ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಎಲ್ಲೆಲ್ಲಿ?
Power Cut In Bengaluru: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಅಂದರೆ ಸೆಪ್ಟೆಂಬರ್ 19ರಿಂದ ನಗರದ ವಿವಿಧ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಅದು ಇಂದು ಸಹ ಮುಂದುವರೆಯಲಿದೆ. ಸೆಪ್ಟೆಂಬರ್ 21ರಂದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಯಾವ-ಯಾವ ಏರಿಯಾಗಳಲ್ಲಿ ವಿದ್ಯುತ್ ಸಮಸ್ಯೆಯಾಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಬೆಂಗಳೂರು, (ಸೆಪ್ಟೆಂಬರ್ 21): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ಸೆಪ್ಟೆಂಬರ್ 19ರಿಂದ ಕೆಲ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ(power supply) ವ್ಯತ್ಯಯ ಉಂಟಾಗಿದೆ. ಅದು ಇಂದು ಸಹ (ಸೆಪ್ಟೆಂಬರ್ 21) ಮುಂದುವರೆಯಲಿದೆ. ಹೌದು.. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವೆಬ್ಸೈಟ್ನಲ್ಲಿ ಹಂಚಿಕೊಂಡ ಮಾಹಿತಿ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಹಾಗಾದ್ರೆ, ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು ಯಾವುವು ಎನ್ನುವುದು ಈ ಕೆಳಗಿನಂತಿವೆ.
ಇಂದು ಎಲ್ಲೆಲ್ಲಿ ಪವರ್ ಕಟ್?
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್ 0, ಬಿ – ನಗರ, ಲಕ್ಷ್ಮಿ ನಗರ, ಎಚ್‌ವಿಕೆ ಲೇಔಟ್, ಕಿರ್ಲೋಸ್ಕರ್ ಕಾಲೋನಿ, ಕರ್ನಾಟಕ ಲೇಔಟ್, ಕಮಲಾ ನಗರ, ವಿಜೆಎಸ್ಎಸ್ ಲೇಔಟ್, ವಾರ್ಡ್ ಕಚೇರಿ ಸುತ್ತಮುತ್ತ, ಗೃಹಲಕ್ಷ್ಮಿ ಲೇಔಟ್ 1 ನೇ ಹಂತ, ನಾಗಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆಸಿ ನಗರ, ಕುರಬರಳ್ಳಿ, ರಾಜಾಜಿ ನಗರ 2 ನೇ ಬ್ಲಾಕ್, ಇಎಸ್ಐ ಆಸ್ಪತ್ರೆ, ಕಮಲಾ ನಗರ ಮುಖ್ಯ ರಸ್ತೆ, ಗೃಹಲಕ್ಷ್ಮಿ ಲೇಔಟ್ 2 ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿಡಿ ನಾಯ್ಡು ಹಳ್ಳಿ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್ ಎದುರು. ಸಿಟ್ ರೋಡ್, ಬಿಎನ್‌ಇಎಸ್ ಕಾಲೇಜ್, ಬೆಲ್ ಅಪಾರ್ಟ್‌ಮೆಂಟ್, ಸ್ಯಾಂಡಲ್ ಸೋಪ್ ಫ್ಯಾಕ್ಟರಿ, ಯಶವಂತ ಪುರ ಇಂಡಸ್ಟ್ರಿಯಲ್ ಏರಿಯಾ, ಟೊಯೊಟೊ ಶೋ ರೂಂ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಆಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:43 am, Thu, 21 September 23