Bengaluru Karaga 2024: ಬೆಂಗಳೂರು ಕರಗ ಮೆರವಣಿಗೆ ವೇಳೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಇದೇ ಮೊದಲು

Murder in Bengaluru Karaga Procession: ಏಪ್ರಿಲ್ 23ರ ರಾತ್ರಿ 3.30ರಲ್ಲಿ ಅಣ್ಣಮ್ಮ ದೇಗುಲದ ಮುಂದೆ ಕರಗ ಉತ್ಸವದ ವೇಳೆ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ಶೇಷಾದ್ರಿಪುರಂನ ವಿವಿ ಗಿರಿ ಕಾಲೋನಿಯ ನಿವಾಸಿ ಡಿ. ಸಾರಧಿ ಮೃತಪಟ್ಟಿದ್ದಾರೆ. ಇದರೊಂದಿಗೆ ಐತಿಹಾಸಿಕ ಬೆಂಗಳೂರು ಕರಗವು ಇಂಥದ್ದೊಂದು ಕಹಿ ಘಟನೆಗೆ ಸಾಕ್ಷಿಯಾಗುವಂತಾಗಿದೆ.

Bengaluru Karaga 2024: ಬೆಂಗಳೂರು ಕರಗ ಮೆರವಣಿಗೆ ವೇಳೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಇದೇ ಮೊದಲು
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Apr 25, 2024 | 10:30 AM

ಬೆಂಗಳೂರು, ಏಪ್ರಿಲ್ 25: ಇದೇ ಮೊದಲ ಬಾರಿಗೆ ಐತಿಹಾಸಿಕ ಬೆಂಗಳೂರು ಕರಗ (Bengaluru Karaga 2024) ಮಹೋತ್ಸವ ಕೊಲೆಯೊಂದಕ್ಕೆ ಸಾಕ್ಷಿಯಾಗಿದೆ. ಕರಗ ಮಹೋತ್ಸವದ ಮೆರವಣಿಗೆ ವೇಳೆ ಯುವಕರ ನಡುವೆ ನಡೆದ ಗಲಾಟೆ, ಕೊಲೆಯಲ್ಲಿ (Murder) ಅಂತ್ಯವಾಗಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಅಣ್ಣಮ್ಮ ದೇಗುಲದ (Annamma Temple) ಬಳಿ ನಡೆದ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಡಿ. ಸಾರಧಿ ಮೃತಪಟ್ಟಿದ್ದಾರೆ. ಮೃತ ಸಾರಧಿ, ಶೇಷಾದ್ರಿಪುರಂನ ವಿವಿ ಗಿರಿ ಕಾಲೋನಿಯ ನಿವಾಸಿಯಾಗಿದ್ದಾರೆ. ಅಣ್ಣಮ್ಮ ದೇಗುಲದ ಮುಂದೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಸಾರಧಿ ಮತ್ತು ಸ್ನೇಹಿತರನ್ನ ಸ್ಪರ್ಶಿಸಿದ್ದರು. ಈ ವಿಚಾರಕ್ಕೆ ಗುಂಪು​​ಗಳ ನಡುವೆ ಗಲಾಟೆ ಆಗಿ ಸಾರಧಿ ಮೇಲೆ ಹಲ್ಲೆ ನಡೆದಿತ್ತು. ಸಾರಧಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು.

ಗಾಯಾಳು ಸಾರಧಿಯನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾರಧಿ ಮೃತಪಟ್ಟಿದ್ದಾರೆ.

ಏಪ್ರಿಲ್ 23ರ ರಾತ್ರಿ 3.30ರಲ್ಲಿ ಅಣ್ಣಮ್ಮ ದೇಗುಲದ ಮುಂದೆ ಘಟನೆ ನಡೆದಿತ್ತು. ಉಪ್ಪಾರಪೇಟೆ ಪೊಲೀಸ್​​​ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತರಿಂದಲೇ ಕೊಲೆ

ನಾಲ್ಕು ಜನ ಅಪ್ರಾಪ್ತರಿಂದಲೇ ಸಾರಧಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಸಾರಧಿ ಮತ್ತು ಸ್ನೇಹಿತರನ್ನ ಸ್ಪರ್ಶಿಸಿದ್ದ ವಿಚಾರವಾಗಿ ಮಾತಿಗೆ ಮಾತು ಬೆಳೆದು ಪರಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಇದೇ ವೇಳೆ, ನಾಲ್ಕು ಜನ ಸಾರಧಿ ಮೇಲೆ ಹಲ್ಲೆ ನಡೆಸಿದ್ದಾರೆ. ಫ್ಲವರ್ ಕಟ್ಟರ್ ಆಯುಧದಿಂದ ಎದೆಗೆ ಚುಚ್ಚಿದ್ದರು. ಪರಿಣಾಮವಾಗಿ ಸಾರಧಿ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:37 am, Thu, 25 April 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ