ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ
ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಕೋಗಿಲಿನಲ್ಲಿ ಸರ್ವೆ ಮಾಡಿ ಮುಗಿಸಿದ್ದಾರೆ. ನಿರಾಶ್ರಿತರಿಗೆ ಮನೆ ಹಂಚಲು ಸರ್ಕಾರ ನಿರ್ಧರಿಸಿದ್ದು, ಇದೀಗ ದಿನಾಂಕ ನಿಗದಿ ಮಾಡಿದೆ.

ಬೆಂಗಳೂರು, ಡಿಸೆಂಬರ್ 31: ಕೋಗಿಲು (Kogilu) ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ (home) ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ.
ನಿರಾಶ್ರಿತರಿಗೆ ವಸತಿ ಭಾಗ್ಯ
ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಕೋಗಿಲಿನಲ್ಲಿ ಸರ್ವೆ ಮುಗಿಸಿದ್ದಾರೆ.
ಇದನ್ನೂ ಓದಿ: ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್ಐಎ ತನಿಖೆಗೆ ಆಗ್ರಹಿಸಿದ ಅಶೋಕ್
ನಿರಾಶ್ರಿತರ ಬಗ್ಗೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹೀಗಾಗಿ ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಕಾರ್ಯ ನಡೆದಿದ್ದು, 2026 ಜನವರಿ 2ರಂದು ಮನೆಗಳ ಹಸ್ತಾಂತರಕ್ಕೆ ನಿರ್ಧರಿಸಲಾಗಿದೆ.
ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್ಮೆಂಟ್ನಲ್ಲಿ ಸುಮಾರು 1ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್ಗಳಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ. ಇದೇ ಅಪಾರ್ಟ್ಮೆಂಟ್ನಲ್ಲಿ ನಿರಾಶ್ರಿತರಿಗೆ ಮನೆ ಕೊಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಕೋಗಿಲು ಲೇಔಟ್ ನಿರಾಶ್ರಿತರ ಬಗ್ಗೆ ಅಶೋಕ್ ಸ್ಫೋಟಕ ಮಾಹಿತಿ: ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ
ಹೀಗೆ ಸರ್ಕಾರ ಕೋಗಿಲಿನ ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದೆ. ಆದರೆ ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯ ಅನೇಕ ಕಡೆಯ ಜನರ ನೆರವಿಗೆ ಸರ್ಕಾರಗಳು ಹೋಗಿಲ್ಲ. ಲಿಂಗನಮಕ್ಕಿ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡವರು ಕಳೆದ 65 ವರ್ಷದಿಂದ ಹಕ್ಕುಪತ್ರಕ್ಕಾಗಿ ಹೋರಾಡುತ್ತಿದ್ದಾರೆ. ಆದರೆ ಸರ್ಕಾರಗಳು ಇವರನ್ನ ಕಣ್ಣೆತ್ತಿಯೂ ನೋಡಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




