ಬೆಂಗಳೂರು ಕಂಬಳ: ಇಂದು, ನಾಳೆ ಟ್ರಾಫಿಕ್ ಬಿಸಿ ತಪ್ಪಿಸಲು ಈ ರಸ್ತೆಗಳಲ್ಲಿ ಸಂಚಾರ ಅವಾಯ್ಡ್ ಮಾಡಿ

| Updated By: Ganapathi Sharma

Updated on: Nov 25, 2023 | 11:00 AM

Bengaluru Kambala Traffic Advisory: ಸುಮಾರು ಆರು ಲಕ್ಷ ಜನ ಸೇರುವ ನಿರೀಕ್ಷೆಯೊಂದಿಗೆ ಕಂಬಳ ಕಾರ್ಯಕ್ರಮ ಬೆಂಗಳೂರಿನಲ್ಲಿ ಆರಂಭವಾಗಿದೆ. ಕಂಬಳದ ಕಾರಣ ನಗರದ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅವುಗಳ ವಿವರ ಇಲ್ಲಿದೆ.

ಬೆಂಗಳೂರು ಕಂಬಳ: ಇಂದು, ನಾಳೆ ಟ್ರಾಫಿಕ್ ಬಿಸಿ ತಪ್ಪಿಸಲು ಈ ರಸ್ತೆಗಳಲ್ಲಿ ಸಂಚಾರ ಅವಾಯ್ಡ್ ಮಾಡಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ನವೆಂಬರ್ 25: ಬಹು ನಿರೀಕ್ಷಿತ ಎರಡು ದಿನಗಳ ಕಂಬಳ (Bengaluru Kambala), ಕೋಣಗಳ ಓಟದ (Buffalo Race) ಸ್ಪರ್ಧೆ ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಾರಂಭವಾಗುತ್ತಿದ್ದು, ಆರು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆಯಿದೆ. ಗಣ್ಯರು, ಸೆಲೆಬ್ರಿಟಿಗಳು ಮತ್ತು ರಾಜಕೀಯ ನಾಯಕರಿಗೂ ಆಹ್ವಾನವಿದ್ದು, ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಚಾರ ನಿರ್ಬಂಧಗಳ ಮಾಹಿತಿ ನೀಡಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್​​​ಎಎಲ್​​ಗೆ ಶನಿವಾರ ಆಗಮಿಸಿದ್ದಾರೆ.

ಸಂಚಾರ ನಿರ್ಬಂಧ, ಪಾರ್ಕಿಂಗ್ ವಿವರ ಹೀಗಿದೆ

ಅರಮನೆ ರಸ್ತೆ: ಮೈಸೂರು ಬ್ಯಾಂಕ್ ವೃತ್ತದಿಂದ ವಸಂತನಗರ ಅಂಡರ್ ಪಾಸ್ ವರೆಗೆ.

ಎಂವಿ ಜಯರಾಮ್ ರಸ್ತೆ: ಬಿಡಿಎ ಜಂಕ್ಷನ್ ಅರಮನೆ ರಸ್ತೆಯಿಂದ ಚಕ್ರವರ್ತಿ ಲೇಔಟ್‌ನಿಂದ ವಸಂತನಗರ ಅಂಡರ್‌ಪಾಸ್‌ನಿಂದ ಹಳೆ ಉದಯ ಟಿವಿ ಜಂಕ್ಷನ್‌ವರೆಗೆ. (ಎರಡೂ ದಿಕ್ಕುಗಳು)

ಬಳ್ಳಾರಿ ರಸ್ತೆ: ಮೇಖ್ರಿ ವೃತ್ತದಿಂದ ಎಲ್‌ಆರ್‌ಡಿಇ ಜಂಕ್ಷನ್‌ವರೆಗೆ.

ಕನ್ನಿಂಗ್‌ಹ್ಯಾಮ್ ರಸ್ತೆ: ಬಾಳೆಕುಂದ್ರಿ ಜಂಕ್ಷನ್‌ನಿಂದ ಲೆ ಮೆರಿಡಿಯನ್ ಅಂಡರ್‌ಪಾಸ್‌ವರೆಗೆ.

ಮಿಲ್ಲರ್ಸ್ ರಸ್ತೆ: ಹಳೆ ಉದಯ ಟಿವಿ ಜಂಕ್ಷನ್‌ನಿಂದ ಎಲ್‌ಆರ್‌ಡಿಇ ಜಂಕ್ಷನ್‌ವರೆಗೆ.

ಜಯಮಹಲ್ ರಸ್ತೆ: ಬೆಂಗಳೂರಿನ ಸುತ್ತಮುತ್ತಲಿನ ರಸ್ತೆಗಳು ಸೇರಿದಂತೆ ಜಯಮಹಲ್ ರಸ್ತೆ

ಇದನ್ನೂ ಓದಿ: ಬೆಂಗಳೂರು ಕಂಬಳ: ಪಾರ್ಕಿಂಗ್, ಎಂಟ್ರಿ – ಎಕ್ಸಿಟ್ ವಿವರ ಇಲ್ಲಿದೆ ನೋಡಿ

ಈ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ

ಅರಮನೆ ರಸ್ತೆ, ಜಯಮಹಲ್ ರಸ್ತೆ, ಎಂ.ವಿ.ಜಯರಾಮ್ ರಸ್ತೆ, ಸಿ.ವಿ.ರಾಮನ್ ರಸ್ತೆ, ವಸಂತನಗರ ರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿದುರ್ಗ ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು ರಸ್ತೆ.

ನಗರದ ಮಧ್ಯ ಭಾಗದಲ್ಲಿ ದಟ್ಟಣೆ ಉಂಟಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆ ಭಾರೀ ವಾಹನಗಳ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಕರ್ನಾಟಕ ಕರ್ನಾಟಕ ಸರ್ಕಾರವು ಬೆಂಗಳೂರಿನಲ್ಲಿ ಮೊದಲ ನಮ್ಮ ಕಂಬಳ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ.

ಏತನ್ಮಧ್ಯೆ, ಬೆಂಗಳೂರು ವಿಮಾನ ನಿಲ್ದಾಣದ ಆಡಳಿತ ಕೂಡ ಪ್ರಕಟಣೆ ಹೊರಡಿಸಿದ್ದು, ಸಂಚಾರ ದಟ್ಟಣೆ ಸಾಧ್ಯತೆ ಹಿನ್ನೆಲೆ ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳ ಸೂಚನೆಗಳ ಮೇಲೆ ನಿಗಾ ಇಡಬೇಕು ಎಂದು ಹೇಳಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:59 am, Sat, 25 November 23