ಬೆಂಗಳೂರು, ನವೆಂಬರ್ 7: ಬೆಂಗಳೂರಿನಲ್ಲಿರುವ ಕೆಲವು ಕಂಪನಿಗಳ ಮೇಲೆ ಗುರುವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ದೆಹಲಿ ಹಾಗೂ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿದೆ.
ಕೋಲಾರದ ಮಹಿಳಾ ಠಾಣೆ ಪೊಲೀಸರು ಕೋಲಾರದ ಕ್ಲಾಕ್ ಟವರ್ ಬಳಿಯಿರುವ ಕೃಷ್ಣ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
ಮುಡಾ ಹಗರಣ ಸಂಬಂಧ ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಬಿಲ್ಡರ್ಗಳಾದ ಮಂಜುನಾಥ್, ಜಯರಾಮ್ ಮನೆ ಮತ್ತು ಕಚೇರಿ ಹಾಗೂ ಅವರ ಸಂಬಂಧಿಕರ ಮನೆ ಮೇಲೆ ದಾಳಿಯಾಗಿದೆ. ಐವರು ಮುಡಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಂತೆಯೇ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ವಿಚಾರಣೆ ಬೆನ್ನಲ್ಲೇ ಲೋಕಾಯುಕ್ತ ಎಸ್ಪಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಮುಡಾ ಹಗರಣ ಸಂಬಂಧ ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನೂ ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಪ್ರಕರಣ ಸಂಬಂಧ ಬುಧವಾರವಷ್ಟೇ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ನಂತರ ಪ್ರತಿಕ್ರಿಯಿಸಿ, ಲೋಕಾಯುಕ್ತ ಪೊಲೀಸರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮುಂದೆ ವಿಚಾರಣೆಗೆ ಕರೆದಿಲ್ಲ ಎಂದಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:42 am, Thu, 7 November 24