AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ

ಬೆಂಗಳೂರಿನ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ 65 ವರ್ಷದ ಮಹಿಳೆ ಮೇಲೆ ಮನೆಕೆಲಸದ ವ್ಯಕ್ತಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ನಂತರ ತಾನೂ ಆತ್ಮಹತ್ಯಗೆ ಶರಣಾಗಿದ್ದಾನೆ. ವಿದೇಶಕ್ಕೆ ತೆರಳಿದ್ದ ಮಹಿಳೆಯ ಪತಿ ಮುಂಜಾನೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಮೈಕೋ ಲೇಔಟ್ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ.

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Feb 01, 2026 | 9:58 PM

Share

ಬೆಂಗಳೂರು, ಫೆಬ್ರವರಿ 1: ಬೆಂಗಳೂರಿನ (Bangalore) ಸಿಲ್ಕ್ ಬೋರ್ಡ್ (Silk Board) ಸಮೀಪದ ಕೆಎಎಸ್ ಕಾಲೋನಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, 65 ವರ್ಷದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಪೈಶಾಚಿಕ ಕೃತ್ಯ ಎಸಗಿದ ಬಳಿಕ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಹಿಳೆ, ಮನೆಗೆಲಸ ಮಾಡುತ್ತಿದ್ದ ದೇವರಾಜು (50) ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಶನಿವಾರ ಮಧ್ಯರಾತ್ರಿ ನಡೆದಿದ್ದು, ಬೆಳಗಿನ ಜಾವ ಸುಮಾರು 4.30ರ ವೇಳೆಗೆ ವಿಚಾರ ಬಹಿರಂಗವಾಗಿದೆ.

ಹತ್ಯೆಯಾದ ಮಹಿಳೆಯ ಪತಿ ಉದ್ಯೋಗ ನಿಮಿತ್ತ ದುಬೈಗೆ ತೆರಳಿದ್ದು, ಮುಂಜಾವ 4.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಮನೆಗೆ ಬಂದು ಬೆಲ್ ಹೊಡೆದಾಗ, ಮೊದಲ ಮಹಡಿಯಲ್ಲಿ ಇದ್ದ 27 ವರ್ಷದ ಮಗಳು ಬಾಗಿಲು ತೆರೆದು ತನ್ನ ಕೋಣೆಗೆ ತೆರಳಿದ್ದಾಳೆ. ಬಳಿಕ ಪತಿ ಕೆಳ ಮಹಡಿಯ ಕೋಣೆಗೆ ತೆರಳಿದಾಗ  ಭೀಕರ ಘಟನೆ ಬೆಳಕಿಗೆ ಬಂದಿದೆ.

ಘಟನೆ ನಡೆದ ಸಮಯದಲ್ಲೇ ಮನೆಯ ಮೊದಲ ಮಹಡಿಯಲ್ಲಿ ಮಗಳು ಇದ್ದರೂ, ಕೆಳ ಮಹಡಿಯಲ್ಲಿ ನಡೆದ ದುಷ್ಕೃತ್ಯದ ಬಗ್ಗೆ ಆಕೆಗೆ ಅರಿವಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದೇವರಾಜು ಕೃತ್ಯ ಎಸಗಿ ಬಳಿಕ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮಾಹಿತಿ ಪಡೆದ ಮೈಕೋ ಲೇಔಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ!

ನಗರದಲ್ಲಿ ವೃದ್ಧ ಮಹಿಳೆಯರ ಮೇಲೂ ಇಂತಹ ಕ್ರೂರ ಕೃತ್ಯಗಳು ನಡೆಯುತ್ತಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 am, Sun, 1 February 26

Follow Us
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ