AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Kambala: ಬೆಂಗಳೂರು ಕಂಬಳದಲ್ಲಿ ಇಂದು ಕರಾವಳಿ ಶೈಲಿಯ ಊಟದ ವ್ಯವಸ್ಥೆ, ಏನೆಲ್ಲ ಇದೆ ಗೊತ್ತಾ?

ಕರಾವಳಿ ಭಾಗದ ಕ್ರೀಡೆಗಳಲ್ಲಿ ಒಂದಾದ ಕೋಣಗಳ ಓಟ ಬೆಂಗಳೂರಿನಲ್ಲಿ ನಿನ್ನೆಯಿಂದ ಪ್ರಾರಂಭವಾಗಿದ್ದು, ಇಂದು ಕೊನೆಗೊಳ್ಳಲಿದೆ. ಕಂಬಳ ವೀಕ್ಷಣೆಗೆ ಬರುವ ಸಾರ್ವಜನಿಕರಿಗೂ ಉಚಿತ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಸ್ಯಹಾರಿ, ಮಾಂಸಾಹಾರಿ ಭೋಜನವನ್ನು ಪ್ರತ್ಯೇಕವಾಗಿ ಮಾಡಲಾಗಿದೆ.

Poornima Agali Nagaraj
| Updated By: Rakesh Nayak Manchi|

Updated on: Nov 26, 2023 | 12:48 PM

Share

ಬೆಂಗಳೂರು, ನ.26: ರಾಜ್ಯ ರಾಜಧಾನಿಯಲ್ಲಿ ನಿನ್ನೆಯಿಂದ ಆರಂಭವಾದ ಬೆಂಗಳೂರು ಕಂಬಳವು (Bengaluru Kambala) ಇಂದು ಕೊನೆಗೊಳ್ಳಲಿದೆ. ಭಾನುವಾರ ರಜಾದಿನವಾಗಿರುವುದರಿಂದ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಂಬಳ ವೀಕ್ಷಣೆಗೆ ಆಗಮಿಸುತ್ತಿದ್ದು, ಭರ್ಜರಿ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಹೊಟೆಲ್ ಅಸೋಸಿಯೇಷನ್ ಉಪಧ್ಯಕ್ಷ ಮಧುಕರ್ ಶೆಟ್ಟಿ, ಕೊನೆಯ ದಿನಕ್ಕೆ ಭರ್ಜರಿ ಚಿಕನ್ ಊಟದ ವ್ಯವಸ್ಥೆ ಮಾಡಲಾಗಿದೆ. ಕಂಬಳ ಓಡಿಸುವ ಕ್ರಿಡಾಪಟುಗಳಿಗೆ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿದೆ. ನೆನ್ನೆ ಒಂದೇ ದಿನ 1 ಲಕ್ಷ ಜನ ಊಟ ಮಾಡಿದ್ದಾರೆ. ಇವತ್ತು ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ಬರುವ ನಿರೀಕ್ಷೆ ಇದೆ. ಹೀಗಾಗಿ ಹೆಚ್ಚಿನ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರು ಕಂಬಳ 2ನೇ ದಿನ: ನಟ ದರ್ಶನ ಭಾಗಿ ಸಾಧ್ಯತೆ, ಅರ್ಜುನ್ ​ಜನ್ಯರಿಂದ ಸಂಗೀತ ರಸ ಸಂಜೆ

ಇಂದು ಮಧ್ಯಹ್ನಕ್ಕೆ ಕುಂದಾಪುರ ಚಿಕನ್,‌ ದೋಸೆ, ಬಾಲ್ಡ್ ರೈಸ್, ವೈಟ್ ರೈಸ್ ಇರಲಿದೆ. ಮಧ್ಯರಾತ್ರಿಯವರೆಗೂ ಊಟದ ವ್ಯವಸ್ಥೆ ಇರಲಿದೆ. ಇವತ್ತು ಊಟಕ್ಕೆ ಬರುವ ಜನರಿಗೆ ಗೊಂದಲ ಆಗದಂತೆ ಸ್ವಯಂ ಸೇವಕರನ್ನ ನೇಮಿಸಿದ್ದೇವೆ ಎಂದರು.

ಬೆಂಗಳೂರು ಕಂಬಳಕ್ಕೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು ಕಂಬಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದಾಖಲೆಯ ಪ್ರಮಾಣದಲ್ಲಿ ವೀಕ್ಷಕರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ‌ 2.30 ಲಕ್ಷ ಜನರು ಕೋಣಗಳ ಓಟದ ಸ್ಪರ್ಧೆಯನ್ನು ವೀಕ್ಷಣೆ ಮಾಡಿದ್ದಾರೆ. ನಿನ್ನೆ ಬೆಳಿಗ್ಗೆಯಿಂದ ರಾತ್ರಿಯಿಡಿ ಕಂಬಳ ವೀಕ್ಷಣೆ ಮಾಡಿದ್ದಾರೆ.

ಮಧ್ಯರಾತ್ರಿ 12 ಗಂಟೆ ನಂತರವೂ ನಡೆದ ಕಂಬಳ ಕ್ರೀಡೆಯನ್ನು ವೀಕ್ಷಿಸಲು ಸಾವಿರಾರು ಜನರು ನೆರೆದಿದ್ದು ಅಚ್ಚರಿಯೇ ಸರಿ. ರಾತ್ರಿಪೂರ್ತಿ ಕಂಬಳದ ಅಭಿಮಾನಿಗಳು ಕಂಬಳ ನೋಡಿದ್ದು, ಪುಡ್ ಕಾರ್ನರ್ ಹೌಸ್ ಪುಲ್ ಆಗಿದ್ದವು. ಕೋಣ ಕಟ್ಟುವ ಸ್ಥಳದಲ್ಲೂ ಜನಸಂದಣಿ ಉಂಟಾಗಿತ್ತು.

ಕಂಬಳ ಗದ್ದೆಯ ಬಳಿಯೂ ಜನ ಜಂಗುಳಿ ಇತ್ತು. ಇಂದು ಕೂಡ 3 ಲಕ್ಷ ಜನಕ್ಕೂ ಹೆಚ್ಚು ಜನ ಕಂಬಳಕ್ಕೆ ಬರುವ ಸಾಧ್ಯತೆ ಇದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಧ್ಯಕ್ಷ ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು