AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 2,384 ಕೋಟಿ ರೂ. ನಕಲಿ ಜಿಎಸ್‌ಟಿ ಜಾಲ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ!

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಬೆಂಗಳೂರಿನಲ್ಲಿ ₹2384 ಕೋಟಿ ಮೌಲ್ಯದ ಭಾರಿ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದೆ. ನಕಲಿ ಕಂಪನಿಗಳನ್ನು ಸೃಷ್ಟಿಸಿ, ಸರಕು-ಸೇವೆಗಳಿಲ್ಲದೆ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ತೆರಿಗೆ ವಂಚಿಸುತ್ತಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ತೆರಿಗೆ ವಂಚಕರ ವಿರುದ್ಧ ಇಲಾಖೆ ಕಠಿಣ ಕ್ರಮ ಮುಂದುವರಿಸಿದೆ.

ಬೆಂಗಳೂರಿನಲ್ಲಿ 2,384 ಕೋಟಿ ರೂ. ನಕಲಿ ಜಿಎಸ್‌ಟಿ ಜಾಲ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ!
ಬೆಂಗಳೂರು ನಕಲಿ ITC
ಅಕ್ಷಯ್​ ಪಲ್ಲಮಜಲು​​
|

Updated on: May 13, 2026 | 10:14 PM

Share

ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಗಳು ನಕಲಿ ಕಂಪನಿಗಳನ್ನು ಸೃಷ್ಟಿಸಿ, ಯಾವುದೇ ಸರಕು ಅಥವಾ ಸೇವೆಗಳ ಪೂರೈಕೆ ಮಾಡದೆಯೇ ಬಿಲ್‌ಗಳನ್ನು ಸೃಷ್ಟಿಸುವ ಮೂಲಕ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದರು.

ಇದನ್ನೂ ಓದಿ: ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು

ನಕಲಿ ಐಟಿಸಿ ಹಗರಣಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯು ಈ ವರ್ಷ ತನಿಖೆಯನ್ನು ತೀವ್ರಗೊಳಿಸಿದ್ದು, ಈ ಇಬ್ಬರ ಬಂಧನದೊಂದಿಗೆ ಈ ವರ್ಷ ಒಟ್ಟು ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More