AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಅವ್ಯವಸ್ಥೆಯ ಆಗರ; ಕುಡಿಯಲು ನೀರಿಲ್ಲ, ಮಲಗಲು ಜಾಗವಿಲ್ಲ

ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಇಲಿ, ಹೆಗ್ಗಣಗಳ ಬಿಲಗಳು ಕಂಡು ಬಂದಿವೆ. ಅಶುಚಿತ್ವ ತಾಂಡವವಾಡುತ್ತಿದೆ. ಎಲ್ಲೆಂದರಲ್ಲಿ ಬೆಡ್ ಶೀಟ್ ಹಾಸಿಕೊಂಡು ಜನರು ಮಲಗುವಂತ ಪರಿಸ್ಥಿತಿ ಇದೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಬರುವವರಲ್ಲಿ ಸಾಕಷ್ಟು ಜನರು ಮಧ್ಯಮವರ್ಗ, ಬಡವರ್ಗದ ಜನರೇ ಆಗಿರುತ್ತಾರೆ, ಆದರೆ ತಮ್ಮ ಮಕ್ಕಳಿಗೆ ಉತ್ತಮ ಚಿಕಿತ್ಸೆ ಸಿಗಬಹುದು ಅಂತಾ ಬರೋ ಇವರಿಗೆ ಇಲ್ಲಿ ಮಲಗಲು ಸೂಕ್ತ ಜಾಗವಿಲ್ಲ.

TV9 Web
| Updated By: ಆಯೇಷಾ ಬಾನು|

Updated on: Dec 14, 2023 | 8:07 AM

Share

ಬೆಂಗಳೂರು, ಡಿ.14: ಬೆಂಗಳೂರಿನ ದೊಡ್ಡಾಸ್ಪತ್ರೆಗೆ ಬಂದ್ರೆ ಒಳ್ಳೆಯ ಚಿಕಿತ್ಸೆ ಸಿಗುತ್ತೆ ಅಂತಾ ಅದೆಷ್ಟೋ ಜನರು ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬರ್ತಾರೆ. ತಮ್ಮ ಪುಟ್ಟ ಪುಟ್ಟ ಮಕ್ಕಳ ಆರೋಗ್ಯಕ್ಕಾಗಿ ದೂರ ದೂರದ ಊರಿನಿಂದ ಇಂದಿರಾಗಾಂಧಿ ಆಸ್ಪತ್ರೆಗೆ ಬರೋ ಜನರಿಗೆ ನರಕದರ್ಶನವಾಗ್ತಿದೆ (Indira Gandhi Children’s Hospital). ಮಲಗುವ ಜಾಗ, ಶೌಚಾಲಯ, ಕುಡಿಯೋ ನೀರಿಗೂ ಪೋಷಕರು ಪರದಾಡ್ತಿದ್ದಾರೆ. ಟಿವಿ 9 ಕ್ಯಾಮರಾದಲ್ಲಿ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಕರ್ಮಕಾಂಡ ಸೆರೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ,ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಇಲಿ, ಹೆಗ್ಗಣಗಳ ಬಿಲಗಳು ಕಂಡು ಬಂದಿವೆ. ಅಶುಚಿತ್ವ ತಾಂಡವವಾಡುತ್ತಿದೆ. ಎಲ್ಲೆಂದರಲ್ಲಿ ಬೆಡ್ ಶೀಟ್ ಹಾಸಿಕೊಂಡು ಜನರು ಮಲಗುವಂತ ಪರಿಸ್ಥಿತಿ ಇದೆ. ತಮ್ಮ ಮಕ್ಕಳನ್ನು ಕರೆದುಕೊಂಡು ಚಿಕಿತ್ಸೆಗೆ ಬರುವ ಪೋಷಕರಿಗೆ ಯಾವುದೇ ರೀತಿ ಸವಲತ್ತುಗಳಿಲ್ಲ.

ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಬರುವವರಲ್ಲಿ ಸಾಕಷ್ಟು ಜನರು ಮಧ್ಯಮವರ್ಗ, ಬಡವರ್ಗದ ಜನರೇ ಆಗಿರುತ್ತಾರೆ, ಆದರೆ ತಮ್ಮ ಮಕ್ಕಳಿಗೆ ಉತ್ತಮ ಚಿಕಿತ್ಸೆ ಸಿಗಬಹುದು ಅಂತಾ ಬರೋ ಇವರಿಗೆ ಇಲ್ಲಿ ಮಲಗಲು ಸೂಕ್ತ ಜಾಗವಿಲ್ಲ, ಕುಡಿಯೋ ನೀರು, ಶೌಚಾಲಯ ಬಳಸುವುದಕ್ಕೂ ಹಣ ಕೊಡಬೇಕಿರೋದರಿಂದ ರೋಗಿಗಳ ಜೊತೆ ಬರೋ ಪೋಷಕರು ಹೈರಾಣಾಗಿಬಿಟ್ಟಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಯಲ್ಲೇ ಹೆಚ್ಚು

ಇನ್ನು ಆಸ್ಪತ್ರೆಯಲ್ಲಿರೋ ಅವ್ಯವಸ್ಥೆಯನ್ನ ಅನಾವರಣ ಮಾಡಲು ಟಿವಿ9 ತಂಡ ತೆರಳಿದಾಗ ಆಸ್ಪತ್ರೆ ಸಿಬ್ಬಂದಿ ಕ್ಯಾತೆ ತೆಗೆದಿದ್ದಾರೆ, ಇಲ್ಲಿ ವಿಡಿಯೋ ಮಾಡೋ ಹಾಗಿಲ್ಲ ಅಂತಾ ತಡೆಹಿಡಿದು ಆಸ್ಪತ್ರೆ ನಿರ್ದೇಶಕರಿಗೆ ಕರೆ ಮಾಡಿದ್ದಾರೆ. ಅತ್ತ ನಿರ್ದೇಶಕರು ಇಲ್ಲಿ ಯಾವ ಸಮಸ್ಯೆ ಇಲ್ಲ, ಜನರಿಗೆ ವಿಶ್ರಾಂತಿಗೃಹ ಇದೆ ಅಂತಾ ಸಬೂಬು ಕೊಟ್ಟಿದ್ದಾರೆ. ಆದರೆ ವಿಶ್ರಾಂತಿಗೃಹ ಎಲ್ಲಿದೆ, ಹೇಗಿದೆ ಅಂತಾ ಕೇಳಿದ್ರೆ ಅದರ ಅವ್ಯವಸ್ಥೆಯ ಬಗ್ಗೆ ಜನರು ಅಸಮಾಧಾನ ಹೊರ ಹಾಕಿದ್ದಾರೆ. ಅವ್ಯವಸ್ಥೆ ಬಿಚ್ಚಿಟ್ಟಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆಯೇನೋ ಸಿಗ್ತಿದೆ. ಆದರೆ ದೂರ ದೂರದ ಊರುಗಳಿಂದ ಬಂದ ಜನರಿಗೆ ಮೂಲಭೂತ ಸೌಲಭ್ಯಗಳಾದ ಶೌಚಾಲಯ, ನೀರು, ಮಲಗುವ ಜಾಗಕ್ಕೂ ಹಣ ನೀಡಬೇಕಾದ ಪರಿಸ್ಥಿತಿ ಇರೋದು ನಿಜಕ್ಕೂ ದುರದೃಷ್ಟಕರ. ಸದ್ಯ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಇವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!