AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಸಮಯಪ್ರಜ್ಞೆಯಿಂದ ಬೆಂಗಳೂರಿನಲ್ಲಿ ತಪ್ಪಿದ ಭಾರೀ ದೊಡ್ಡ ದುರಂತ

ಬೆಂಗಳೂರಿನ ಅಕ್ಷಯನಗರದ ಹುಳಿಮಾವು ಪ್ರದೇಶದಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ನಡೆಸಲಾಗುತ್ತಿತ್ತು. ಪೊಲೀಸರ ಸಮಯಪ್ರಜ್ಞೆಯಿಂದ 15 ಜಿಲೆಟಿನ್ ಕಡ್ಡಿಗಳು ಹಾಗೂ 30 ಡಿಟೋನೇಟರ್‌ಗಳನ್ನು ಜಪ್ತಿ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲಿ ನಡೆಯುತ್ತಿದ್ದ ಈ ಘಟನೆಯಿಂದ ದೊಡ್ಡ ದುರಂತ ತಪ್ಪಿದೆ. ಸೈಟ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಾಂಬ್ ಸ್ಕ್ವಾಡ್ ತನಿಖೆ ನಡೆಸುತ್ತಿದೆ.

ಪೊಲೀಸರ ಸಮಯಪ್ರಜ್ಞೆಯಿಂದ ಬೆಂಗಳೂರಿನಲ್ಲಿ ತಪ್ಪಿದ ಭಾರೀ ದೊಡ್ಡ ದುರಂತ
ಹುಳಿಮಾವು ಪ್ರದೇಶದಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ
TV9 Web
| Edited By: |

Updated on: Feb 03, 2026 | 8:19 PM

Share

ಬೆಂಗಳೂರು, ಫೆ.3: ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ಈ ಬಗ್ಗೆ ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ಈ ಘಟನೆ ನಡೆದಿದೆ. ಚಂದ್ರು ಎಂಬುವವರ ಮಾಲೀಕತ್ವದ 100×100 ಅಳತೆಯ ಸೈಟ್‌ನಲ್ಲಿ ಬಂಡೆ ಒಡೆಯಲು ಅನುಮತಿ ಇಲ್ಲದೆ ಜಿಲೆಟಿನ್ ಕಡ್ಡಿಗಳನ್ನು (Bengaluru explosives seizure) ಬಳಸಲಾಗುತ್ತಿತ್ತು. ಮಧ್ಯಾಹ್ನ 10:30 ರಿಂದ 2 ಗಂಟೆಯ ಅವಧಿಯಲ್ಲಿ ಜನನಿಬಿಡ ಪ್ರದೇಶದಲ್ಲೇ ಈ ಸ್ಫೋಟ ನಡೆಸಲಾಗುತ್ತಿತ್ತು. ವಿಷಯ ತಿಳಿದ ತಕ್ಷಣ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳದಿಂದ 15 ಜಿಲೆಟಿನ್ ಕಡ್ಡಿಗಳು ಮತ್ತು 30 ಡಿಟೋನೇಟರ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನಾ ಸ್ಥಳದಲ್ಲಿದ್ದ ಒಂದು ಟ್ರ್ಯಾಕ್ಟರ್ ಮತ್ತು ಜೆಸಿಬಿಯನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರೆಲ್ಲರೂ ಪರಾರಿಯಾಗಿದ್ದಾರೆ. ಹುಳಿಮಾವು ಪೊಲೀಸರ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದೆ.

ಇದನ್ನೂ ಓದಿ: ಕಟ್ಟಡ ಮಾಲೀಕರಿಗೆ ಬಿಗ್​​ ಶಾಕ್ ನೀಡಿದ GBA: 437 ಕೋಟಿ ರೂ. ತೆರಿಗೆ ಬಾಕಿ

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಬಾಂಬ್ ಸ್ಕ್ವಾಡ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸೈಟ್ ಮಾಲೀಕ ಚಂದ್ರು ಎಂಬುವವರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರವಾಗಿ ಸ್ಫೋಟಕಗಳನ್ನು ಸಂಗ್ರಹಿಸಿ ಬಳಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಜನನಿಬಿಡ ಪ್ರದೇಶದಲ್ಲಿ ಯಾವುದೇ ಮುನ್ನೆಚ್ಚರಿಕೆ ಹಾಗೂ ಪರವಾನಗಿ ಇಲ್ಲದೆ ಅಪಾಯಕಾರಿ ಸ್ಫೋಟಕಗಳನ್ನು ಬಳಸಿದ್ದಕ್ಕಾಗಿ ಸೈಟ್ ಮಾಲೀಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಬಾಂಬ್ ಸ್ಕ್ವಾಡ್ ಪರಿಶೀಲನೆಯ ನಂತರ ಸ್ಫೋಟಕಗಳ ಮೂಲದ ಬಗ್ಗೆ ವರದಿ ಸಲ್ಲಿಕೆಯಾಗಲಿದ್ದು, ಅದರ ಆಧಾರದ ಮೇಲೆ ನ್ಯಾಯಾಲಯದ ವಿಚಾರಣೆ ಮುಂದುವರಿಯಲಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ