Bengaluru: ಚೀಟಿ ಹೆಸರಲ್ಲಿ ಕೋಟ್ಯಾಂತರ ರೂ. ಚೀಟಿಂಗ್ ಆರೋಪ; ಗಂಡ ಹೆಂಡತಿ ಅರೆಸ್ಟ್

​ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಗಂಡ ಹೆಂಡತಿ ಸೇರಿ ಚೀಟಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದು, ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Bengaluru: ಚೀಟಿ ಹೆಸರಲ್ಲಿ ಕೋಟ್ಯಾಂತರ ರೂ. ಚೀಟಿಂಗ್ ಆರೋಪ; ಗಂಡ ಹೆಂಡತಿ ಅರೆಸ್ಟ್
ಆರೋಪಿಗಳು
Follow us
Vinayak Hanamant Gurav
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 01, 2023 | 8:08 AM

ಬೆಂಗಳೂರು: ಚೀಟಿ ಕಟ್ಟಿಸಿಕೊಂಡು ಕೋಟ್ಯಾಂತರ ರೂಪಾಯಿ ವಂಚಿಸಿದ ಘಟನೆ ಬೆಂಗಳೂರಿ(Bengaluru)ನ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಪುಣ್ಯ ಹಾಗೂ ಚಂದ್ರಶೇಖರ್ ಎಂಬ ದಂಪತಿಗಳು ಸ್ವಂತ ಮನೆ ತೋರಿಸಿ, ಸುಮಾರು 1.5 ಕೋಟಿಗೂ ಹೆಚ್ಚು ಹಣ ಚೀಟಿ ಹಾಕಿಸಿಕೊಂಡು ಹಲವರಿಗೆ ವಂಚಿಸಿದ್ದು, ಈ ಕುರಿತು ದಂಪತಿ ವಿರುದ್ದ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ 6ಗಂಟೆಗಳ ಬಳಿಕ ಸತತ ಪ್ರಯತ್ನದೊಂದಿಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಡೇಟ್ ಎಕ್ಸಪೈರ್​ ಆಗಿದ್ದ ಪದಾರ್ಥಗಳನ್ನು ಶೇಕರಿಸಿಟ್ಟಿದ್ದ ಗೋದಾಮು ಪತ್ತೆ

ಬೆಂಗಳೂರು: ಡೇಟ್ ಎಕ್ಸಪೈರ್ ಆಗಿದ್ದ ಪದಾರ್ಥಗಳ ಮಾರಾಟ ಮಾಡುತ್ತಿದ್ದ ಹಾಗೂ ದಾಸ್ತಾನು ಮಾಡಿದ್ದ ಗೋದಾಮು ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಹರಿಹಂತ್ ಟ್ರೇಡಿಂಗ್ ಕಂಪನಿಯ ಹೆಸರಲ್ಲಿ ಶೇಖರಣೆ ಮಾಡಲಾಗಿದ್ದು, ಚಂದ್ರಪ್ರಕಾಶ್ ಎಂಬುವವರ ಹೆಸರಿನಲ್ಲಿ ಕಂಪನಿಯಿದೆ. ಇಲ್ಲಿ ಪ್ರತಿಷ್ಠಿತ ಕಂಪನಿಗಳ ಬಿಸ್ಕತ್ತು, ಚಾಕಲೇಟ್, ಚಾಕಲೇಟ್ ಪೌಡರ್, ಅಡುಗೆ ಎಣ್ಣೆ, ಡಾಲ್ಡಾ, ತುಪ್ಪ , ರವೆ, ಸೇರಿ ಹಲವಾರು ವಸ್ತುಗಳನ್ನು ಬಳಕೆ ಮಾಡಲು ಯೋಗ್ಯವಲ್ಲದ ಸ್ಥಿತಿಯಲ್ಲಿ ದಾಸ್ತಾನು ಮಾಡಿಡಲಾಗಿದೆ.

ಇದನ್ನೂ ಓದಿ:Kalaburagi: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚನೆ; ಕೊಟ್ಟ ದುಡ್ಡು ವಾಪಾಸ್​ ಕೇಳಲು ಬಂದಾಕೆಯನ್ನೇ ಕಿಡ್ನಾಪ್​ಗೆ​ ಯತ್ನ

ಅಂಗಡಿಯೊಂದರಲ್ಲಿ ಸಿಕ್ಕ ಬಿಸ್ಕೆಟ್ ಮೂಲ ಹುಡುಕಿದ ಸಿಸಿಬಿ, ಫೂಡ್ ಸೇಫ್ಟಿ ಡಿಪಾರ್ಟ್‌ಮೆಂಟ್

ಇನ್ನು ಅಂಗಡಿಯೊಂದರಲ್ಲಿ ಸಿಕ್ಕ ಬಿಸ್ಕೆಟ್​ಯಿಂದ ಅವಧಿ ಮುಗಿದ ವಸ್ತುಗಳನ್ನು ಮತ್ತೆ ಸ್ಟೋರ್ ಮಾಡಿ ಬಳಿಕ ಮತ್ತೆ ರೀ ಪ್ರೊಡಕ್ಷನ್ ಮಾಡುತ್ತಿರುವ ಬಗ್ಗೆ ಅನುಮಾನ ಬಂದ ಹಿನ್ನಲೆ ಅದರ ಮೂಲವನ್ನ ಸಿಸಿಬಿ ಮತ್ತು ಫುಡ್ ಸೇಫ್ಟಿ ಡಿಪಾರ್ಟ್‌ಮೆಂಟ್ ಅಧಿಕಾರಿಗಳು ಹುಡುಕಿಕೊಂಡು ಬಂದಿದ್ದರು. ಈ ವೇಳೆ ಗೋದಾಮಿನೊಳಗೆ ಪರಿಶೀಲನೆ ನಡೆಸಿದ್ದಾರೆ. ಅಲ್ಲಿರುವ ಡೇಟ್ ಎಕ್ಸಪೈರ್ ಫುಡ್​ ಬಗ್ಗೆ ವಿಚಾರಿಸಿದಾಗ ‘ಇದೆಲ್ಲಾ ಪ್ರಾಣಿಗಳ ಆಹಾರ ತಯಾರಿಕೆಗೆ ಬಳಸುತ್ತೆವೆ ಎಂದು ಗೋದಾಮು ಮಾಲಿಕ ಮಾಹಿತಿ ನೀಡಿದ್ದಾರೆ. ಸದ್ಯ ಎಲ್ಲ ಸ್ಯಾಂಪಲ್​ಗಳನ್ನು ಪಡೆದು ಎಫ್​ಎಸ್​ ಎಲ್​ಗೆ ಫುಡ್ ಸೇಫ್ಟಿ ಅಧಿಕಾರಿಗಳು ಕಳಿಸಿದ್ದು, ಲ್ಯಾಬ್ ವರದಿ ಬಂದ ಬಳಿಕ ಅಸಲಿಯತ್ತು ಬಯಲಾಗಲಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 am, Sat, 1 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ