AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭ: ಸಾರ್ವಜನಿಕ ಸ್ಥಳಗಳಲ್ಲಿ ಉತ್ವನ್ನಗಳ ಮಾರಾಕ್ಕೆ ನಿರ್ಧಾರ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುನರ್ವಸತಿ ಹಾಗೂ ಕೌಶಲ್ಯಾಭಿವೃದ್ಧಿಗಾಗಿ 'ನವ ಸಂಕಲ್ಪ ಬೇಕರಿ' ಮತ್ತು 'ಬೇಕರಿ ಆನ್ ವೀಲ್ಸ್' ಸೇವೆಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಚಾಲನೆ ನೀಡಿದ್ದಾರೆ. ಬೆಂಗಳೂರು ವಿವಿಧ ನ್ಯಾಯಾಲಯಗಳ ಆವರಣ, ಬಸ್ ನಿಲ್ದಾಣಗಳಲ್ಲಿ ಬೇಕರಿ ಆನ್ ವೀಲ್ಸ್ ಮೂಲಕ ಬೇಕರಿ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಆ ಮೂಲಕ ಆದಾಯ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭ: ಸಾರ್ವಜನಿಕ ಸ್ಥಳಗಳಲ್ಲಿ ಉತ್ವನ್ನಗಳ ಮಾರಾಕ್ಕೆ ನಿರ್ಧಾರ
ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭImage Credit source: Alok Kumar X Account
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 18, 2026 | 1:45 PM

Share

ಬೆಂಗಳೂರು, ಸೆಪ್ಟೆಂಬರ್​​ 18: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಪುನರ್ವಸತಿ ಮತ್ತು ಕೌಶಲ್ಯಾಭಿವೃದ್ಧಿಗಾಗಿ ಕರ್ನಾಟಕ ಕಾರಾಗೃಹ ಇಲಾಖೆಯು ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭಿಸಿದ್ದು, ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್​​ ಇದರ ಲೋಕಾರ್ಪಣೆ ನೆರವೇರಿಸಿದ್ದಾರೆ. ಇದೇ ವೇಳೆ ನವ ಸಂಕಲ್ಪ ಬೇಕರಿ ಆನ್ ವೀಲ್ಸ್​ಗೂ ಚಾಲನೆ ನೀಡಲಾಗಿದೆ. ಹೊಸ ಸಜಾ ಬಂಧಿಗಳಿಗೆ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ ನೀಡಲಾಗಿದ್ದು, ತರಬೇತಿ ಪೂರ್ಣಗೊಳಿಸಿದ ಬಂಧಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವೂ ನಡೆದಿದೆ.

ಬೆಂಗಳೂರು ವಿವಿಧ ನ್ಯಾಯಾಲಯಗಳ ಆವರಣ, ಬಸ್ ನಿಲ್ದಾಣಗಳಲ್ಲಿ ಬೇಕರಿ ಆನ್ ವೀಲ್ಸ್ ಮೂಲಕ ಬೇಕರಿ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಆ ಮೂಲಕ ಆದಾಯ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಜೈಲಿನಿಂದ ರಿಲೀಸ್ ಬಳಿಕವೂ ಬಂಧಿಗಳು ಸ್ವಾವಲಂಬಿ ಜೀವನ ನಡೆಸಲು ಇದು ಸಹಾಯ ಆಗಲಿದೆ. 2026ರ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಮುಖ್ಯ ಸಮಾರಂಭದಲ್ಲಿ, ರಾಜ್ಯಪಾಲರು ಸೇರಿದಂತೆ ಹಲವು ಗಣ್ಯರಿಗೆ ಕೈದಿಗಳು ತಯಾರಿಸಿದ ತಿಂಡಿ-ತಿನಿಸುಗಳನ್ನು ಉಪಹಾರವಾಗಿ ಉಣಬಡಿಸಲಾಗಿತ್ತು.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಮೊಬೈಲ್ 1 ಲಕ್ಷ ರೂ.ಗೆ ಸೇಲ್

‘ಇನ್ನೂ ಬಹಳ ದೂರ ಸಾಗಬೇಕಿದೆ’

ನವ ಸಂಕಲ್ಪ ಬೇಕರಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚಿಕೊಂಡಿರುವ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್​, ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಹೊಸ ಬೇಕರಿ ಘಟಕ ಹಾಗೂ ‘ಬೇಕರಿ ಆನ್ ವೀಲ್ಸ್’ ಸೇವೆಗೆ ಚಾಲನೆ ನೀಡಲಾಗಿದೆ. ಇದಕ್ಕೆ ಅಗತ್ಯ ಸಹಕಾರ ನೀಡಿದ HCL ಇ-ಹಾಟ್ಗೆ ಧನ್ಯವಾದಗಳು. ಐಪಿಎಸ್ ಅಧಿಕಾರಿ ಅನುಶ್ ಕುಮಾರ್ ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹದ ಇಡೀ ತಂಡಕ್ಕೆ ಅಭಿನಂದನೆಗಳು. ಇನ್ನೂ ಬಹಳ ದೂರ ಸಾಗಬೇಕಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ