Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಂಬಳ: ಈ ರಸ್ತೆಗಳಲ್ಲಿ ತಟ್ಟಲಿದೆ ಟ್ರಾಫಿಕ್ ಜಾಮ್ ಬಿಸಿ

Bengaluru Kambala: ಬೆಂಗಳೂರು ಕಂಬಳಕ್ಕೆ 2 ದಿನಗಳಲ್ಲಿ ಸುಮಾರು ಸುಮಾರು 6 ರಿಂದ 8 ಲಕ್ಷ ಮಂದಿ ಆಗಮಿಸುವ ನಿರೀಕ್ಷೆ ಇದ್ದು, ಅರಮನೆ ಮೈದಾನದ ಸುತ್ತಲಿನ ರಸ್ತೆಗಳಲ್ಲಿ ಟ್ರಾಫಿಲ್ ಜಾಮ್ ಆಗುವ ಸಾಧ್ಯತೆ ಇದೆ. ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ನೀಡಿರುವ ಸೂಚನೆ ಇಲ್ಲಿದೆ.

ಬೆಂಗಳೂರು ಕಂಬಳ: ಈ ರಸ್ತೆಗಳಲ್ಲಿ ತಟ್ಟಲಿದೆ ಟ್ರಾಫಿಕ್ ಜಾಮ್ ಬಿಸಿ
ಅರಮನೆ ಮೈದಾನದಲ್ಲಿ ಸಿದ್ಧಪಡಿಸಲಾಗಿರುವ ಕಂಬಳ ರೇಸ್ ಟ್ರ್ಯಾಕ್
Follow us
Ganapathi Sharma
|

Updated on: Nov 23, 2023 | 7:29 PM

ಬೆಂಗಳೂರು, ನವೆಂಬರ್ 23: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯಲಿರುವ ಚೊಚ್ಚಲ ಕಂಬಳ (Bengaluru Kambala) ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸಲಿವೆ. 300ಕ್ಕೂ ಹೆಚ್ಚು ವಾಹನಗಳಲ್ಲಿ ಅವುಗಳನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿದ್ದು, ಗುರುವಾರ ರಾತ್ರಿಯೇ ಅರಮನೆ ಮೈದಾನಕ್ಕೆ ತಲುಪುವ ನಿರೀಕ್ಷೆಯಿದೆ. ಗುರುವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಿಂದ ಎಮ್ಮೆಗಳನ್ನು ಹೊತ್ತ ವಾಹನಗಳು ಹಾಸನ ಮತ್ತು ನೆಲಮಂಗಲದಲ್ಲಿ ಸ್ವಲ್ಪ ನಿಲುಗಡೆ ಮಾಡಿದ ನಂತರ ಬೆಂಗಳೂರಿಗೆ ಆಗಮಿಸುತ್ತಿವೆ.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 6 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಪುತ್ತೂರು ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಗರ ಪೊಲೀಸರು ವಾಹನ ನಿಲುಗಡೆ ಮತ್ತು ಸಂಚಾರ ನಿಯಮಗಳ ವ್ಯವಸ್ಥೆ ಮಾಡಲು ಪ್ರಾರಂಭಿಸಿದ್ದಾರೆ.

ಅರಮನೆ ಮೈದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಅರಮನೆ ಮೈದಾನದ ಸುತ್ತಮುತ್ತಲಿನ ಪ್ರದೇಶಗಳಾದ ಗುಟ್ಟಹಳ್ಳಿ, ಸದಾಶಿವನಗರ, ವೈಯಾಲಿಕಾವಲ್, ನ್ಯೂ ಬಿಇಎಲ್ ರಸ್ತೆ, ಮೇಖ್ರಿ ವೃತ್ತ, ಜಯಮಹಲ್ ಮುಖ್ಯ ರಸ್ತೆ, ಕಂಟೋನ್ಮೆಂಟ್ ಸ್ಟೇಷನ್, ಹೆಬ್ಬಾಳ, ಗಂಗೇನಹಳ್ಳಿ, ಮತ್ತು ಇತರ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.

ಟ್ರಾಫಿಕ್ ನಿಯಂತ್ರಣ ಮತ್ತು ಕಾರ್ ಪಾರ್ಕಿಂಗ್‌ಗೆ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಅರಮನೆ ಮೈದಾನದ ಸುತ್ತಮುತ್ತ ಜನದಟ್ಟಣೆ ಉಂಟಾಗಬಹುದು ಎಂದು ಜಂಟಿ ಸಂಚಾರ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕರಾವಳಿ ಕಂಬಳದ ಇತಿಹಾಸ ತಿಳಿಯೋಣ ಬನ್ನಿ

ಕಂಬಳ ವಿಜೇತರಿಗೆ 1 ಲಕ್ಷ ರೂ, 16 ಗ್ರಾಂ ಚಿನ್ನ

ಸ್ಪರ್ಧೆಯಲ್ಲಿ ವಿಜೇತರಾಗುವ ಕೋಣಗಳ ತಂಡಕ್ಕೆ 1 ಲಕ್ಷ ರೂಪಾಯಿ ನಗದು ಹಾಗೂ 16 ಗ್ರಾಂ ಚಿನ್ನದ ಪದಕ ನೀಡಲಾಗುವುದು ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಕಂಬಳ ಕರಾವಳಿ ಭಾಗದ ಕ್ರೀಡೆಯಾಗಿರುವುದರಿಂದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಸುಮಾರು 8 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಬಳ ಆಯೋಜಿಸಲಾಗಿದೆ ಎನ್ನಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ