಲಿ ಹೊರಟಿದ್ದರು. ಆದರೆ ಸುಮ್ಮನಹಳ್ಳಿ ಜಂಕ್ಷನ್ ಬಳಿ ಅಂದ್ರೆ ಕಾಮಾಕ್ಷಿ ಪಾಳ್ಯ- ಮಾಗಡಿ ರಸ್ತೆಯಲ್ಲಿ ಇಂಡಸ್ಟ್ರೀಯಲ್ ಏರಿಯಾ ಕಡೆಯಿಂದ ಬಂದ ಕ್ಯಾಂಟರ್ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯಲ್ಲಿ ಹೋಗ್ತಿದ್ದ ಬೈಕ್ ಗೆ ಮೊದಲು ಡಿಕ್ಕಿ ಹೊಡೆದು ನಂತರ ಆಟೋ ಮತ್ತು ಕಾರಿಗೆ ಡಿಕ್ಕಿ ಹೊಡೆದು ಫುಟ್ ಪಾತ್ ತಡೆಗೋಡೆ ಬಳಿ ನಿಂತಿದೆ.

ಕ್ಯಾಂಟರ್ ಕೆಳಗೆ ಸಿಲುಕಿ ಆಟೋ ಅಪ್ಪಚ್ಚಿ ಆಗಿ ಎರಡು ತುಂಡಾಗಿತ್ತು. ತಕ್ಷಣವೇ ಸ್ಥಳೀಯರು ಆಟೋದಲ್ಲಿ ಸಿಲುಕಿದ್ದ ಅಪ್ಪ ಮಗಳನ್ನ ಹರಸಾಹಸದಿಂದ ಹೊರತೆಗೆದರು. ಆದರೆ, ಮದುವೆ ಕನಸು ಕಂಡಿದ್ದ ಅಪ್ಪ ಮಗಳ ಉಸಿರು ಅದಾಗಲೇ ನಿಂತಿತ್ತು.

ಅಪಘಾತದ ಸಿಸಿಟಿವಿ ವಿಡಿಯೋ

ಮತ್ತೊಂದು ಕಾರಿನಲ್ಲಿದ್ದ ವಿಜಯ್ ಎಂಬಾತ ತನ್ನ ಮಗ ಮತ್ತು ಗರ್ಭಿಣಿ ಪತ್ನಿ ಜೊತೆ ಆಸ್ಪತ್ರೆಗೆ ಹೋಗುತ್ತಿದ್ದರು. ಆದರೆ ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ವಿಜಯ್ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ತಕ್ಷಣ ನಾಗಲ್ಯಾಂಡ್ ಮೂಲದ ಕ್ಯಾಂಟರ್ ಚಾಲಕ ಎಸ್ಕೇಪ್ ಆಗಿದ್ದಾನೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಕಾಮಾಕ್ಷಿ ಪಾಳ್ಯ ಸಂಚಾರ ಠಾಣಾ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದರು. ಆಸ್ಪತ್ರೆಯಲ್ಲಿ ಪತಿ ಮತ್ತು ಮಗಳನ್ನ ಕಳೆದುಕೊಂಡ ಮಹಿಳೆ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಹಾಸನ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? ಸ್ಫೋಟಕ ಮಾಹಿತಿ ಬಹಿರಂಗ

ಘಟನಾ ಸ್ಥಳಕ್ಕೆ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭಂವಿಸಿರೋ ಸಾಧ್ಯತೆ ಇದೆ ಎಂದಿದ್ದಾರೆ. ತನಿಖೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ನಡೆದ ಈ ಭೀಕರ ಅಪಘಾತ ಜನರನ್ನು ಬೆಚ್ಚಿಬೀಳಿಸಿದೆ. ಸದ್ಯ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕ್ಯಾಂಟರ್ ಚಾಲಕ ಸಿಕ್ಕಿದ ಬಳಿಕವಷ್ಟೇ ಅಪಘಾತಕ್ಕೆ ನಿಖರ ಕಾರಣ ತಿಳಿಯಲಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Sat, 13 September 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!