AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Kambala: ಬೆಂಗಳೂರು ಕಂಬಳ ನೋಡಲು ಬರುವವರಿಗೆ ಉಚಿತ ಊಟದ ವ್ಯವಸ್ಥೆ

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ನಡೆಯುತ್ತಿದ್ದು, ಕೋಣಗಳ ಮಾಲೀಕರು ಹಾಗೂ ಪರಿಚಾರಕರಿಗೆ ಮಾತ್ರವಲ್ಲದೆ, ಕಂಬಳ ವೀಕ್ಷಣೆಗೆ ಆಗಮಿಸುವ ಜನರಿಗೂ ಉಚಿತ ಊಟದ ವ್ಯವಸ್ಥೆ ಮಾಡಲಾಗಿದೆ. ಇಂದು ಊಟದ ಹಾಲ್ ಬಳಿ ನೂಕುನುಗ್ಗಲು ಕೂಡ ನಡೆದಿದೆ.

ಅಶೋಕ್​ ಪೂಜಾರಿ, ಮಂಗಳೂರು
| Edited By: Rakesh Nayak Manchi|

Updated on:Nov 25, 2023 | 4:18 PM

Share

ಬೆಂಗಳೂರು, ನ.25: ಇತಿಹಾಸದಲ್ಲೇ ಮೊದಲ ಬಾರಿಗೆ ಉದ್ಯಾನ ನಗರಿಯಲ್ಲಿ ಕಾರವಳಿಯ ಕಂಬಳದ ವೈಭವ ಸಾರುತ್ತಿದೆ. ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ (Bengaluru Kambala) ನಡೆಯುತ್ತಿದ್ದು, ಕೋಣಗಳ ಮಾಲೀಕರು ಹಾಗೂ ಪರಿಚಾರಕರಿಗೆ ಮಾತ್ರವಲ್ಲದೆ, ಕಂಬಳ ವೀಕ್ಷಣೆಗೆ ಆಗಮಿಸುವ ಜನರಿಗೂ ಉಚಿತ ಊಟದ ವ್ಯವಸ್ಥೆ ಮಾಡಲಾಗಿದೆ.

ಮಧುಕರ್ ಶೆಟ್ಟಿ ಕಂಬಳ ಆಹಾರ ಸಮೀತಿ ಅಧ್ಯಕ್ಷರಾಗಿದ್ದು, ಸೋನಾ ಗಾಣೇಶ ನಾಯಕ್ ಅವರು ಪ್ರಧಾನ ಭಾಣಸಿಗರಾಗಿದ್ದಾರೆ. ಇವರ ನೇತೃತ್ವದಲ್ಲಿ ವಿವಿಧ ಮಾಂಸಾಹಾರಿ ಮತ್ತು ಸಸ್ಯಹಾರಿ ಭಕ್ಷ್ಯಗಳನ್ನು ತಯಾರಿಸಲಾಗುತ್ತಿದೆ.

ಸುಮಾರು 200 ಕ್ಕೂ ಹೆಚ್ಚು ಕೋಣಗಳಿಗೆ ವಿಷೇಶವಾಗಿ ಆಹಾರ ವ್ಯವಸ್ಥೆ ಮಾಡಲಾಗಿದೆ. ಕಂಬಳಕ್ಕೆ ಬರುವ ಜನರಿಗೆ ವಿವಿಧ ಬಗೆಯ ಕರಾವಳಿ ಭಾಗದ ವಿಷೇಶ ಖಾದ್ಯಗಳನ್ನು ಸಿದ್ಧಪಡಿಸಲಾಗಿದೆ. ಇಂದು ಮತ್ತು ನಾಳೆ ನಡೆಯುವ ಕಂಬಳ ನೋಡಲು ಬರುವ ಎಲ್ಲರಿಗೂ ಉಚಿತ ಊಟದ ವ್ಯವಸ್ಥೆ ಇರಲಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ಸಂಜೆ ಟೀ, ಕಾಫಿ, ರಾತ್ರಿ ಊಟದ ವ್ಯವಸ್ಥೆ ಇರಲಿದೆ.

ಇದನ್ನೂ ಓದಿ: Bengaluru Kambala: ಬೆಂಗಳೂರು ಕಂಬಳದಲ್ಲಿ ನೋಡಬಹುದಾದ ವಿಶೇಷತೆಗಳು ಏನೇನು ಗೊತ್ತಾ?

ಕೋಣಗಳ ಜೊತೆ ಬಂದಿರುವ ಪರಿಚಾರಕರಿಗೆ, ಸ್ವಯಂ ಸೇವಕರು, ಪೊಲೀಸ್ ಸಿಬ್ಬಂದಿಗೆ ಅರಮನೆ ಮೈದಾನದ ಅನ್ನಬ್ರಹ್ಮ ಹಾಲ್​ನಲ್ಲಿ​ ಊಟದ ವ್ಯವಸ್ಥೆ ಮಾಡಲಾಗಿದ್ದು, ಕುಚ್ಚಲಕ್ಕಿ‌ ಅನ್ನ, ವೈಟ್ ರೈಸ್, ಚಿಕನ್ ಕಬಾಬ್, ಚಿಕನ್ ಸುಕ್ಕ, ಕಡ್ಲೆ ಬೇಳೆ ಪಾಯಸ ವಿತರಣೆ ಮಾಡಲಾಗುತ್ತಿದೆ. ಸಸ್ಯಹಾರಿ ಪ್ರಿಯರಿಗೂ ವಿಶೇಷವಾದ ಭೂಜನದ ವ್ಯವಸ್ಥೆ ಮಾಡಲಾಗಿದೆ.

ಮನೆಯಲ್ಲಿಯೇ ಊಟ ಮಾಡಿದ ಅನುಭವವಾಗುತ್ತಿದೆ. ಬೆಂಗಳೂರಿನಲ್ಲಿ ಕರಾವಳಿಯ ಶೈಲಿಯ ಊಟದ ವ್ಯವಸ್ಥೆ ಮಾಡಿರೋದು ಖುಷಿಯಾಗಿದೆ ಎಂದು ಟಿವಿ 9 ಜೊತೆ ಕಂಬಳದ ಕೋಣಗಳ ಪರಿಚಾರಕರು ಖುಷಿ ಹಂಚಿಕೊಂಡಿದ್ದಾರೆ.

ಊಟದ ಹಾಲ್​ಗೆ ನುಗ್ಗಿದ ಸಾರ್ವಜನಿಕರು, ನೂಕುನುಗ್ಗಲು

ಕೋಣಗಳ ಪರಿಚಾರಕರಿಗೆ, ಪೊಲೀಸ್ ಸಿಬ್ಬಂದಿ ಹಾಗೂ ಸ್ವಯಂ ಸೇವಕರಿಗೆ ಹಾಲ್​ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಇವರ ಹೊರತಾಗಿ ವಿಐಪಿಗಳಿಗೆ ಪಾಸ್ ವ್ಯವಸ್ಥೆ ಇದ್ದು, ಇದನ್ನು ತೋರಿಸಿ ಭೂಜನ ಸ್ವೀಕರಿಸಬಹುದಾಗಿದೆ. ಆದರೆ, ಕಂಬಳದ ಪರಿಚಾರಕರ ಜೊತೆ ಸಾರ್ವಜನಿಕರು ಕೂಡ ಊಟದ ಹಾಲ್​ಗೆ ನುಗ್ಗಿದ ಪರಿಣಾಮ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಇವರನ್ನು ನಿಯಂತ್ರಿಸಲು ಸ್ವಯಂಸೇವಕರು ಹರಸಾಹಸಪಟ್ಟಿದ್ದಾರೆ.

ಕಂಬಳದಲ್ಲಿ ಊಟಕ್ಕೆ ಮುಗುಬಿದ್ದ ಜನರು ಮತ್ತು ಸಿಬ್ಬಂದಿ ನಡುವೆ ಜಗಳವೂ ನಡೆದಿದೆ. ಟಿಕೆಟ್ ಇದ್ದವರಿಗರ ಮಾತ್ರ ಹಾಲ್​ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಜನರು ಕಂಬಳಕ್ಕೆ ಬಂದಿದ್ದ ಜನರು ಕೂಡ ಊಟ ಮಾಡಲು ಒಳಗೆ ಹೋಗಲು ಗಲಾಟೆ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Sat, 25 November 23

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?