ಬೆಂಗಳೂರು, ಕರ್ನಾಟಕ ಬಂದ್​: ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಅರ್ಜಿ

Cauvery Water Dispute: ಒಂದೇ ವಾರದಲ್ಲಿ ಎರಡು ಬಾರಿ ಬಂದ್​ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು, ಕರ್ನಾಟಕ ಬಂದ್​: ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಅರ್ಜಿ
ಹೈಕೋರ್ಟ್​
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 25, 2023 | 2:05 PM

ಬೆಂಗಳೂರು ಸೆ.25: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹಿರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26 ರಂದು ಬೆಂಗಳೂರು ಬಂದ್​​ಗೆ (Bengaluru Bandh) ಕರೆ ನೀಡಿವೆ. ಅಲ್ಲದೇ ಹೋರಾಟಗಾರ ವಾಟಾಳ್​​ ನಾಗರಾಜ (Vatal Nagaraj) ಅವರು ಕೂಡ ಸೆ.29 ರಂದು ಅಖಂಡ ಕರ್ನಾಟಕ ಬಂದ್​​ಗೆ (Karnataka Bandh) ಕರೆ ನೀಡಿದ್ದಾರೆ. ಯಾವ ಬಂದ್​ಗೆ ಬೆಂಬಲಿಸಬೇಕು ಎಂಬ ಗೊಂದಲ ವಿವಿಧ ಸಂಘಟನೆಗಳಲ್ಲಿ ಮೂಡಿದೆ. ಅಲ್ಲದೇ ಒಂದೇ ವಾರದಲ್ಲಿ ಎರಡು ಬಾರಿ ಬಂದ್​ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಸೆ.26 ಬೆಂಗಳೂರು ಬಂದ್, ಸೆ.29ರಂದು ರಾಜ್ಯ ಬಂದ್​ಗೆ ಕರೆ ನೀಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲವಿಲ್ಲ

ಇನ್ನು ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲ ನೀಡಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್​ಗೆ ಬೆಂಬಲ ವಾಪಸ್ ಪಡೆದಿವೆ. ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧಾರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಓಲಾ ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್​ ಪಾಷಾ ತಿಳಿಸಿದ್ದಾರೆ

ಇದನ್ನೂ ಓದಿ: ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ನರೇಂದ್ರ ಮೋದಿಗೆ ದೇವೇಗೌಡ ಪತ್ರ

ಬಂದ್​​ಗೆ KSRTC ಸಿಬ್ಬಂದಿ ಮತ್ತು ಕಾರ್ಮಿಕ ಒಕ್ಕೂಟ ಬೆಂಬಲ

ಬೆಂಗಳೂರು ಬಂದ್​​ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್​ಗೆ ಬೆಂಗಳೂರು ಹೋಟೆಲ್​ ಮಾಲೀಕರ ಸಂಘ, KSRTC ಸಿಬ್ಬಂದಿ ಮತ್ತು ಕಾರ್ಮಿಕ ಒಕ್ಕೂಟ, ಕರ್ನಾಟಕ ಚಾಲಕರ ಒಕ್ಕೂಟ, ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ, ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್​ ಬಂದ್​ಗೆ ಬೆಂಬಲಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ