AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ವಾತಂತ್ರ್ಯ ಸಮಾರಂಭಕ್ಕೆ ಹೇಗಿರಲಿದೆ ಭದ್ರತೆ? ಪೊಲೀಸ್ ಆಯುಕ್ತರಿಂದ ಬಿಗ್ ಅಪ್​ಡೇಟ್

ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿಯೂ ಸ್ವಾತಂತ್ರ್ಯೋತ್ಸವ ಆಚರಣೆಗೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ, ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಸಿಲಿಕಾನ್ ಸಿಟಿಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬೆಂಗಳೂರಿನಲ್ಲಿ ಕೈಗೊಳ್ಳಲಾಗಿರುವ ಭದ್ರತಾ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಸ್ವಾತಂತ್ರ್ಯ ಸಮಾರಂಭಕ್ಕೆ ಹೇಗಿರಲಿದೆ ಭದ್ರತೆ? ಪೊಲೀಸ್ ಆಯುಕ್ತರಿಂದ ಬಿಗ್ ಅಪ್​ಡೇಟ್
ಬೆಂಗಳೂರು: ಸ್ವಾತಂತ್ರ್ಯ ಸಮಾರಂಭಕ್ಕೆ ಬಿಗಿ ಭದ್ರತೆ
Jagadisha B
| Edited By: |

Updated on: Aug 13, 2024 | 11:36 AM

Share

ಬೆಂಗಳೂರು, ಆಗಸ್ಟ್ 13: ಸ್ವಾತಂತ್ರ್ಯೋತ್ಸವ ಸಮಾರಂಭ ಆಚರಣೆಗೆ ಬೆಂಗಳೂರು ನಗರದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ. ಭದ್ರತೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಹತ್ವದ ಮಾಹಿತಿ ನೀಡಿದ್ದಾರೆ. ಸಿದ್ಧತೆ ಮತ್ತು ಭದ್ರತೆಗೆ ಸಂಬಂಧಿಸಿದ ಮಾಹಿತಿ ನೀಡಿದ ಅವರು, ಮಾಣೆಕ್​ ಷಾ ಪರೇಡ್ ಗ್ರೌಂಡ್​​ನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಿಹರ್ಸಲ್‌ ಕಾರ್ಯಕ್ರಮ ಮಾಡಲಾಗಿದೆ. ಕಾರ್ಯಕ್ರಮ ಹಿನ್ನೆಲೆ 15ದಿನಗಳಿಂದ ಕಟ್ಟೆಚ್ಚರವಹಿಸಲಾಗಿದೆ ಎಂದರು.

ಪರೇಡ್ ಮೈದಾನದ ಸುತ್ತ ಕಟ್ಟೆಚ್ಚರ: ನೂರಾರು ಸಿಬ್ಬಂದಿ ಕಣ್ಗಾವಲು

15ನೇ ತಾರೀಖಿನಂದು ನಡೆಯಲಿರುವ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ ವಹಿಸಲಾಗಿದೆ. 10 ಡಿಸಿಪಿ, 17 ಎಸಿಪಿ, 42 ಇನ್ಸ್​​​ಪೆಕ್ಟರ್, 112 ಪಿಎಸ್ಐ, 62 ಎಎಸ್ಐ, 511 ಕಾನ್ಸ್​​​ಟೇಬಲ್​​ಗಳು, 72 ಮಹಿಳಾ ಸಿಬ್ಬಂದಿ ನೇಮಕ ಮಾಡಲಾಗಿದೆ. 129 ಮಂದಿ ಮಫ್ತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿ ದಯಾನಂದ ಮಾಹಿತಿ ನೀಡಿದ್ದಾರೆ.

ಸಿಸಿಟಿವಿ ಪರಿಶೀಲನೆ ಮಾಡುವುದಕ್ಕೆಂದೇ 27 ಸಿಬ್ಬಂದಿಯ ನೇಮಕ ಮಾಡಲಾಗಿದೆ. ಹೆಚ್ಚುವರಿಯಾಗಿ ಹತ್ತು ಕೆಎಸ್ಆರ್​ಪಿ ತುಕಡಿ ನಿಯೋಜನೆ‌ ಮಾಡಲಾಗಿದೆ. ಸಂಚಾರ ನಿರ್ವಹಣೆ ವಿಚಾರವಾಗಿಯೂ ಪೊಲೀಸ್ ಅಧಿಕಾರಿಗಳ‌ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಹೆಬ್ಬಾಳ ಫ್ಲೈಓವರ್​ ಮೇಲೆ ಸರಣಿ ಅಪಘಾತ; ಬಿಎಂಟಿಸಿ ಬಸ್​ ಚಾಲಕನ ಯಡವಟ್ಟಿನಿಂದ ಘೋರ ದುರಂತ, ವಿಡಿಯೋ ನೋಡಿ

3 ಜನ ಡಿಸಿಪಿ, 6 ಜನ ಎಸಿಪಿ, 19 ಜನ ಇನ್ಸ್​ಪೆಕ್ಟರ್, 32 ಪಿಎಸ್ಐ, 111 ಎಎಸ್ಐ ಹಾಗೂ 430 ಕಾನ್ಸಟೇಬಲ್​​​ಗಳು ಸೇರಿದಂತೆ ನೂರಾರು ಸಿಬ್ಬಂದಿ‌ಯನ್ನು ಮೈದಾನದ ಸುತ್ತಮುತ್ತ ಟ್ರಾಫಿಕ್ ಕಂಟ್ರೋಲ್‌ಗೆ ನೇಮಕ‌ ಮಾಡಲಾಗಿದೆ. ಪ್ರತಿ ಗೇಟ್​​ನಲ್ಲೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಾರೆ. ಅನುಮಾನ ಬಂದರೆ ಅಂತಹ ವ್ಯಕ್ತಿಗಳನ್ನು ವಶಪಡೆಯಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Bengaluru: How will be the security for the independence ceremony? Big update from Police Commissioner, Kannada news

ಯಾವೆಲ್ಲ ವಸ್ತುಗಳಿಗೆ ನಿಷೇಧ?

ಸಿಗರೇಟ್, ಬೆಂಕಿಪೊಟ್ಟಣ, ಕಪ್ಪು ಕರ ವಸ್ತುಗಳು, ಚೂಪಾದ ವಸ್ತುಗಳು, ಕ್ಯಾಮರಾಗಳಿಗೆ ಅವಕಾಶ ಇಲ್ಲ. ಮೈದಾನದ ಒಳಗೆ ಬಿಡುವ ಮುನ್ನ ಎಲ್ಲವನ್ನೂ ಪರಿಶೀಲನೆ ಮಾಡಲಾಗುತ್ತದೆ ಎಂದು ದಯಾನಂದ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ