AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೆಚ್ಚಿದ ಬೀದಿ ನಾಯಿ ಕಾಟ, ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳ

ಬೆಂಗಳೂರು ಜನರಿಗೆ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಆತಂಕ ತಂದಿಟ್ಟಿದೆ. ರಾಜಧಾನಿಯ ಗಲ್ಲಿ ಗಲ್ಲಿಯಲ್ಲೂ ನಾಯಿ ಕಾಟ ಹೆಚ್ಚಾಗಿದ್ದು, ಮನೆಯಿಂದ ಆಚೆ ಬರುವುದಕ್ಕೂ ಹೆದರುವ ಸ್ಥಿತಿ ನಿರ್ಮಾಣವಾಗಿದೆ. ಅತ್ತ ಆಸ್ಪತ್ರೆಗಳಲ್ಲಿ ನಾಯಿ ಕಚ್ಚಿ ಚಿಕಿತ್ಸೆಗೆ ಬಂದವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ.

ಬೆಂಗಳೂರು: ಹೆಚ್ಚಿದ ಬೀದಿ ನಾಯಿ ಕಾಟ, ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳ
ಸಾಂದರ್ಭಿಕ ಚಿತ್ರImage Credit source: PTI
ಶಾಂತಮೂರ್ತಿ
| Edited By: |

Updated on: Aug 20, 2024 | 6:29 AM

Share

ಬೆಂಗಳೂರು, ಆಗಸ್ಟ್ 20: ಬೆಂಗಳೂರಿನಲ್ಲಿ ಬೀದಿನಾಯಿಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಕಂಗಾಲಾಗಿಬಿಟ್ಟಿದ್ದಾರೆ. ಸದ್ಯ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಒಂದಷ್ಟು ಕಡೆ ಬೀದಿನಾಯಿಗಳ ದಾಳಿಯಿಂದ ಗಾಯಗೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಬೀದಿ ಬೀದಿಗಳಲ್ಲಿ ರಾತ್ರಿ ವೇಳೆ, ಬೆಳಗ್ಗೆ ವೇಳೆ ನಾಯಿಗಳು dಆಳಿ ಮಾಡುತ್ತಿವೆ.

ಬೀದಿನಾಯಿಗಳ ಕಡಿತದಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳುಗಳಲ್ಲಿ 600 ರಿಂದ 700 ರಷ್ಟು ಮಂದಿ ನಾಯಿ ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇತ್ತ ಬೀದಿನಾಯಿಗಳ ಜೊತೆಗೆ ಸಾಕು ನಾಯಿಗಳು, ಬೆಕ್ಕುಗಳ ಕಡಿತ ಕೂಡ ಕೊಂಚ ಏರಿಕೆಯಾಗುತ್ತಿದೆ. ಬೀದಿ ನಾಯಿಗಳ ಕಾಟಕ್ಕೆ ಬ್ರೇಕ್ ಹಾಕಬೇಕಿದ್ದ ಪಾಲಿಕೆ ನಿದ್ದೆಗೆ ಜಾರಿದೆಯಾ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಸದ್ಯ ನಾಯಿ ಕಚ್ಚಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಸದ್ಯ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳ ಅಂಕಿ-ಅಂಶ ನಗರದಲ್ಲಿ ನಾಯಿಗಳ ಕಾಟ ಎಷ್ಟಿದೆ ಎಂಬುದನ್ನು ಅನಾವರಣ ಮಾಡಿದೆ

ನಾಯಿ ಕಚ್ಚಿ ಆಸ್ಪತ್ರೆ ಸೇರಿದವರ ಸಂಖ್ಯೆ

  • ಮೇ ತಿಂಗಳಿನಲ್ಲಿ ಒಟ್ಟು 933 ಜನರಿಗೆ ಚಿಕಿತ್ಸೆ
  • ಜೂನ್ ತಿಂಗಳಲ್ಲಿ ಒಟ್ಟು 642 ಜನರಿಗೆ ಚಿಕಿತ್ಸೆ
  • ಜುಲೈ ತಿಂಗಳಲ್ಲಿ 781 ಜನರಿಗೆ ಚಿಕಿತ್ಸೆ ಕೊಡಲಾಗಿದೆ

ಇತ್ತ ಬೀದಿನಾಯಿಗಳ ಕಾಟ ಹೆಚ್ಚಾಗಿರುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪಾಲಿಕೆ ಅಧಿಕಾರಿಗಳನ್ನು ಕೇಳಿದರೆ, ಈಗಾಗಲೇ ಹಲವೆಡೆ ಬೀದಿನಾಯಿಗಳನ್ನ ಹಿಡಿದು ಹೊರಬಿಡುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ.

ಬೀದಿನಾಯಿಗಳ ಜೊತೆ ಸಾಕುನಾಯಿಗಳು ಕಚ್ಚುವ ಪ್ರಕರಣ ಕೂಡ ಹೆಚ್ಚಿತ್ತು. ಈಗ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಪಾಲಿಕೆಯ ಪಶುಪಾಲನ ಅಧಿಕಾರಿ ಚಂದ್ರಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ

ಒಟ್ಟಿನಲ್ಲಿ ರಾತ್ರಿ ವೇಳೆ ವಾಹನ ಸವಾರರು, ರಸ್ತೆಯಲ್ಲಿ ಓಡಾಡುವ ಜನರಿಗೆ ಬೀದಿನಾಯಿಗಳ ಕಾಟ ಸಂಕಷ್ಟ ತಂದಿಟ್ಟಿದೆ. ಬೀದಿನಾಯಿಗಳನ್ನು ನಿಯಂತ್ರಣ ಮಾಡುತ್ತಿದ್ದೇವೆ ಎಂದು ಪಾಲಿಕೆ ಹಾಗೂ ಪಶುಪಾಲನಾ ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಬೀದಿನಾಯಿಗಳ ಕಾಟ ಹೆಚ್ಚಿರುವ ಕಡೆ ನಿಗಾ ಇಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು