AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ನೀಡಿದ ಕೇಂದ್ರ ಸರ್ಕಾರ

ಮೆಟ್ರೋ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆಯ ನಡುವೆಯೇ ನಮ್ಮ ಮೆಟ್ರೋ(Namma Metro) ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 3ನೇ ಹಂತದ ಮೆಟ್ರೋ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್​ಸಿಗ್ನಲ್ ನೀಡಿದೆ. ಏನದು ಅಂತೀರಾ? ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ನೀಡಿದ ಕೇಂದ್ರ ಸರ್ಕಾರ
ಬೆಂಗಳೂರು ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 16, 2024 | 10:22 PM

Share

ಬೆಂಗಳೂರು, ಆ.16: ಬೆಂಗಳೂರು ನಮ್ಮ ಮೆಟ್ರೋ(Namma Metro) ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 3ನೇ ಹಂತದ ಮೆಟ್ರೋ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್​ಸಿಗ್ನಲ್ ನೀಡಿದೆ. ಬರೋಬ್ಬರಿ 15,611 ಕೋಟಿ ರೂ. ಕಾಮಗಾರಿ ಇದಾಗಿದ್ದು, ಕೇಂದ್ರ ಒಪ್ಪಿಗೆ ನೀಡಿದೆ. ಕಾರಿಡಾರ್-1 ಜೆಪಿ ನಗರದ ನಾಲ್ಕನೇ ಹಂತದಿಂದ ಕೆಂಪಾಪುರದವರೆಗೆ 21 ಸ್ಟೇಷನ್​ಗಳು ಇದ್ದು, 32.15 ಕಿಮೀ ವಿಸ್ತೀರ್ಣವಿದೆ.

ಇನ್ನು ಕಾರಿಡಾರ್- 2 ಹೊಸಹಳ್ಳಿ ಯಿಂದ ಕಡಬಗೆರೆಯವರೆಗೆ ಒಂಬತ್ತು ಸ್ಟೇಷನ್​ಗಳಿದ್ದು, 12.50 ಕಿಮೀ ಮಾರ್ಗ ಇದಾಗಿದೆ. ಈ ಮೂಲಕ ಒಟ್ಟು ಮೆಟ್ರೋ ವಿಸ್ತೀರ್ಣ 220.20 ಕಿ.ಮೀ ಹೊಂದಲಿದೆ.

ಇದನ್ನೂ ಓದಿ:ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಸುಳಿವು ಕೊಟ್ಟ ಬಿಎಂಆರ್​ಸಿಎಲ್: ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ಸಾಧ್ಯತೆ

 ಬಿಎಂಆರ್​ಸಿಎಲ್ ಯಿಂದ ಮೆಟ್ರೋ ಟಿಕೆಟ್ ದರ ಏರಿಕೆ ಸುಳಿವು

ಇತ್ತೀಚೆಗೆ ಬೆಂಗಳೂರಿನ ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ, ಹೊಸ ಮಾರ್ಗಗಳ ಲೈನ್​ನಲ್ಲಿ ಪಿಎಸ್​ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರೂಪಾಯಿ ವೆಚ್ಚದಲ್ಲಿ ಗುತ್ತಿಗೆ ನೀಡಲಾಗಿದೆ. ಎಲ್ಲಾ ಮೆಟ್ರೋ ಸ್ಟೇಷನ್​ಗಳಿಗೂ ಪಿಎಸ್​ಡಿ ಅಳವಡಿಸಲು 700 ರಿಂದ 800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮೆಟ್ರೋ ಟಿಕೆಟ್ ದರ ಹೆಚ್ಚಿಸುವ ಕುರಿತು ಬಿಎಂಆರ್​ಸಿಎಲ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಮಧ್ಯೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್​ನ್ಯೂಸ್ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ