AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವು ಮಾಡಿದ್ದು ಟೀಕೆಗೊಳಗಾದ ಬೆನ್ನಲ್ಲೇ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಆಶ್ರಯ ಯೋಜನೆ ಅಡಿ ಮನೆ ನೀಡುವುದಾಗಿ ಸರ್ಕಾರ ಹೇಳಿತ್ತು. ಅದರಂತೆ, ಜನವರಿ 2ಕ್ಕೆ ಮನೆ ಹಂಚಿಕೆ ಆಗಲಿದೆ ಎಂದೂ ಹೇಳಲಾಗಿತ್ತು. ಆದರೆ, ಮನೆ ಹಂಚಿಕೆಗೆ ಈಗ ದೊಡ್ಡ ತೊಡಕು ಎದುರಾಗಿದೆ. ಏನದು? ಇಲ್ಲಿದೆ ಮಾಹಿತಿ.

ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು
ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವಿನ ಸಂಗ್ರಹ ಚಿತ್ರ
Shivaraj
| Edited By: |

Updated on: Jan 02, 2026 | 7:53 AM

Share

ಬೆಂಗಳೂರು, ಜನವರಿ 2: ಬೆಂಗಳೂರಿನ (Bengaluru) ಕೋಗಿಲು ಬಡಾವಣೆ (Kogilu Layout Row) ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ ಇಂದು ಮನೆಗಳ ಹಸ್ತಾಂತರ ಮಾಡಬೇಕಿದೆ. ಆದರೆ ಇವತ್ತೇ ನಿರಾಶ್ರಿತರಿಗೆ ಮನೆ ಸಿಗುವುದು ಅನುಮಾನ. ಅಧಿಕಾರಿಗಳು ನಿಯಮ ಪಾಲನೆಯ ಗೊಂದಲಕ್ಕೆ ಸಿಲುಕಿದ್ದಾರೆ ಎಂಬ ಖಚಿತ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಒಂದೆಡೆ ನಿಯಮಗಳ ಪಾಲನೆ ಮಾಡಬೇಕು, ಮತ್ತೊಂದೆಡೆ ರಾಜಕಾರಣಿಗಳ ಒತ್ತಡವೂ ಇದೆ. ಇವೆರಡರ ನಡುವೆ ಅಧಿಕಾರಿಗಳು ಸಿಲುಕಿಕೊಂಡಿದ್ದಾರೆ. ಪರ್ಯಾಯ ಮನೆ ನೀಡುವ ಪ್ರಕ್ರಿಯೆ ಸುಲಭವಾಗಿಲ್ಲ ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ. ಅನಧಿಕೃತವಾಗಿ ನಿರ್ಮಿಸಿದ್ದ ಮನೆಗಳ ತೆರವುಗೊಳಿಸಿದ ಸಂದರ್ಭದಲ್ಲಿ ಇದುವರೆಗೆ ಯಾವುದೇ ಪರ್ಯಾಯ ಮನೆಗಳನ್ನು ಕೊಟ್ಟಿಲ್ಲ. ಹಾಗಾಗಿ ಈಗ ಹೇಗೆ ಕೊಡುವುದು ಎಂಬ ಪ್ರಶ್ನೆ ಉದ್ಭವಿಸಿದೆ.

ಅಲ್ಲದೆ, ಅನಧಿಕೃತವಾಗಿ ನಿರ್ಮಿಸಿದ ಮನೆಗಳಿಗೆ ಕಾನೂನಿನ ಪ್ರಕಾರ ಪರ್ಯಾಯ ಮನೆ ನೀಡಲು ಅವಕಾಶವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೂ ಮಾನವೀಯ ದೃಷ್ಟಿಯಿಂದ ಮನೆ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ.

ಮಾನವೀಯ ನೆಪದಲ್ಲಿ ಮನೆ ನೀಡಲು ಮುಂದಾದರೆ, ಲಕ್ಷಾಂತರ ಕುಟುಂಬಗಳು ಇದೇ ರೀತಿ ಬೀದಿಯಲ್ಲಿ ಇವೆಯಲ್ಲವೇ ಎಂಬ ಪ್ರಶ್ನೆ ಎದುರಾಗಲಿದೆ. ಬಾಂಗ್ಲಾ ಸೇರಿದಂತೆ ಬೇರೆ ಬೇರೆ ರಾಜ್ಯಗಳು ಹಾಗೂ ದೇಶಗಳಿಂದ ಬಂದ ಕಾರ್ಮಿಕರೂ ಕೂಡ ಮನೆಗಾಗಿ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಆಶ್ರಯ ಯೋಜನೆ ಅಡಿ ಮನೆ ನೀಡಲು ನಿಗದಿತ ನಿಯಮಗಳ ಪಾಲನೆ ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮ ಆಶ್ರಯ ಯೋಜನೆ ಅಡಿ ಮನೆ ನೀಡಲು ಮಾನದಂಡ ಏನು?

  • ಫಲಾನುಭವಿ ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
  • 18 ವರ್ಷ ಮೇಲ್ಪಟ್ಟರಬೇಕು.
  • ಆಧಾರ್ ಕಾರ್ಡ್, ನಿವಾಸ ಮತ್ತು ಗುರುತಿನ ಪುರಾವೆ ಹೊಂದಿರಬೇಕು.
  • ಕಂದಾಯ ಇಲಾಖೆಯಿಂದ ಆದಾಯ ಪ್ರಮಾಣಪತ್ರ ಪಡೆದಿರಬೇಕು. 3 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರಬೇಕು.
  • ವಾಸಸ್ಥಳ ದೃಢೀಕರಣಕ್ಕೆ ರೇಷನ್ ಕಾರ್ಡ್ ಅಥವಾ ಮತದಾರ ಚೀಟಿ ಹೊಂದಿರಬೇಕು.
  • 2-3 ಪಾಸ್‌ಪೋರ್ಟ್ ಸೈಜ್ ಫೋಟೋ, ಕಟ್ಟಡ ಕಾರ್ಮಿಕರ ನೋಂದಣಿ ಇತ್ಯಾದಿ ದಾಖಲೆಗಳು ಇರಲೇಬೇಕು.

ದುಡ್ಡು ಕಟ್ಟಿರುವ ನಮಗೆ ಮೊದಲು ಮನೆ ಕೊಡಿ: ಫಲಾನುಭವಿಗಳ ಪ್ರತಿಭಟನೆ

ಒಂದೆಡೆ ಕೋಗಿಲು ನಿರಾಶ್ರಿತರಿಗೆ ಮನೆ ಕೊಡಲು ಸರ್ಕಾರ ಮುಂದಾಗಿದ್ದರೆ, ಇನ್ನೊಂದೆಡೆ, ಅಸಲಿ ಫಲಾನುಭವಿಗಳು ಸಿಡಿದೆದ್ದಿದ್ದಾರೆ. ನಾವು ದುಡ್ಡು ಕೊಟ್ಟಿದ್ದೇವೆ. ನಮಗೆ ಮೊದಲು ಮನೆ ಕೊಡಿ, ಇಲ್ಲವಾದ್ರೆ ವಿಷ ಕೊಟ್ಬುಬಿಡಿ ಎಂದು ಪ್ರತಿಭಟನೆ ನಡೆಸಿದ್ದಾರೆ. ಕೋಗಿಲು ನಿರಾಶ್ರಿತರಿಗೆ ಮನೆ ನೀಡುವ ಸರ್ಕಾರದ ನಡೆ ಅಸಲಿ ಫಲಾನುಭವಿಗಳನ್ನು ಕೆರಳಿಸಿದೆ. ನಾವು 7 ವರ್ಷದಿಂದ ದುಡ್ಡು ಕಟ್ಟಿದ್ದೇವೆ. ನಾವು ಕಟ್ಟಿದ ದುಡ್ಡಲ್ಲಿ ಅಪಾರ್ಟ್‌ಮೆಂಟ್ ಕಟ್ಟಿ ಕನ್ನಡಿಗರಲ್ಲದವರಿಗೆ ಮನೆ ಕೊಡುತ್ತಿದ್ದೀರಾ? ದುಡ್ಡು ಕಟ್ಟಿರುವ ನಮಗೆ ಮೊದಲು ಮನೆ ಕೊಡಿ ಎಂದು ರಾಜೀವ್ ಗಾಂಧಿ ವಸತಿ ನಿಗಮದ ಎಂಡಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಆಗಿದ್ದು 167 ಮನೆ, ಫ್ಲಾಟ್​ಗಾಗಿ ಸಲ್ಲಿಕೆಯಾದ ಅರ್ಜಿ 250ಕ್ಕೂ ಹೆಚ್ಚು!

ರಾಜೀವ್ ಗಾಂಧಿ ವಸತಿ ಯೋಜನೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಪ್ರತಿಕ್ರಿಯಿಸಿದ್ದು, ಜಿಬಿಎಯಿಂದ ಫಲಾನುಭವಿಗಳ ಪಟ್ಟಿ ಬರುವ ವರೆಗೂ ಮನೆ ಕೊಡಲು ಆಗಲ್ಲ ಎಂದಿದ್ದಾರೆ. ವಸತಿ ಸಚಿವ ಜಮೀರ್ ಅಹ್ಮದ್, ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ.

ದಾವಣಗೆರೆ ನಿರಾಶ್ರಿತರಿಗೆ ಕಾಳಜಿ ಕೇಂದ್ರದಿಂದಲೂ ಗೇಟ್‌ಪಾಸ್!

ಕೋಗಿಲು ನಿರಾಶ್ರಿತರಿಗೆ ಮನೆ ನೀಡಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಆದರೆ, ದಾವಣಗೆರೆಯ ರವೀಂದ್ರನಾಥ ಬಡಾವಣೆಯ 36 ಕುಟುಂಬ ಕತ್ತಲಿಗೆ ಬಿದ್ದಿವೆ. ಕಳೆದ ಅಕ್ಟೋಬರ್‌ನಲ್ಲಿ ಅಕ್ರಮ ಮನೆ ತೆರವು ಮಾಡಿದ್ದ ಸರ್ಕಾರ, ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿತ್ತು. ಆದರೆ ಈಗ 10 ಜರನ್ನು ಕಾಳಜಿ ಕೇಂದ್ರದಿಂದಲೂ ಹೊರದಬ್ಬಲಾಗಿದೆ. ಕಳೆದ 15 ದಿನದಿಂದ ಒಪ್ಪೊತ್ತಿನ ಊಟಕ್ಕೂ ಇವರು ಪರದಾಡುತ್ತಿದ್ದಾರೆ. ಬೆಂಗಳೂರಿನ ಕೋಗಿಲು ನಿವಾಸಿಗಳಿಗೆ ಒಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ನಿರಾಶ್ರಿತರು ಆಕ್ರೋಶ ಹೊರಹಾಕಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ & ಶಿವರಾಜ್ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?