AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Karaga 2024: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ: ಇಲ್ಲಿದೆ ಉತ್ಸವದ ವೇಳಾಪಟ್ಟಿ

Bengaluru Karaga Festival Schedule: ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಇಂದು ಆರಂಭಗೊಂಡಿದೆ. ಯಾವ ದಿನ ಏನು ಕಾರ್ಯಕ್ರಮ ಇರಲಿದೆ ಎಂಬ ವೇಳಾಪಟ್ಟಿ ಇಲ್ಲಿದೆ. ಜೊತೆಗೆ, ಕರಗ ಮಹೋತ್ಸವದ ಹಿನ್ನೆಲೆ, ಈ ಬಾರಿಯ ವಿಶೇಷಗಳ ಬಗ್ಗೆ ಮಾಹಿತಿಯೂ ಇಲ್ಲಿ ಲಭ್ಯ.

Bengaluru Karaga 2024: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ: ಇಲ್ಲಿದೆ ಉತ್ಸವದ ವೇಳಾಪಟ್ಟಿ
ಬೆಂಗಳೂರು ಕರಗ
Poornima Agali Nagaraj
| Edited By: |

Updated on: Apr 15, 2024 | 10:50 AM

Share

ಬೆಂಗಳೂರು, ಏಪ್ರಿಲ್ 15: ಐತಿಹಾಸಿಕ ಬೆಂಗಳೂರು ಕರಗ (Bengaluru Karaga) ಉತ್ಸವ ಸೋಮವಾರ ಬೆಳಗ್ಗಿನಿಂದಲೇ ಆರಂಭವಾಗಿದೆ. ಇಂದಿನಿಂದ ಏಪ್ರಿಲ್ 23 ರ ವರೆಗೆ ಬೆಂಗಳೂರು ಕರಗ ಮಹೋತ್ಸವ (Karaga Festival) ನಡೆಯಲಿದ್ದು, ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. 13 ಬಾರಿ ಕರಗ ಹೊತ್ತಿರುವ ಪೂಜಾರಿ ಎ. ಜ್ಞಾನೇಂದ್ರ ಈ ಬಾರಿಯೂ ಕರಗ ಹೊರಲಿದ್ದಾರೆ. ಕರಗ ಉತ್ಸವದ ಸಂದರ್ಭದ ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ.

ಕರಗ ಕಾರ್ಯಕ್ರಮ ವೇಳಾಪಟ್ಟಿ

  • ರಾತ್ರಿ 10ಕ್ಕೆ ರಥೋತ್ಸವ ಧ್ವಜಾರೋಹಣ
  • ಏಪ್ರಿಲ್ 16 ರಿಂದ 19 ಪ್ರತಿ ದಿನ ವಿಶೇಷ ಪೂಜೆ ಮತ್ತು ಮಂಗಳಾರತಿ
  • ಏಪ್ರಿಲ್ 21ಕ್ಕೆ ಹಸಿ ಕರಗ ಆಯೋಜನೆ
  • ಏಪ್ರಿಲ್ 23 ರಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯ ರಥೋತ್ಸವ
  • ಏಪ್ರಿಲ್ 24ರಂದು ದೇವಸ್ಥಾನದಲ್ಲಿ ಗಾವು ಪೂಜೆ
  • 25ಕ್ಕೆ ಕೊನೆಯ ದಿನದ ವಸಂತೋತ್ಸವ ಧ್ವಜಾರೋಹಣ

ಈ ವರ್ಷ ಸುಮಾರು 3000 ವೀರ ಕುಮಾರರು ಕರಗದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಸಂಪಂಗಿ ಕೆರೆ ಅಂಗಳದಲ್ಲಿ ಏಪ್ರಿಲ್ 21ರಂದು ಹಸಿ ಕರಗ ನಡೆಯಲಿದೆ.

ಅದ್ದೂರಿ ಕರಗ

ಕೋವಿಡ್ 19 ಸಾಂಕ್ರಾಮಿಕದ ಕಾರಣದಿಂದ ಕಳೆದ ಕೆಲವು ವರ್ಷಗಳಿಂದ ಕರಗ ಸಾಧಾರಣವಾಗಿ ಆಚರಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ಉತ್ಸವ ಜರಗುವ ನಿರೀಕ್ಷೆ ಇದೆ.

ಕರಗದ ಹಿನ್ನೆಲೆಯೇನು?

ಪುರಾಣ ಕಥೆಗಳು ಮತ್ತು ನಂಬಿಕೆಯ ಪ್ರಕಾರ, ಕುರುಕ್ಷೇತ್ರ ಯುದ್ಧದ ನಂತರ ಪಾಂಡವರು ಸ್ವರ್ಗಾರೋಹಣ ಮಾಡುವ ವೇಳೆ ದ್ರೌಪದಿ ಮೂರ್ಛೆ ಬೀಳುತ್ತಾಳೆ. ಆದರೆ ಇದು ಪಾಂಡವರ ಅರಿವಿಗೆ ಬರುವುದಿಲ್ಲ. ಅವರು ತಿಳಿಯದೆ ಮುಂದೆ ನಡೆಯುತ್ತಾರೆ. ಸ್ವಲ್ಪ ಸಮಯದ ನಂತರ ಎಚ್ಚರ ಆದಾಗ ತಿಮಿರಾಸುರ ಎಂಬ ರಾಕ್ಷಸ ದೂರದಲ್ಲಿ ನಿಂತಿರುವುದು ದೌಪದಿಯ ಕಣ್ಣಿಗೆ ಬೀಳುತ್ತದೆ. ಆಗ ದ್ರೌಪದಿ ಆದಿಶಕ್ತಿಯ ರೂಪವನ್ನು ತೋರುತ್ತಾ ತಿಮರಾಸುರನನ್ನು ಸದೆ ಬಡಿಯಲು, ತನ್ನ ತಲೆಯಿಂದ ‘ಯಜಮಾನ’ರನ್ನು, ಹಣೆಯಿಂದ ‘ಗಣಾಚಾರಿ’ಗಳನ್ನು, ಕಿವಿಗಳಿಂದ ‘ಗೌಡ’ರನ್ನು, ಬಾಯಿಯಿಂದ ‘ಗಂಟೆಪೂಜಾರಿ’ಗಳನ್ನು ಮತ್ತು ಹೆಗಲಿನಿಂದ ‘ವೀರಕುಮಾರ’ರನ್ನು ಸೃಷ್ಟಿ ಮಾಡುತ್ತಾಳೆ. ಆಗ ದ್ರೌಪದಿ ಸೃಷ್ಟಿ ಮಾಡಿದ ಈ ಕಿರು ಸೇನೆ ರಕ್ಕಸನ ವಿರುದ್ಧ ಹೋರಾಡಿ ಗೆಲ್ಲುತ್ತದೆ. ನಂತರ ದ್ರೌಪದಿ ಆದಿಶಕ್ತಿಯಾಗಿ ಭೂಮಿಗೆ ಮರಳಿ ಬಾರದಂತೆ ಕೈಲಾಸಕ್ಕೆ ಹೋಗಿ ನೆಲೆಸಲು ನಿರ್ಧರಿಸುತ್ತಾಳೆ. ಇದರ ನೆನಪಿಗಾಗಿ ಕರಗ ಆಚರಿಸಲಾಗುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ.

ಬೆಂಗಳೂರು ಕರಗದ ಕುರಿತ ಸಮಗ್ರ ಮಾಹಿತಿಗೆ ಓದಿ: ಐತಿಹಾಸಿಕ ಬೆಂಗಳೂರು ಕರಗ ಬಗ್ಗೆ ನಿಮಗೆಷ್ಟು ಗೊತ್ತು? ಮೆರವಣಿಗೆ ವೇಳೆ ಕರಗ ದರ್ಗಾಗೆ ಹೋಗುವುದೇಕೆ?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Poornima Agali Nagaraj
Poornima Agali Nagaraj
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ