ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ; ಬಿಲ್ಡರ್ ಸಂತೋಷ್​ ನಿವಾಸದಲ್ಲಿ 40 ಕೋಟಿ ಪತ್ತೆ, ಮಾಜಿ ಎಂಎಲ್​ಸಿ ಹೆಸರು ತಳುಕು

Bengaluru IT Raid: ಬಿಲ್ಡರ್ ಸಂತೋಷ್ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ವಿಚಾರಣೆ ನಡೆಸಿದಾಗ ಸಂತೋಷ್ ಮಾಜಿ MLC ಹೆಸರನ್ನು ಪ್ರಸ್ತಾಪಿಸಿದ್ದಾರೆ. ಹೀಗಾಗಿ ಐಟಿ ಅಧಿಕಾರಿಗಳು ಪತ್ತೆಯಾದ ಹಣದ ಮೂಲ ಕಂಡು ಹಿಡಿಯಲು ಮಾಜಿ ಎಂಎಲ್​ಸಿ ಸಹೋದರರನ್ನು ಫ್ಲ್ಯಾಟ್​ಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ.

Follow us
TV9 Web
| Updated By: ಆಯೇಷಾ ಬಾನು

Updated on:Oct 15, 2023 | 8:13 AM

ಬೆಂಗಳೂರು, ಅ.15: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು (IT Raid) ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಹಣ ಪತ್ತೆ ಮಾಡಿದ್ದಾರೆ. ರಾಜಾಜಿನಗರದ ಕೇತಮಾರನಹಳ್ಳಿ ಅಪಾರ್ಟ್​ಮೆಂಟ್​ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ 40 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ನಿನ್ನೆ (ಅ.14) ಬೆಳಗ್ಗೆ ಬಿಲ್ಡರ್ ಸಂತೋಷ್​ ನಿವಾಸದ ಮೇಲೆ ಐಟಿ ತಂಡ ದಾಳಿ ನಡೆಸಿತ್ತು. ಬೆಳಗ್ಗೆ 6ರಿಂದ ಇಡೀ ದಿನ ಅಪಾರ್ಟ್​ಮೆಂಟ್​ನ 5ನೇ ಮಹಡಿಯ ಫ್ಲ್ಯಾಟ್​ನಲ್ಲಿ ದಾಖಲೆ ಪರಿಶೀಲನೆ ನಡೆಸಿತ್ತು. ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಆ ಹಣ ಮಾಜಿ ಎಂಎಲ್​ಸಿಗೆ ಸೇರಿದ್ದು ಎನ್ನಲಾಗಿದೆ.

ಬಿಲ್ಡರ್ ಸಂತೋಷ್ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ವಿಚಾರಣೆ ನಡೆಸಿದಾಗ ಸಂತೋಷ್ ಮಾಜಿ MLC ಹೆಸರನ್ನು ಪ್ರಸ್ತಾಪಿಸಿದ್ದಾರೆ. ಹೀಗಾಗಿ ಐಟಿ ಅಧಿಕಾರಿಗಳು ಪತ್ತೆಯಾದ ಹಣದ ಮೂಲ ಕಂಡು ಹಿಡಿಯಲು ಮಾಜಿ ಎಂಎಲ್​ಸಿ ಸಹೋದರರನ್ನು ಫ್ಲ್ಯಾಟ್​ಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ಹಣ ಪತ್ತೆಯಾಗುತ್ತಿದ್ದಂತೆ 6ಕ್ಕೂ ಹೆಚ್ಚು ಕಾರುಗಳಲ್ಲಿ 10ಕ್ಕೂ ಹೆಚ್ಚು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಸತತ 42 ಗಂಟೆಗಳ ಬಳಿಕ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​

ದಾಖಲೆಗಳನ್ನು ವಶಕ್ಕೆ ಪಡೆದ ಐಟಿ ಅಧಿಕಾರಿಗಳು

3ಟ್ರಂಕ್, 3ಬ್ಯಾಗ್, 1ಸೂಟ್ಕೇಸ್​ನ​ಷ್ಟು ವಸ್ತು​ ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳು ವಶಕ್ಕೆ ಪಡೆದ ವಸ್ತುಗಳನ್ನು 2 ಕಾರುಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಸತತ 18 ಗಂಟೆಗಳ ಕಾಲ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ಕೊನೆಗೆ ವಿಚಾರಣೆ ಮುಗಿಸಿ ಸಂತೋಷ್​ಗೆ ನೋಟಿಸ್ ನೀಡಿ ಐಟಿ ತಂಡ ತೆರಳಿದೆ. ಪತ್ತೆಯಾದ ಹಣದ ಬಗ್ಗೆ ಮತ್ತಷ್ಟು ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿದೆ.

ಬಿಲ್ಡರ್​ ಸಂತೋಷ್​ಗೂ ನನಗೂ ಯಾವುದೇ ಸಂಬಂಧವಿಲ್ಲ

ಇನ್ನು ಬಿಲ್ಡರ್​ ಸಂತೋಷ್​ ವಿಚಾರಣೆ ವೇಳೆ ಕಾಂಗ್ರೆಸ್ ಮುಖಂಡ ಬೆಮೆಲ್ ಕಾಂತರಾಜು ಅವರ ಹೆಸರು ಕೇಳಿ ಬಂದಿದ್ದು ಈ ಬಗ್ಗೆ ಕಾಂತರಾಜು ಪ್ರತಿಕ್ರಿಯೆ ನೀಡಿದ್ದಾರೆ. ಬಿಲ್ಡರ್​ ಸಂತೋಷ್​ಗೂ ನನಗೂ ಯಾವುದೇ ಸಂಬಂಧವಿಲ್ಲ. ಸಂತೋಷ್ ಮನೆಯಲ್ಲಿ ಪತ್ತೆಯಾದ ಹಣಕ್ಕೂ ನನಗೂ ಸಂಬಂಧವಿಲ್ಲ. ಕೇತಮಾರನಹಳ್ಳಿ ಅಪಾರ್ಟ್​ಮೆಂಟ್ ಮೇಲೆ ಐಟಿ ದಾಳಿ ಬಗ್ಗೆ ಗೊತ್ತಿಲ್ಲ. ಪ್ರಕರಣದಲ್ಲಿ ನನ್ನ ಹೆಸರು ಯಾಕೆ ತಳುಕು ಹಾಕ್ತಿದ್ದಾರೋ ಗೊತ್ತಿಲ್ಲ. ಬಿಲ್ಡರ್​ ಸಂತೋಷ್​ರನ್ನು ನಾನು ನೋಡೇ ಇಲ್ಲ ಎಂದ ಕಾಂತರಾಜು ಟಿವಿ9ಗೆ ತಿಳಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:10 am, Sun, 15 October 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ