ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರ ಫಹೀಮ್ ಉತ್ತರ ಪ್ರದೇಶದಲ್ಲಿ ಬಂಧನ: ಮನೆ ಬುಲ್ಡೋಜರ್​ನಿಂದ ನೆಲಸಮ

ಕಳ್ಳತನ ಪ್ರಕರಣದಲ್ಲಿ ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಖದೀಮ ಫಹೀಮ್ ಅಲಿಯಾಸ್ ಎಟಿಎಂನನ್ನು ಮುರ್ದಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ, ಅಲ್ಲಿ ಆತನ ಮನೆಯನ್ನು ಜೆಸಿಬಿ ಬಳಸಿ ಧ್ವಂಸ ಮಾಡಲಾಗಿದೆ. ಸದ್ಯ ಫಹೀಮ್​ನನ್ನು ಬಾಡಿ ವಾರಂಟ್ ಪಡೆದು ವಶಕ್ಕೆ ಪಡೆಯಲು ಕೋಡಿಗೆಹಳ್ಳಿ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರ ಫಹೀಮ್ ಉತ್ತರ ಪ್ರದೇಶದಲ್ಲಿ ಬಂಧನ: ಮನೆ ಬುಲ್ಡೋಜರ್​ನಿಂದ ನೆಲಸಮ
ಫಹೀಮ್
Follow us
ರಾಚಪ್ಪಾಜಿ ನಾಯ್ಕ್
| Updated By: Ganapathi Sharma

Updated on: Nov 12, 2024 | 8:15 AM

ಬೆಂಗಳೂರು, ನವೆಂಬರ್ 12: ವಿವಿಧ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಫಹೀಮ್ ಅಲಿಯಾಸ್ ಎಟಿಎಂನನ್ನು ಉತ್ತರ ಪರದೇಶದಲ್ಲಿ ಬಂಧಿಸಲಾಗಿದೆ. ಅಷ್ಟೇ ಅಲ್ಲದೆ, ಅಲ್ಲಿರುವ ಆತನ ಮನೆಯನ್ನು ಬುಲ್ಡೋಜರ್​​ನಿಂದ ನೆಲಸಮ ಮಾಡಲಾಗಿದೆ. ಕಳ್ಳತನ, ದರೋಡೆ ಗ್ಯಾಂಗ್​ನ ಮಾಸ್ಟರ್​ ಮೈಂಡ್ ಆಗಿದ್ದ ಫಹೀಮ್​ ಗ್ಯಾಂಗ್​ನ ಇಬ್ಬರನ್ನು ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿತ್ತು.

ದೇಶದಾದ್ಯಂತ ಕಳ್ಳತನದಲ್ಲಿ ಶಾಮೀಲಾಗಿದ್ದ ಫಹೀಮ್

ಫಹೀಮ್ ಗ್ಯಾಂಗ್ ಬೆಂಗಳೂರಿನಲ್ಲಿ ಅಷ್ಟೇ ಅಲ್ಲ, ಉತ್ತರ ಪ್ರದೇಶದ ವಿವಿಧ ನಗರಗಳೂ ಸೇರಿದಂತೆ ದೇಶದಾದ್ಯಂತ ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾಗಿತ್ತು. ಈತನಿಗಾಗಿ ಬೆಂಗಳೂರು ಪೊಲೀಸರು ಮಾತ್ರವಲ್ಲದೆ, ವಿವಿಧ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ಪೆರೋಲ್ ಮೇಲೆ ಹೊರಬಂದು ಕೃತ್ಯ

ಈ ಹಿಂದೆ ಅಪರಾಧ ಪ್ರರಕಣದಲ್ಲಿ ಜೈಲು ಸೇರಿದ್ದ ಫಹೀಮ್ ಪೆರೋಲ್ ಮೇಲೆ ಹೊರಬಂದಿದ್ದ. ಪೆರೋಲ್ ಮೇಲೆ ಹೊರಗಿದ್ದಾಗಲೇ ಮತ್ತಷ್ಟು ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿದ್ದ.

ಸಹಕಾರ ನಗರದಲ್ಲಿ ವೈದ್ಯರ ಮನೆ ಕಳ್ಳತನ

ಏಪ್ರಿಲ್ 24 ರಂದು ಫಹೀಮ್ ಗ್ಯಾಂಗ್ ಮುಸುಕುಧಾರಿಗಳಾಗಿ ಬಂದು ಸಹಕಾರನಗರದಲ್ಲಿ ಮನೆಗಳ್ಳತನ ಮಾಡಿತ್ತು. ವೈದ್ಯ ಡಾ. ಉಮಾಶಂಕರ್ ಮನೆಗೆ ನುಗ್ಗಿ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿತ್ತು. ಕಳ್ಳತನದ ಬಗ್ಗೆ ಅರಿವಾಗಿ ಪ್ರಶ್ನಿಸಲು ಬಂದ ವೈದ್ಯರಿಗೆ ಗನ್ ತೋರಿಸಿ ಬೆದರಿಸಿ ಗ್ಯಾಂಗ್ ಪರಾರಿಯಾಗಿತ್ತು. ಈ ಪ್ರಕರಣದಲ್ಲಿ ಫಹೀಮ್ ಎ1 ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಈತನ ಬಂಧನಕ್ಕೆ ಕೊಡಿಗೆಹಳ್ಳಿ ಪೊಲೀಸರು ಬಲೆ‌ ಬೀಸಿದ್ದ. ಘಟನೆ ಸಂಬಂಧ ಮೂವರನ್ನು ಈಗಾಗಲೇ ಬಂಧಿಸಿದ್ದರು. ಆದರೆ, ಫಹೀಮ್ ಮಾತ್ರ ಬೆಂಗಳೂರು ಪೊಲೀಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ.

ಇದನ್ನೂ ಓದಿ: ಬೆಂಗಳೂರಿನ ಪ್ರತಿಷ್ಠಿತ ​ಹೋಟೆಲ್​ಗೆ ಬಾಂಬ್ ಬೆದರಿಕೆ ಸಂದೇಶ

ಸದ್ಯ ಉತ್ತರ ಪ್ರದೇಶದ ಮುರ್ದಾಬಾದ್ ಪೊಲೀಸರು ಫಹೀಮ್​​ನನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಮನೆಯನ್ನೂ ನೆಲಸಮಗೊಳಿಸಿದ್ದಾರೆ.

ಈತನ ಬಂಧನದಿಂದ ದೇಶಾದ್ಯಂತ 65 ಪ್ರಕರಣಗಳ ತನಿಖೆ ಚುರುಕುಗೊಳ್ಳಲಿವೆ. ಸದ್ಯ ಫಹೀಮ್​ನನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆಯಲು ಕೊಡಿಗಹಳ್ಳಿ ಪೊಲೀಸರು ಮುಂದಾಗಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ