Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ವ್ಹೀಲಿಂಗ್​ ಪ್ರಕರಣದಲ್ಲಿ ಸಿಕ್ಕಿಬಿದ್ದವರಿಗೆ, ಅವರ ಪೋಷಕರಿಗೆ ಕೌನ್ಸಿಲಿಂಗ್: ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ

ಆರೋಪಿಗಳ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿ ಕ್ರಮ‌ ಕೈಗೊಳ್ಳಲಾಗುವುದು. ಮತ್ತು ವ್ಹೀಲಿಂಗ್ ಮಾಡುತ್ತಿದ್ದವರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್ ವ್ಹೀಲಿಂಗ್​ ಪ್ರಕರಣದಲ್ಲಿ ಸಿಕ್ಕಿಬಿದ್ದವರಿಗೆ, ಅವರ ಪೋಷಕರಿಗೆ ಕೌನ್ಸಿಲಿಂಗ್: ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ
ಬಂಧಿತರು
Follow us
TV9 Web
| Updated By: guruganesh bhat

Updated on: Aug 24, 2021 | 7:37 PM

ಬೆಂಗಳೂರು: ಬೈಕ್ ವ್ಹೀಲಿಂಗ್ ಅಭಿಯಾನದಲ್ಲಿ ವಶಪಡಿಸಿಕೊಳ್ಳಲಾದವರ ಪೈಕಿ ಅಪ್ರಾಪ್ತರೇ ಹೆಚ್ಚಾಗಿ ಇದ್ದಾರೆ. ಹೀಗಾಗಿ ಅಪ್ರಾಪ್ತ ಯುವಕರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ದಿನ ಪೋಷಕರಿಗೆ ಯಾವ ವಯಸ್ಸಿಗೆ ಮಕ್ಕಳಿಗೆ ವಾಹನ ನೀಡಬೇಕೆಂದು ಕೌನ್ಸೆಲಿಂಗ್ ನೀಡುತ್ತೇವೆ. ಬಳಿಕವೂ ಅಂತಹುದೇ ಘಟನೆ ಮುಂದುವರೆದಲ್ಲಿ 5-10 ಲಕ್ಷದ ಬಾಂಡ್ ಅಥವಾ ಜೈಲಿಗೆ ಕಳಿಸುತ್ತೇವೆ. ಅದೇ ರೀತಿ ಅಪ್ರಾಪ್ತರಲ್ಲದಿದ್ದರೂ ಅವರಿಗೂ ಕೌನ್ಸೆಲಿಂಗ್ ನಡೆಸುತ್ತೇವೆ. ಜತರೆಗೆ ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೂ ಕೌನ್ಸೆಲಿಂಗ್ ನಡೆಸುತ್ತೇವೆ. ವಾಹನಗಳ ಅಪಾಯಕಾರಿ ಚಾಲನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.

ಬೈಕ್ ವ್ಹೀಲಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದ ಬೆಂಗಳೂರು ನಗರ ಪೊಲೀಸರು ವ್ಹೀಲಿಂಗ್ ಮಾಡುತ್ತಿದ್ದ 6 ಜನರನ್ನು ವಶಪಡಿಸಿಕೊಂಡಿದ್ದಾರೆ. ನಗರದ ಪುಲಕೇಶಿನಗರ, ಬಾಣಸವಾಡಿ, ಕೆ.ಆರ್. ಪುರಂ, ಬ್ಯಾಟರಾಯನಪುರ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 16ರಿಂದ 22ರವರೆಗೆ ಈ ವಿಶೇಷ ಅಭಿಯಾನ ನಡೆಸಲಾಗಿತ್ತು. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 8 ಬೈಕ್​ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿ ಕ್ರಮ‌ ಕೈಗೊಳ್ಳಲಾಗುವುದು. ಮತ್ತು ವ್ಹೀಲಿಂಗ್ ಮಾಡುತ್ತಿದ್ದವರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ವಶಪಡಿಸಿಕೊಂಡವರ ಪೈಕಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಅವರ ಬದಲಿಗೆ ಈ ಇಬ್ಬರು ಅಪ್ರಾಪ್ತರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: 

TV9 Kannada Exclusive: ಅಫ್ಘಾನಿಸ್ತಾನದಲ್ಲಿಯೂ ಕೊವಿಡ್ ಇದೆ, ನಿಮಗೆ ನೆನಪಿದೆಯೇ?

Covid Vaccine: 12 ವರ್ಷ ಮೇಲ್ಪಟ್ಟವರಿಗೆ ಶೀಘ್ರದಲ್ಲೇ ಕೊವಿಡ್ ಲಸಿಕೆ; ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಮೊದಲ ಆದ್ಯತೆ

(Bengaluru Joint Police Commissioner Ravikanthegowda says Counseling for those trapped in a bike wheeling case)

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ