ಬೆಂಗಳೂರು ಜಯದೇವ ನಿರ್ದೇಶಕ ಮಂಜುನಾಥ್ ಅಧಿಕಾರವಧಿ ಅಂತ್ಯ, ಹೊಸ ನಿರ್ದೇಶಕರು ಯಾರು?

ಬೆಂಗಳೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿ.ಎನ್‌.ಮಂಜುನಾಥ್‌ ಅವರ ಅವಧಿ ನಾಳೆ (ಜನವರಿ 31) ಮುಕ್ತಾಯವಾಗಲಿದೆ. ಈಗಾಗಲೇ ಡಾ.ಮಂಜುನಾಥ್‌ ಅವರ ಸೇವಾವಧಿಯನ್ನು ನಾಲ್ಕು ಬಾರಿ ವಿಸ್ತರಿಸಲಾಗಿದ್ದು, ಈ ಬಾರಿ ಹೊಸ ನಿರ್ದೇಶಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾದ್ರೆ, ಹೊಸ ನಿರ್ದೇಶಕರು ಯಾರಾಗುತ್ತಾರೆ? ಯಾರ ಹೆಸರು ರೇಸ್​ನಲ್ಲಿದೆ? ವಿವರ ಇಲ್ಲಿದೆ.

ಬೆಂಗಳೂರು ಜಯದೇವ ನಿರ್ದೇಶಕ ಮಂಜುನಾಥ್ ಅಧಿಕಾರವಧಿ ಅಂತ್ಯ, ಹೊಸ ನಿರ್ದೇಶಕರು ಯಾರು?
ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 30, 2024 | 5:43 PM

ಬೆಂಗಳೂರು, (ಜನವರಿ 30): ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ (Bengaluru jayadeva Hospital) ನಿರ್ದೇಶಕ ಡಾ. ಸಿಎನ್ ಮಂಜುನಾಥ್ (dr cn manjunath) ಅವರ ಅಧಿಕಾರವಧಿ ನಾಳೆ(ಜನವರಿ 30) ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ನಿವೃತ್ತಿಗೊಂಡ ನಿರ್ದೇಶಕ ಮಂಜುನಾಥ್​ ಅವರಿಗೆ ಗೌರವ ಪೂರ್ವಕವಾಗಿ ಬೀಳ್ಕೊಡಲಾಯಿತು. ಇಂದು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಆಸ್ಪತ್ರೆಗಳ ನಿರ್ದೇಶಕರು ಮಂಜುನಾಥ್​ ಅವರಿಗೆ ಸನ್ಮಾನಿಸಿ ಬೀಳ್ಕೊಟ್ಟರು

ನಿವೃತ್ತಿ ಬಳಿಕವೂ ವೈದ್ಯಕೀಯ ಸೇವೆಯಲ್ಲಿ ಮುಂದುವರಿಕೆ

ಇನ್ನು ಈ ಬಗ್ಗೆ ಮಾತನಾಡಿದ ಸಿಎನ್ ಮಂಜುನಾಥ್, ಜಯದೇವ ಹೃದ್ರೋಗ ಆಸ್ಪತ್ರೆಯನ್ನ ಜನರ ಆಸ್ಪತ್ರೆಯಾಗಿದೆ. ನಾವು ಪಂಚಾತಾರ ಖಾಸಗಿ ಆಸ್ಪತ್ರೆಯಂತೆ ಮಾಡುವ ಗುರಿ ಇತ್ತು. ಇಲ್ಲಿ ಪ್ರತಿಯೋಬ್ಬರಿಗೂ ಸೇವಾ ಮನೋಭಾವವನ್ನ ಬೆಳಸಲಾಗಿದೆ. ಸರ್ಕಾರದ ಸಹಕಾರ ದಾನಿಗಳ ಸಹಕಾರದಿಂದ ಇವತ್ತು ಈ‌ಮಟ್ಟಕ್ಕೆ‌ ಆಸ್ಪತ್ರೆ ಬೆಳೆದಿದೆ. 16 ವರ್ಷದಲ್ಲಿ 75 ಲಕ್ಷ ಜನರಿಗೆ ಚಿಕಿತ್ಸೆ ನೀಡಲಾಗಿದೆ. 8 ಲಕ್ಷ ಜನರಿಗೆ ಶಾಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇಷ್ಟು ವರ್ಷದ ಸೇವೆ ಸಂತೋಷ ತಂದಿದೆ. ನಿವೃತ್ತಿ ಬಳಿಕವೂ ವೈದ್ಯಕೀಯ ಸೇವೆ ಮುಂದುವರೆಸುತ್ತೇನೆ. ಸದಾ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದರು.‘

ಹೊಸ ನಿರ್ದೇಶಕರು ಯಾರು ಆಗುತ್ತಾರೆ?

ಈಗಾಗಲೇ ಡಾ.ಮಂಜುನಾಥ್‌ ಅವರ ಸೇವಾವಧಿಯನ್ನು ನಾಲ್ಕು ಬಾರಿ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಹೊಸ ನಿರ್ದೇಶಕರ ಆಯ್ಕೆಗೆ ಪ್ರಕ್ರಿಯೆಗಳನ್ನು ಆರಂಭಿಸಿದ್ದು, ಅರ್ಜಿ ಸಲ್ಲಿಕೆ ಅವಧಿ ಮುಗಿದಿದೆ. ಇದರೊಂದಿಗೆ ಸತತ 18 ವರ್ಷಗಳ ಕಾಲ ನಿರ್ದೇಶಕರಾಗಿದ್ದ ಡಾ.ಮಂಜುನಾಥ್‌ ಅವರ ಜಾಗಕ್ಕೆ ಹೊಸ ನಿರ್ದೇಶಕರು ಬರುವುದು ಖಚಿತವಾಗಿದೆ.

ನಿರ್ದೇಶಕ ಸ್ಥಾನಕ್ಕೆ ಒಟ್ಟು 21 ಅರ್ಜಿಗಳು ಬಂದಿದ್ದು, ಈ ಪೈಕಿ 11 ಜನರ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ಅಂತಿಮಗೊಳಿಸಿದ್ದಾರೆ. ಆದ್ರೆ, 11 ಜನರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಿದೆ. ಈಗಾಗಲೇ ಜಯದೇವ ಆಸ್ಪತ್ರೆಯಲ್ಲಿಯೇ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಚ್.ಶ್ರೀನಿವಾಸ್‌ ಹಾಗೂ ಮೈಸೂರು ಜಯದೇವ ಕೇಂದ್ರದ ನಿರ್ದೇಶಕ ಡಾ.ಕೆ.ಎಸ್.ಸದಾನಂದ, ಡಾ.ದಿನೇಶ್‌ ಸಹಿತ ಹಲವರ ಹೆಸರುಗಳು ನಿರ್ದೇಶಕ ಹುದ್ದೆ ರೇಸ್​​ನಲ್ಲಿದ್ದು, ನಾಳೆ(ಜನವರಿ 31) ಸಿದ್ದರಾಮಯ್ಯ ಅವರು ಅಧಿಕೃತವಾಗಿ ಹೊಸ ನಿರ್ದೇಶಕರನ್ನು ಆಯ್ಕೆ ಮಾಡಲಿದ್ದು, ಹೊಸ ನಿರ್ದೇಶಕರು ಯಾರು ಆಗುತ್ತಾರೆ ಎನ್ನುವ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?