Bengaluru Kannur Special Train: ಬೆಂಗಳೂರು – ಕಣ್ಣೂರು ಮಧ್ಯೆ ವಿಶೇಷ ಎಕ್ಸ್‌ಪ್ರೆಸ್ ರೈಲು, ಇಲ್ಲಿದೆ ವಿವರ
ಬೆಂಗಳೂರು ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ರೈಲು: ಹಬ್ಬಗಳ ರಜೆ ಹಾಗೂ ಬೇಸಗೆ ರಜೆ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವುದಕ್ಕಾಗಿ ಈಗಾಗಲೇ ನೈಋತ್ಯ ರೈಲ್ವೆ ಕೆಲವು ವಿಶೇಷ ರೈಲುಗಳನ್ನು ಘೋಷಿಸಿದೆ. ಕರ್ನಾಟಕದ ವಿವಿಧ ಜಿಲ್ಲೆಗಳು ಹಾಗೂ ಇತರ ರಾಜ್ಯಗಳಿಗೂ ವಿಶೇಷ ರೈಲುಗಳು ಸಂಚರಿಸಲಿವೆ. ಇದೀಗ ಕೇರಳದ ಕಣ್ಣೂರು ಹಾಗೂ ಬೆಂಗಳೂರು ಮಧ್ಯೆ ವಿಶೇಷ ರೈಲು ಘೋಷಿಸಿದ್ದು, ವಿವರಗಳು ಇಲ್ಲಿವೆ.

ಬೆಂಗಳೂರು, ಏಪ್ರಿಲ್ 11: ಬೇಸಿಗೆ ರಜೆಯ (Summer Holidays)ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವುದಕ್ಕಾಗಿ ನೈಋತ್ಯ ರೈಲ್ವೆ (South Western Railway) ಈಗಾಗಲೇ ಕೆಲವು ವಿಶೇಷ ರೈಲುಗಳನ್ನು (Special Train) ಘೋಷಣೆ ಮಾಡಿದ್ದು, ಇದೀಗ ಬೆಂಗಳೂರು ಮತ್ತು ಕೇರಳದ ಕಣ್ಣೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಘೋಷಣೆ ಮಾಡಿದೆ. ರೈಲು ಸಂಖ್ಯೆ, ಸಂಚರಿಸುವ ಮಾರ್ಗ, ನಿಲುಗಡೆ ಮತ್ತು ಇತರ ವಿವರಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಹಂಚಿಕೊಂಡಿದೆ.
ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (SMVT ಬೆಂಗಳೂರು) – ಕಣ್ಣೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ಓಡಾಟ ನಡೆಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಬೆಂಗಳೂರು – ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿ
ರೈಲು ಸಂಖ್ಯೆ 06573 SMVT ಬೆಂಗಳೂರು-ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 11 ರಂದು (ಶುಕ್ರವಾರ) ರಾತ್ರಿ 11:55 ಕ್ಕೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ಶನಿವಾರ ಮಧ್ಯಾಹ್ನ 1:30 ಕ್ಕೆ ಕಣ್ಣೂರು ತಲುಪಲಿದೆ. ರೈಲು ಸಂಖ್ಯೆ 06574 ಕಣ್ಣೂರು-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 14 ರಂದು (ಸೋಮವಾರ) ಸಂಜೆ 6.25 ಕ್ಕೆ ಕಣ್ಣೂರಿನಿಂದ ಹೊರಟು ಮಂಗಳವಾರ ಬೆಳಿಗ್ಗೆ 8.00 ಕ್ಕೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.
ಬೆಂಗಳೂರು – ಕಣ್ಣೂರು ವಿಶೇಷ ರೈಲಿಗೆ ಎಲ್ಲೆಲ್ಲಿ ನಿಲುಗಡೆ?
ಬೆಂಗಳೂರು – ಕಣ್ಣೂರು ವಿಶೇಷ ರೈಲಿಗೆ ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ಶೋರ್ನೂರ್, ತಿರೂರ್, ಕೋಝಿಕ್ಕೋಡ್, ವಡಕ್ಕರ, ತಲಶ್ಶೇರಿ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಇದನ್ನೂ ಓದಿ: ಯುಗಾದಿ, ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯದ ಈ ಜಿಲ್ಲೆಗಳಿಗೆ ಬೆಂಗಳೂರು, ಮೈಸೂರಿನಿಂದ ವಿಶೇಷ ರೈಲು
ಬೆಂಗಳೂರು ಮತ್ತು ಮೈಸೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಕೆಲವೇ ದಿನಗಳ ಹಿಂದಷ್ಟೆ ನೈಋತ್ಯ ರೈಲು ಪ್ರಕಟಿಸಿತ್ತು. ಚೆನ್ನೈ, ಮುಂಬೈ, ಕೋಲ್ಕತ್ತಾಗೂ ಕೆಲವು ವಿಶೇಷ ರೈಲುಗಳನ್ನು ಘೋಷಿಸಲಾಗಿತ್ತು. ಮೈಸೂರು ಟು ಕಾರವಾರಕ್ಕೂ ವಿಶೇಷ ರೈಲು ಘೋಷಣೆ ಮಾಡಲಾಗಿತ್ತು. ಇದೀಗ ಕಣ್ಣೂರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.