ಬೆಂಗಳೂರು: 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ: 2 ವೈದ್ಯರು ಸೇರಿದಂತೆ 9 ಆರೋಪಿಗಳ ಬಂಧನ

ಕಳೆದ 2 ವರ್ಷಗಳಿಂದ ನಿರಂತರವಾಗಿ ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡಿಸುತ್ತಿದ್ದ ಇಬ್ಬರು ವೈದ್ಯರು ಸೇರಿದಂತೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಮಾಹಿತಿ ಇದೆ. ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.  

ಬೆಂಗಳೂರು: 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ: 2 ವೈದ್ಯರು ಸೇರಿದಂತೆ 9 ಆರೋಪಿಗಳ ಬಂಧನ
ಬಂಧಿತರು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 25, 2023 | 3:19 PM

ಬೆಂಗಳೂರು, ನವೆಂಬರ್​​ 25: ನಗದರಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡಿಸುತ್ತಿದ್ದ ವಿಚಾರ ಬಯಲಿ ಬಂದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ (Byappanahalli Police) ರಿಂದ ಭ್ರೂಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭ್ರೂಣ ಹತ್ಯೆ ಮಾಡುತ್ತಿದ್ದ ವೈದ್ಯರನ್ನೂ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಈ ಹಿಂದೆ ನಾಲ್ವರನ್ನು ಬಂಧಿಸಿಲಾಗಿದೆ. ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್​, ಡಾ.ಚಂದನ್ ಬಲ್ಲಾಳ್, ಡಾ.ಚಂದನ್​ ಬಲ್ಲಾಳ್​ ಪತ್ನಿ ಮೀನಾ, ಲ್ಯಾಬ್​ ಟೆಕ್ನಿಷಿಯನ್ ನಿಸ್ಸಾರ್, ಮೈಸೂರಿನ ಖಾಸಗಿ ಆಸ್ಪತ್ರೆ ರಿಸೆಪ್ಷನಿಸ್ಟ್ ರಿಜ್ಮಾ ಬಂಧಿತರು.

ಸಿಂಡಿಕೇಟ್ ಮಾಡಿಕೊಂಡು ಕೃತ್ಯವೆಸಗುತ್ತಿದ್ದರು. ತಿಂಗಳಲ್ಲಿ 20ರಿಂದ 25 ಭ್ರೂಣ ಹತ್ಯೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಕಳೆದ 2 ವರ್ಷಗಳಿಂದ ನಿರಂತರವಾಗಿ ಕೃತ್ಯವೆಸಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಜಕುಮಾರ್ ರಸ್ತೆಯ ಆಯುರ್ವೇದಿಕ್ ಪೈಲ್ಸ್ ಡೇ ಕೇರ್ ಸೆಂಟರ್​, ಉದಯಗಿರಿಯಲ್ಲಿನ ಮಾತಾ ಆಸ್ಪತ್ರೆಯನ್ನು ಪೊಲೀಸರು ಸೀಜ್​ ಮಾಡಿದ್ದಾರೆ.

ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣೆಗಾಗಿ ಪಾದಯಾತ್ರೆ; ಪ್ರಧಾನಿಗೆ ಮನವಿ ಸಲ್ಲಿಸಲಿರುವ ಕಾರ್ಯಕರ್ತ

ತನಿಖೆ ವೇಳೆ 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಮಾಹಿತಿ ಇದೆ. ಅಕ್ಟೋಬರ್​​ನಲ್ಲಿ ಮೊದಲಿಗೆ ಕೇಸ್​ ದಾಖಲು ಮಾಡಿದ್ದ ಪೊಲೀಸರು, ಸದ್ಯ ಇಬ್ಬರು ವೈದ್ಯರು ಸೇರಿದಂತೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಹೇಳಿದ್ದಿಷ್ಟು

ಪೂರ್ವ ವಿಭಾಗದ ಡಿಸಿಪಿ ದೇವರಾಜ್​​ ಮಾತನಾಡಿ, ಕಳೆದ ಹದಿನೈದು ದಿನಗಳ ಹಿಂದೆ ಬೈಯಪ್ಪನಹಳ್ಳಿಯಲ್ಲಿ ಒಂದು ಕೇಸ್ ದಾಖಲಾಗಿತ್ತು. ಮಂಡ್ಯ ಮೂಲದ ನಾಲ್ವರು ವ್ಯಕ್ತಿಗಳು ಬೆಂಗಳೂರಿನ ಆಸ್ಪತ್ರೆಗಳಿಗೆ ಭ್ರೂಣ ಪತ್ತೆಗೆ ಬರುವವರ ಮಾಹಿತಿ ಕಲೆಹಾಕಿದ್ದರು. ಈ ಮಾಹಿತಿ ತಿಳಿದ ಪೊಲೀಸರು ಆ ನಾಲ್ವರನ್ನು ಕೂಡ ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದರು.

ಇದನ್ನೂ ಓದಿ: ‘ಮಗುವನ್ನು ಕೊಲ್ಲಲು ಸಾಧ್ಯವಿಲ್ಲ’: ಗರ್ಭಪಾತ ಪ್ರಕರಣ ವಿಚಾರಣೆ ವೇಳೆ ಸುಪ್ರೀಂಕೋರ್ಟ್

ಭ್ರೂಣ ಪತ್ತೆಗೆ ಮಂಡ್ಯದ ಕಬ್ಬಿನ ಗದ್ದೆಯಲ್ಲಿ ಶೀಟ್ ಮನೆ ಮಾಡಿಕೊಂಡು ಅದರಲ್ಲಿ ಸ್ಕ್ಯಾನಿಂಗ್ ಮಾಡಿದ್ದರು. ಪೊಲೀಸರು ದಾಳಿ ನಡೆಸಿ ಸ್ನ್ಕಾನಿಂಗ್ ಯಂತ್ರ ಸೇರಿದಂತೆ ಕೆಲ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಹೆಚ್ಚಿನ ವಿಚಾರಣೆ ವೇಳೆ ಕೆಲ ಆಸ್ಪತ್ರೆಗಳು ಮತ್ತು ವೈದ್ಯರು ಭಾಗಿಯಾಗಿರುವುದು ಗೊತ್ತಾಗಿತ್ತು. ಭ್ರೂಣ ಪತ್ತೆಯ ಜೊತೆಗೆ ಹತ್ಯೆ ಕೂಡ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು ಎಂದಿದ್ದಾರೆ.

ಮೈಸೂರು ಮಾತಾ ಆಸ್ಪತ್ರೆಯ ಚಂದನ್ ಬಲ್ಲಾಳ್ ಮತ್ತು ಪತ್ನಿ ಮೀನಾ ಬಲ್ಲಾಳ್, ಮತ್ತೊಬ್ಬ ವೈದ್ಯ ಡಾ, ತುಳಸಿರಾಮ್, ರಿಜ್ಮಾ ಮಧ್ಯವರ್ತಿಯಾಗಿ ಕೆಲಸ ಮಾಡಿ ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಈ ಗ್ಯಾಂಗ್ ಈ ರೀತಿ ಕೃತ್ಯವೆಸಗುತ್ತಿರುವುದು ಗೊತ್ತಾಗಿದೆ. ತನಿಖೆ ಮುಂದುವರೆಸಿದ್ದೇವೆ, ಬೇರೆ ಆಸ್ಪತ್ರೆಗಳು ಭಾಗಿಯಾಗಿದ್ದಾವ ಎನ್ನುವ ಬಗ್ಗೆ ಪರಿಶೀಲನೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!