AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಕೊರತೆ: ತೇಜಸ್ವಿ ಸೂರ್ಯ ಮಧ್ಯ ಪ್ರವೇಶ!

ಬೆಂಗಳೂರಿನಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮ ಆತಂಕದಲ್ಲಿದೆ. ಹಲವು ಹೋಟೆಲ್‌ಗಳು ಮುಚ್ಚುವ ಭೀತಿ ಎದುರಿಸುತ್ತಿವೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಸಂಸದ ತೇಜಸ್ವಿ ಸೂರ್ಯ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದಿದ್ದಾರೆ. LPG ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಕೊರತೆ: ತೇಜಸ್ವಿ ಸೂರ್ಯ ಮಧ್ಯ ಪ್ರವೇಶ!
ಬೆಂಗಳೂರಿನಲ್ಲಿ ಎಲ್‌ಲ್ಪಿಜಿ ಸಿಲಿಂಡರ್ ಕೊರತೆ; ಕೇಂದ್ರಕ್ಕೆ ಪತ್ರ ಬರೆದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ
ಕಿರಣ್​ ಹನಿಯಡ್ಕ
| Edited By: |

Updated on:Mar 10, 2026 | 12:19 PM

Share

ಬೆಂಗಳೂರು, ಮಾರ್ಚ್​ 10: ನಗರದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್  (LPG Cylinder Shortage) ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಹೋಟೆಲ್  ಉದ್ಯಮದಲ್ಲಿ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆ ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ಹೆಚ್ಚಿದ್ದು, ಈ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮನವಿ ಸಲ್ಲಿಸಿದೆ. ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ಹೋಟೆಲ್ ಉದ್ಯಮದ ಗೋಳು ಬಿಚ್ಚಿಟ್ಟ ಸೂರ್ಯ

ಹೋಟೆಲ್ ಹಾಗೂ ಆತಿಥ್ಯ ಕ್ಷೇತ್ರಕ್ಕೆ ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸುವಂತೆ ಮನವಿ ಮಾಡಿ ಟ್ವೀಟ್ ಮಾಡಿರುವ ಸಂಸದ ಸೂರ್ಯ, ಹೋಟೆಲ್ ಮತ್ತು ರೆಸ್ಟೋರೆಂಟ್ ಕ್ಷೇತ್ರವು ದಿನನಿತ್ಯದ ಅಡುಗೆ ಕಾರ್ಯಗಳಿಗೆ ಬಹುಪಾಲು ವಾಣಿಜ್ಯ ಎಲ್‌ಪಿಜಿ ಮೇಲೆಯೇ ಅವಲಂಬಿತವಾಗಿದೆ. ಪಿಎನ್‌ಜಿ ಸಂಪರ್ಕ ಅಥವಾ ವಿದ್ಯುತ್ ಆಧಾರಿತ ಅಡುಗೆ ವ್ಯವಸ್ಥೆಗಳು ಇನ್ನೂ ವ್ಯಾಪಕವಾಗಿ ಲಭ್ಯವಿಲ್ಲದ ಕಾರಣ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಹೋಟೆಲ್ ಉದ್ಯಮ, ಉದ್ಯೋಗ ಹಾಗೂ ಗ್ರಾಹಕರ ಸೇವೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹರಿದೀಪ್ ಸಿಂಗ್​ರನ್ನು ಭೇಟಿ ಮಾಡಲಿರುವ ಸಚಿವೆ

ಇನ್ನೂ ಸಚಿವೆ ಶೋಭಾ ಕರಂದ್ಲಾಜೆ ಕೂಡ ಈ ವಿಷಯವನ್ನು ಸಚಿವ ಹರಿದೀಪ್ ಸಿಂಗ್ ಪುರಿ ಅವರ ಗಮನಕ್ಕೆ ತಂದಿದ್ದಾರೆ. ಬೆಂಗಳೂರಿನ ಹೋಟೆಲ್ ಅಸೋಸಿಯೇಷನ್ ಎದುರಿಸುತ್ತಿರುವ ಸಮಸ್ಯೆಯ ಕುರಿತು ಅವರು ಪತ್ರ ಬರೆದು ಮನವಿ ಮಾಡಿದ್ದಾರೆ. ಅಸೋಸಿಯೇಷನ್ ನೀಡಿದ ಮನವಿ ಪತ್ರವನ್ನೂ ಸಚಿವರಿಗೆ ರವಾನಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್​ಗಳು​​ ಬಂದ್​​​ ಸಾಧ್ಯತೆ: ಮಾಲೀಕರ ಸಂಘ ಹೇಳಿದ್ದೇನು ನೋಡಿ

ಅಲ್ಲದೆ ಇಂದು (ಮಾರ್ಚ್​ 10) ಸಚಿವ ಹರಿದೀಪ್ ಸಿಂಗ್ ಪುರಿ ಅವರನ್ನು ನೇರವಾಗಿ ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಮಾರ್ಗಗಳ ಕುರಿತು ಚರ್ಚೆ ನಡೆಸುವುದಾಗಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಹೋಟೆಲ್ ಉದ್ಯಮಕ್ಕೆ ಯಾವುದೇ ವ್ಯತ್ಯಯವಾಗದಂತೆ ಎಲ್‌ಪಿಜಿ ಪೂರೈಕೆ ಮುಂದುವರಿಯಬೇಕು ಎಂಬುದು ಉದ್ಯಮಿಗಳ ಒತ್ತಾಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:47 am, Tue, 10 March 26

Follow Us
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!