Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್‌, ಐಪಿಎಸ್‌ ಮಹಿಳಾ ಅಧಿಕಾರಿಗಳಿಬ್ಬರ ವಾರ್‌ ಮಧ್ಯ ಡಿ.ಕೆ.ರವಿ ಪತ್ನಿ ಎಂಟ್ರಿ, ಕುತೂಹಲ ಮೂಡಿಸಿದ ಕುಸುಮಾ ಟ್ವೀಟ್​

ಐಎಎಸ್‌, ಐಪಿಎಸ್‌ ಮಹಿಳಾ ಅಧಿಕಾರಿಗಳಿಬ್ಬರ ಯುದ್ಧ ತಾರಕಕ್ಕೇರುತ್ತಿದೆ. ಒಂದು ಕಡೆಯಿಂದ ರೂಪಾ ಅವರು ಆರೋಪಗಳನ್ನು ಮಾಡುತ್ತಿದ್ದರೆ ಇದಕ್ಕೆ ರೋಹಿಣಿ ಸಿಂಧೂರಿ ತಿರುಗೇಟು ನೀಡಲು ಆರಂಭಿಸಿದ್ದಾರೆ. ಈ ನಡುವೆ ಡಿ.ಕೆ.ರವಿ ಪತ್ನಿ ಎಂಟ್ರಿಕೊಟ್ಟಿದ್ದು, ಇವರು ಮಾಡಿದ ಒಂದು ಟ್ವೀಟ್ ಭಾರೀ ಕುತೂಲಹ ಮೂಡಿಸಿದೆ.

ಐಎಎಸ್‌, ಐಪಿಎಸ್‌ ಮಹಿಳಾ ಅಧಿಕಾರಿಗಳಿಬ್ಬರ ವಾರ್‌ ಮಧ್ಯ ಡಿ.ಕೆ.ರವಿ ಪತ್ನಿ ಎಂಟ್ರಿ, ಕುತೂಹಲ ಮೂಡಿಸಿದ ಕುಸುಮಾ ಟ್ವೀಟ್​
ಡಿ.ಕೆ.ರವಿ ಪತ್ನಿ ಕುಸುಮಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ
Follow us
TV9 Web
| Updated By: Rakesh Nayak Manchi

Updated on:Feb 19, 2023 | 5:29 PM

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ (D.Roopa) ಅವರ ನಡುವಿನ ವಾಕ್ಸಮರ ತಾರಕಕ್ಕೇರುತ್ತಿದೆ. ರೋಹಿಣಿ ವಿರುದ್ಧ ಸಮರ ಸಾರಿರುವ ರೂಪಾ ಅವರು ಆರೋಪಗಳ ಪಟ್ಟಿಯನ್ನೇ ತೆರೆದಿಡುತ್ತಿದ್ದಾರೆ. ಇಷ್ಟಾಗಿಯೂ ಮೌನವಾಗಿದ್ದ ರೋಹಿಣಿ ಸಿಂಧೂರಿ, ಇದೀಗ ಮೌನ ಮುರಿದ ರೂಪಾ ಅವರ ಆರೋಪಗಳಿಗೆ ತಿರುಗೇಟು ನೀಡಲು ಆರಂಭಿಸಿದ್ದಾರೆ. ಈ ನಡುವೆ ದಿವಂಗತ ಐಎಎಸ್​​ ಅಧಿಕಾರಿ ಡಿ.ಕೆ.ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ (Kusuma Hanumantharayappa) ಅವರು ಎಂಟ್ರಿ ಕೊಟ್ಟಿದ್ದು, ಇವರು ಮಾಡಿದ ಒಂದು ಟ್ವೀಟ್ ಭಾರೀ ಕುತೂಹಲ ಮೂಡಿಸಿದೆ. ಇನ್ನು ಈ ಟ್ವೀಟ್​​ಗೆ ರೂಪಾ ಕೂಡ ರೀಟ್ವೀಟ್ ಮಾಡಿದ್ದು, ದೇವರು “ಅವಳಿಗೆ” ಅನುಭೂತಿಯನ್ನು ನೀಡಲಿ ಮತ್ತು ಸದ್ಬುದ್ಧಿಯನ್ನು ಪುನರಾವರ್ತಿಸಲಿ ಎಂದು ಹೇಳಿದ್ದಾರೆ.

ಐಎಎಸ್-ಐಪಿಎಸ್ ಮಹಿಳಾ ಅಧಿಕಾರಿಗಳ ನಡುವಿನ ವಾರ್ ನಡುವೆ ಟ್ವೀಟ್ ಮಾಡಿದ ಕುಸುಮಾ ಹನುಮಂತರಾಯಪ್ಪ, “ಯಾವುದೇ ಕಾರಣಕ್ಕೂ ತಾವು ಮಾಡಿದ ಕರ್ಮ ಬಿಡುವುದಿಲ್ಲ. ನಿಧಾನವಾಗಿ ಅಥವಾ ಬೇಗವಾದರೂ ಕರ್ಮ ನಿಮ್ಮನ್ನು ಬಿಡಲ್ಲ” ಎಂದು ರೋಹಿಣಿ ಸಿಂಧೂರಿ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಕುಸುಮಾರ ಪತಿ ಡಿ.ಕೆ.ರವಿ ಅವರ ಸಾವಿನ ಹಿಂದೆ ರೋಹಿಣಿ ಸಿಂಧೂರಿ ಹೆಸರು ಕೇಳಿಬಂದಿತ್ತು. ಇಬ್ಬರ ನಡುವೆ ಸಂಬಂಧ ಇತ್ತು ಎಂಬ ಆರೋಪಗಳು ಕೇಳಿಬಂದಿದ್ದವು.

ಕುಸುಮಾ ಟ್ವೀಟ್​ಗೆ ರೂಪಾ ರೀಟ್ವೀಟ್

ಇನ್ನು ಕುಸುಮಾ ಟ್ವೀಟ್ ನೋಡಿದ ರೂಪಾ ಅವರು ರೀಟ್ವೀಟ್ ಮಾಡಿದ್ದು, “ಕುಸುಮಾ, ಒಬ್ಬ ಮಹಿಳೆಯಾಗಿ ನಿಮ್ಮ ನೋವನ್ನು ನಾನು ಅರ್ಥಮಾಡಿಕೊಂಡಿದ್ದೇನೆ ಮತ್ತು ಇತರ ಅನೇಕ ಮಹಿಳೆಯರ ನೋವು (ಅವರಲ್ಲಿ ಕೆಲವರು ಐಎಎಸ್​ನಲ್ಲಿದ್ದಾರೆ), ಆದರೂ ಅಸಹಾಯಕರಾಗಿದ್ದಾರೆ. ಆದರೆ ಅಂತಿಮವಾಗಿ, ಯಾರಾದರೂ ಅಪರಾಧಿಯ ವಿರುದ್ಧ ನಿಲ್ಲಬೇಕು (ಅವಳು ಮಹಿಳೆಯಾಗಿದ್ದರೂ ಸಹ). ದೇವರು “ಅವಳಿಗೆ” ಅನುಭೂತಿಯನ್ನು ನೀಡಲಿ ಮತ್ತು ಸದ್ಬುದ್ಧಿಯನ್ನು ಪುನರಾವರ್ತಿಸಲಿ” ಎಂದಿದ್ದಾರೆ.

ಡಿಕೆ Ravi ias, ಸಂಭಾವಿತ ವ್ಯಕ್ತಿ. ಸಿಬಿಐ ರಿಪೋರ್ಟ್ ನಲ್ಲಿ ಅವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ limit cross ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ(ರೋಹಿಣಿ ಸಿಂಧೂರಿ). ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ ಎಂದು ರೂಪಾ ಅವರು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Sun, 19 February 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು