ಬೆಂಗಳೂರು: ದೆಹಲಿ, ಮುಂಬೈ ಮೂಲದ ಕಂಪನಿಗಳ ಮೇಲೆ ಐಟಿ ದಾಳಿ

Bangalore IT Raid: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ದೆಹಲಿ, ಮುಂಬೈ ಶಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು: ದೆಹಲಿ, ಮುಂಬೈ ಮೂಲದ ಕಂಪನಿಗಳ ಮೇಲೆ ಐಟಿ ದಾಳಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Nov 07, 2024 | 1:52 PM

ಬೆಂಗಳೂರು, ನವೆಂಬರ್ 7: ಬೆಂಗಳೂರಿನಲ್ಲಿರುವ ಕೆಲವು ಕಂಪನಿಗಳ ಮೇಲೆ ಗುರುವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ದೆಹಲಿ ಹಾಗೂ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿದೆ.

ಕೋಲಾರ: ವೇಶ್ಯಾವಾಟಿಕೆ ಅಡ್ಡೆ ಮೇಲೆ

ಕೋಲಾರದ ಮಹಿಳಾ ಠಾಣೆ ಪೊಲೀಸರು ಕೋಲಾರದ ಕ್ಲಾಕ್ ಟವರ್ ಬಳಿಯಿರುವ ಕೃಷ್ಣ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.

ಇಡಿ ದಾಳಿ, ಮುಡಾ ಅಧಿಕಾರಿಗಳ ವಿಚಾರಣೆ

ಮುಡಾ ಹಗರಣ ಸಂಬಂಧ ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ‌ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಬಿಲ್ಡರ್​ಗಳಾದ ಮಂಜುನಾಥ್, ಜಯರಾಮ್ ಮನೆ ಮತ್ತು ಕಚೇರಿ ಹಾಗೂ ಅವರ ಸಂಬಂಧಿಕರ ಮನೆ ಮೇಲೆ ದಾಳಿಯಾಗಿದೆ. ಐವರು ಮುಡಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್​ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಂತೆಯೇ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿಚಾರಣೆ ಬೆನ್ನಲ್ಲೇ ಲೋಕಾಯುಕ್ತ ಎಸ್ಪಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

ಮುಡಾ ಹಗರಣ ಸಂಬಂಧ ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನೂ ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಪ್ರಕರಣ ಸಂಬಂಧ ಬುಧವಾರವಷ್ಟೇ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ನಂತರ ಪ್ರತಿಕ್ರಿಯಿಸಿ, ಲೋಕಾಯುಕ್ತ ಪೊಲೀಸರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮುಂದೆ ವಿಚಾರಣೆಗೆ ಕರೆದಿಲ್ಲ ಎಂದಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:42 am, Thu, 7 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ