AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಪ್ರಕರಣಗಳನ್ನು ತಕ್ಷಣ ವರದಿ ಮಾಡಬೇಕು; ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಸಗಿ ಆಸ್ಪತ್ರೆಗಳಿಗೆ ಪೋಕ್ಸೋ ಕಾಯ್ದೆಯಡಿ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಕಡ್ಡಾಯವಾಗಿ ವರದಿ ಮಾಡುವಂತೆ ಸೂಚಿಸಿದೆ. ಪೊಲೀಸರಿಗೆ ಅಥವಾ ವಿಶೇಷ ಕಿಶೋರ ಪೊಲೀಸ್ ಘಟಕಕ್ಕೆ ತಕ್ಷಣ ಮಾಹಿತಿ ನೀಡಬೇಕು. ನಿಯಮ ಪಾಲಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ. ಮಕ್ಕಳ ರಕ್ಷಣೆಯಲ್ಲಿ ಆಸ್ಪತ್ರೆಗಳ ಜವಾಬ್ದಾರಿ ಹೆಚ್ಚಿಸಲು ಇದು ಮಹತ್ವದ ಹೆಜ್ಜೆಯಾಗಿದೆ.

ಪೋಕ್ಸೋ ಪ್ರಕರಣಗಳನ್ನು ತಕ್ಷಣ ವರದಿ ಮಾಡಬೇಕು; ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ!
ಪೋಕ್ಸೋ ಪ್ರಕರಣಗಳನ್ನು ತಕ್ಷಣ ವರದಿ ಮಾಡಬೇಕು; ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ! Image Credit source: google
ಭಾವನಾ ಹೆಗಡೆ
|

Updated on: Apr 04, 2026 | 9:54 AM

Share

ಬೆಂಗಳೂರು, ಏಪ್ರಿಲ್ 04: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಸಗಿ ಆಸ್ಪತ್ರೆಗಳಿಗಾಗಿ ಮಹತ್ವದ ನಿರ್ದೇಶನ ಹೊರಡಿಸಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೋಕ್ಸೋ ಕಾಯ್ದೆ 2012ರಡಿ (POCSO Act) ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪತ್ತೆಯಾದಾಗ ಖಾಸಗಿ ಆಸ್ಪತ್ರೆಗಳು ತಕ್ಷಣವೇ ಪೊಲೀಸ್ ಇಲಾಖೆ ಅಥವಾ ವಿಶೇಷ ಕಿಶೋರ ಪೊಲೀಸ್ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಇಲಾಖೆಯು ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ಆಸ್ಪತ್ರೆಗಳಿಗೆ ಮೊದಲು ತಿಳಿಯುವುದರಿಂದ ತಕ್ಷಣದ ಕ್ರಮ ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.ಸಂಕಷ್ಟದಲ್ಲಿರುವ ಮಕ್ಕಳಿಗೆ ನೆರವಾಗಲು ಚೈಲ್ಡ್‌ಲೈನ್ 1098 ಸೇವೆಯನ್ನು ಬಳಸಬಹುದಾಗಿದೆ.

ನಿಯಮ ಪಾಲಿಸದಿದ್ದರೆ ಆಸ್ಪತ್ರೆ ವಿರುದ್ಧ ಕ್ರಮ

ಈ ನಿಯಮಗಳನ್ನು ಪಾಲಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ಪ್ರಕರಣಗಳನ್ನು ಮರೆಮಾಚುವುದು ಅಥವಾ ವರದಿ ಮಾಡಲು ವಿಳಂಬ ಮಾಡುವುದು ತನಿಖೆಗೆ ಅಡ್ಡಿಯಾಗುವುದಲ್ಲದೆ, ಸಂತ್ರಸ್ತರ ಸುರಕ್ಷತೆಗೂ ಅಡ್ಡಿಯಾಗುತ್ತದೆ.

ಇದನ್ನೂ ಓದಿ ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ: ಆತನಿಗೆ ಮೊಬೈಲ್ ಕೊಟ್ಟವರು ಯಾರು?

ಇದಲ್ಲದೆ, ಆಸ್ಪತ್ರೆಗಳು ತಮ್ಮ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವಂತೆ ಹಾಗೂ ಇಂತಹ ಪ್ರಕರಣಗಳನ್ನು ನಿಭಾಯಿಸುವಲ್ಲಿ ಸರಿಯಾದ ಕ್ರಮಗಳನ್ನು ಅನುಸರಿಸುವಂತೆಯೂ ಸೂಚಿಸಲಾಗಿದೆ. ಈ ಕ್ರಮದ ಮೂಲಕ ಮಕ್ಕಳ ರಕ್ಷಣೆಯಲ್ಲಿ ಖಾಸಗಿ ಆಸ್ಪತ್ರೆಗಳ ಜವಾಬ್ದಾರಿಯನ್ನು ಹೆಚ್ಚಿಸುವುದೇ ಸರ್ಕಾರದ ಉದ್ದೇಶವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ