ಬೆಂಗಳೂರು: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌

ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್‌ಪೆಕ್ಟರ್ 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರ ಕೇಸ್‌ನಲ್ಲಿ ವ್ಯಕ್ತಿಯೊಬ್ಬರನ್ನು ಸೇರಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೈಸೂರು ರಸ್ತೆಯ ಸಿಎಆರ್‌ ಗ್ರೌಂಡ್‌ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌
ಇನ್ಸ್‌ಪೆಕ್ಟರ್ ಗೋವಿಂದರಾಜು
Image Credit source: tv9 kannada

Updated on: Jan 29, 2026 | 7:15 PM

ಬೆಂಗಳೂರು, ಜನವರಿ 29: 4 ಲಕ್ಷ ರೂ. ಲಂಚ (bribe) ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್‌ಪೆಕ್ಟರ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕೇಸ್‌ನಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ

ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಅಕ್ರಮವಾಗಿ ಗಾಂಜಾ ಸಾಗಾಟ: 8 ಲಕ್ಷ ರೂ ಮೌಲ್ಯದ ಗಾಂಜಾ ವಶಕ್ಕೆ

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಮುಳಬಾಗಿಲು ಉಪ ವಿಭಾಗದ ವಿಶೇಷ ಪೊಲೀಸ್ ತಂಡ ಯಶಸ್ವಿಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದ ಚಿಂತಾಮಣಿ ರಸ್ತೆಯ ಕೊಳ್ಳೂರು ಕಾಲೋನಿ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಬೆಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿಯ ಇಬ್ಬರು ಇಂಜಿನಿಯರ್​ಗಳು

ಆರೋಪಿಗಳಿಂದ ಸುಮಾರು 8 ಲಕ್ಷ ರೂ ಮೌಲ್ಯದ 10 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು. ಆಂಧ್ರ ಪ್ರದೇಶದಿಂದ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆಯಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಈ ದಾಳಿ ನಡೆಸಿ ಬಂಧಿಸಿದ್ದರು. ಬಂಧಿತರನ್ನು ಆಂಧ್ರ ಮೂಲದ ನಾಗರಾಜ, ಗಂಟಾ ಭಾಗ್ಯಮ್ಮ, ಪಿಡುಗು ನಾಗೇಂದ್ರ ಮತ್ತು ಚರಳ ರವಣಪ್ಪ ಎಂದು ಗುರುತಿಸಲಾಗಿತ್ತು. ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.