Bengaluru Karaga Mahotsava: ಬೆಂಗಳೂರಿನ ಐತಿಹಾತಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ, ಬೈಕ್​ಗಳು ಭಸ್ಮ

Bengaluru News: ಬೆಂಗಳೂರಿನ ಐತಿಹಾಸಿ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ ಸಂಭವಿಸಿ ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದ ಮುಂದೆ ನಿಲ್ಲಿಸಿದ್ದ 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮವಾದ ಘಟನೆ ನಡೆದಿದೆ.

Bengaluru Karaga Mahotsava: ಬೆಂಗಳೂರಿನ ಐತಿಹಾತಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ, ಬೈಕ್​ಗಳು ಭಸ್ಮ
ಬೆಂಗಳೂರಿನ ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ (ಸಂಗ್ರಹ ಚಿತ್ರ)
Follow us
|

Updated on:Apr 06, 2023 | 4:11 PM

ಬೆಂಗಳೂರು: ನಗರದ ತಿಗಳರಪೇಟೆಯ ಧರ್ಮರಾಯ ‌ಸ್ವಾಮಿ ದೇವಾಲಯದಲ್ಲಿ (Thigalarapet Dharmaraya Swamy Temple) ಚೈತ್ರ ಪೌರ್ಣಮಿಯ ಬೆಳದಿಂಗಳಲ್ಲಿ ನಡೆಯುವ ಐತಿಹಾಸಿನ ಕರಗ ಮಹೋತ್ಸವದ (Karaga Mahotsava) ಸಮಯದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಇಂದು (ಏಪ್ರಿಲ್ 6) ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮವಾಗಿವೆ. ಕರ್ಪೂರ ಹಚ್ಚಲಿರುವ ಹಿನ್ನೆಲೆ ಮಾಲೀಕರಿಗೆ ತಮ್ಮ ಬೈಕ್​ಗಳನ್ನು ತೆರವುಗೊಳಿಸುವಂತೆ ಮೈಕ್​ನಲ್ಲಿ ಹೇಳಿದರೂ ತೆರವು ಮಾಡಿರಲಿಲ್ಲ. ಅದಾಗ್ಯೂ, ಬೈಕ್ ನಿಲ್ಲಿಸಿದ್ದ ಸ್ಥಳ ಬಳಿ ದೊಡ್ಡ ಕರ್ಪೂರ ಹಚ್ಚಿದ ಹಿನ್ನೆಲೆ ಅದರಿಂದ ಹಾರಿದ ಬೆಂಕಿಯ ಕಿಡಿ ದ್ವಿಚಕ್ರ ವಾಹನಗಳಿಗೆ ತಗುಲಿದೆ. ಪರಿಣಾಮಾ ಪಾರ್ಕ್ ಮಾಡಿದ್ದ ಬೈಕ್​ಗಳು ಹೊತ್ತಿ ಉರಿದಿದೆ.

ಬೆಂಗಳೂರಿನ ಪ್ರಮುಖ ಕರಗ ಉತ್ಸವಕ್ಕೆ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಸಕಲ ಸಿದ್ಧತೆಗಳು ನಡೆದಿದ್ದು, ಹಿಂದೂ ಪಂಚಾಂಗದ ಪ್ರಕಾರ ಚಿತ್ರ ಪೌರ್ಣಮಿಯಂದು ಗುರುವಾರ ಮಧ್ಯರಾತ್ರಿ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ. ಗುರುವಾರ ಬೆಳಗ್ಗೆ 10.30ಕ್ಕೆ ಕಬ್ಬನ್ ಪಾರ್ಕ್‌ನ ಕರಗದ ಕುಂಟೆಯಲ್ಲಿ ದ್ರೌಪದಿ ದೇವಿಗೆ ಅರಿಶಿನ ಬಣ್ಣದ ಸೀರೆ ಉಟ್ಟು ಬಳೆಗಳನ್ನು ತೊಟ್ಟ ಕರಗ ಹೊತ್ತ ಅರ್ಚಕರು ಗಂಗಾಪೂಜೆ ಸಲ್ಲಿಸಿದರು. ಅಲ್ಲಿಂದ ಹಸಿಕರಾಗವನ್ನು ಮಂಟಪಕ್ಕೆ ತಂದು ವಿಶೇಷ ಪೂಜೆ ಸಲ್ಲಿಸಲಾಗುವುದು. ಶುಕ್ರವಾರ ಮಧ್ಯರಾತ್ರಿ 12.30ಕ್ಕೆ ಕರಗ ಮೆರವಣಿಗೆ ದೇವಸ್ಥಾನದಿಂದ ಹೊರ ಬರಲಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ

ಪುಷ್ಪ ಕರಗವನ್ನು ಕಳೆದ 12 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಅರ್ಚಕ ಜ್ಞಾನೇಂದ್ರ ವಹ್ನಿಕುಲ ಗೌಡ ಅವರು ನೆರವೇರಿಸಲಿದ್ದಾರೆ. ಮೆರವಣಿಗೆಯು ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ, ಬಳೆಪೇಟೆ, ದೊಡ್ಡಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ಹಲಸೂರು, ಕೆಆರ್‌ಮಾರುಕಟ್ಟೆ, ಕಾಟನ್‌ಪೇಟೆ ಮತ್ತಿತರ ಪ್ರದೇಶಗಳಲ್ಲಿ ಸುಮಾರು 38 ಕಿ.ಮೀ. ಸಂಚರಿಸಲಿದೆ.

ಹಜರತ್ ತವಕ್ಕಲ್ ಮಸ್ತಾನ್ ಸಾಹೇಬ್ ದರ್ಗಾಕ್ಕೆ ಕೆಲವು ಬಲಪಂಥೀಯ ಸಂಘಟನೆಗಳು ಭೇಟಿ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಆದರೆ ಇದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದ್ದು, ಧಾರ್ಮಿಕ ಸೌಹಾರ್ದತೆಯ ದ್ಯೋತಕವಾಗಿದ್ದು, ಯಾವುದೇ ಬದಲಾವಣೆಯಿಲ್ಲದೆ ಆಚರಣೆ ಮುಂದುವರಿಯಲಿದೆ ಎಂದು ಬೆಂಗಳೂರು ಕರಗ ಸಮಿತಿ ಸ್ಪಷ್ಟಪಡಿಸಿದೆ. ದಾರಿಯಲ್ಲಿ ಹಿಂದೂ ದೇವಾಲಯಗಳಿಗೆ ಹೇಗೆ ಭೇಟಿ ನೀಡುತ್ತದೋ ಹಾಗೆಯೇ ಕರಗ ದರ್ಗಾಕ್ಕೂ ಭೇಟಿ ನೀಡಲಿದೆ ಎಂದು ಸಮಿತಿ ಸದಸ್ಯರು ತಿಳಿಸಿದ್ದಾರೆ.

ವಾಹನಗಳಿಗೆ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ

ಕೆ.ಆರ್.ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಗುರುವಾರ ಮಧ್ಯರಾತ್ರಿಯಿಂದ ಶುಕ್ರವಾರ ಬೆಳಗಿನವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಾಟನ್‌ಪೇಟೆ ಮುಖ್ಯರಸ್ತೆ ಮೂಲಕ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ವಾಟಾಳ್ ನಾಗರಾಜ್ ರಸ್ತೆ ಮತ್ತು ಬಿನ್ನಿ ಮಿಲ್ ರಸ್ತೆ ಮೂಲಕ ಹೋಗುವಂತೆ ತಿಳಿಸಲಾಗಿದೆ.  ಎಎಸ್ ಚಾರ್ ರಸ್ತೆಯಿಂದ ಸಿಟಿ ಮಾರ್ಕೆಟ್ ಸರ್ಕಲ್ ಕಡೆಗೆ ಹೋಗುವ ವಾಹನಗಳು ಮೈಸೂರು ರಸ್ತೆಯ ಎಎಸ್ ಚಾರ್ ರಸ್ತೆಯಲ್ಲಿ ಬಲ ತಿರುವು ಪಡೆದು ಬ್ರಿಯಾಂಡ್ ಸರ್ಕಲ್-ರಾಯನ್ ಸರ್ಕಲ್ ಮೂಲಕ ಸಾಗಬಹುದು.

ಬಿವಿಕೆ ಅಯ್ಯಂಗಾರ್ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದ ಕಡೆಗೆ ಸಂಚರಿಸುವ ವಾಹನಗಳನ್ನು ಚಿಕ್ಕಪೇಟೆ ವೃತ್ತದಲ್ಲಿ ಪೊಲೀಸ್ ರಸ್ತೆಗೆ ಪ್ರವೇಶಿಸುವವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಕರಗ ಉತ್ಸವ ವೀಕ್ಷಿಸಲು ಬಯಸುವ ಜನರು ಬನ್ನಪ್ಪ ಪಾರ್ಕ್ ಮತ್ತು ಟೌನ್ ಹಾಲ್‌ನಲ್ಲಿ ವಾಹನಗಳನ್ನು ನಿಲ್ಲಿಸಲು ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Thu, 6 April 23