ಬೆಂಗಳೂರು ಸೆ.25: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹಿರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26 ರಂದು ಬೆಂಗಳೂರು ಬಂದ್ಗೆ (Bengaluru Bandh) ಕರೆ ನೀಡಿವೆ. ಅಲ್ಲದೇ ಹೋರಾಟಗಾರ ವಾಟಾಳ್ ನಾಗರಾಜ (Vatal Nagaraj) ಅವರು ಕೂಡ ಸೆ.29 ರಂದು ಅಖಂಡ ಕರ್ನಾಟಕ ಬಂದ್ಗೆ (Karnataka Bandh) ಕರೆ ನೀಡಿದ್ದಾರೆ. ಯಾವ ಬಂದ್ಗೆ ಬೆಂಬಲಿಸಬೇಕು ಎಂಬ ಗೊಂದಲ ವಿವಿಧ ಸಂಘಟನೆಗಳಲ್ಲಿ ಮೂಡಿದೆ. ಅಲ್ಲದೇ ಒಂದೇ ವಾರದಲ್ಲಿ ಎರಡು ಬಾರಿ ಬಂದ್ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್ಗೆ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಸೆ.26 ಬೆಂಗಳೂರು ಬಂದ್, ಸೆ.29ರಂದು ರಾಜ್ಯ ಬಂದ್ಗೆ ಕರೆ ನೀಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಬೆಂಗಳೂರು ಬಂದ್ಗೆ ಓಲಾ ಉಬರ್ ಬೆಂಬಲ ನೀಡಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್ಗೆ ಬೆಂಬಲ ವಾಪಸ್ ಪಡೆದಿವೆ. ಸೆ.29ರ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧಾರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಓಲಾ ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ
ಇದನ್ನೂ ಓದಿ: ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ನರೇಂದ್ರ ಮೋದಿಗೆ ದೇವೇಗೌಡ ಪತ್ರ
ಬೆಂಗಳೂರು ಬಂದ್ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ, KSRTC ಸಿಬ್ಬಂದಿ ಮತ್ತು ಕಾರ್ಮಿಕ ಒಕ್ಕೂಟ, ಕರ್ನಾಟಕ ಚಾಲಕರ ಒಕ್ಕೂಟ, ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ, ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಬಂದ್ಗೆ ಬೆಂಬಲಿಸಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ