AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Flower Show: ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಡೇಟ್ ಫಿಕ್ಸ್, ಈ ವರ್ಷ ಏನೆಲ್ಲಾ ವಿಶೇಷತೆಗಳಿರಲಿವೆ ಗೊತ್ತಾ?

213ನೇ ಫಲಪುಷ್ಪ ಪ್ರದರ್ಶನಕ್ಕೆ ಕೌಂಟ್ ಡೌನ್ ಶುರುವಾಗಿದೆ. ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗಾಜಿನ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ.

Lalbagh Flower Show: ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಡೇಟ್ ಫಿಕ್ಸ್, ಈ ವರ್ಷ ಏನೆಲ್ಲಾ ವಿಶೇಷತೆಗಳಿರಲಿವೆ ಗೊತ್ತಾ?
ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ
Follow us
TV9 Web
| Updated By: ಆಯೇಷಾ ಬಾನು

Updated on:Jan 16, 2023 | 2:35 PM

ಬೆಂಗಳೂರು: ಬೆಂಗಳೂರಿನ ಲಾಲ್ ಬಾಗ್​ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಡೇಟ್ ಫಿಕ್ಸ್ ಆಗಿದೆ(Lalbagh Flower Show 2023). ಜನವರಿ 20ರಿಂದ 30ರವರೆಗೆ ಫಲಪುಷ್ಪ ಪ್ರದರ್ಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ(Minister Munirathna) ತಿಳಿಸಿದ್ದಾರೆ. 11 ದೇಶಗಳಿಂದ 69 ವಿವಿಧ ಹೂವುಗಳ ಪ್ರದರ್ಶನ ನಡೆಯಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ 360 ಸ್ಪರ್ಧೆಗಳಿವೆ ಎಂದು ಸಚಿವ ಮುನಿರತ್ನ ಮಾಹಿತಿ ನೀಡಿದ್ದಾರೆ.

213ನೇ ಫಲಪುಷ್ಪ ಪ್ರದರ್ಶನಕ್ಕೆ ಕೌಂಟ್ ಡೌನ್ ಶುರುವಾಗಿದೆ. ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗಾಜಿನ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ. ಈ ಬಾರಿ ಅದ್ಧೂರಿಯಾಗಿ ಪ್ರದರ್ಶನ ನಡೆಸಲು ಲಾಲ್ ಬಾಗ್ ಗಾಜಿನ ಮನೆಯನ್ನು ರೆಡಿ ಮಾಡಲಾಗುತ್ತಿದೆ. ಈ ಬಾರಿಯ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಬೆಂಗಳೂರು ನಗರದ ಚಿತ್ರಣ ಕಂಗೊಳಿಸಲಿದೆ. 1,500 ವರ್ಷಗಳ ಬೆಂಗಳೂರು ನಗರದ ಇತಿಹಾಸ ಈ ವರ್ಷದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ಥೀಮ್ ಆಗಿದೆ. ಜನವರಿ 20 ರಿಂದ 30ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ವರ್ಟಿಕಲ್ ಗಾರ್ಡನ್ ರೂಪದಲ್ಲಿ ಐತಿಹಾಸಿಕ ಬೆಂಗಳೂರು ಗಡಿ ಗೋಪುರ ಅನಾವರಣಗೊಳ್ಳಲಿದೆ. ಮೆಗಾ ಫ್ಲೋರಲ್ ಫ್ಲೋ ಪರಿಕಲ್ಪನೆ ಪುಷ್ಪ ಪಿರಾಮಿಡ್​ಗಳು ಕಂಗೊಳಿಸಲಿವೆ.

ಇದನ್ನೂ ಓದಿ: ತನ್ನ ತಲೆಯನ್ನು ತಾನೇ ಬೋಳಿಸಿಕೊಂಡ ಕ್ಷೌರಿಕ; ಕ್ಯಾನ್ಸರ್​ ಪೀಡಿತ ಮಹಿಳೆಗೆ ಭಾವನಾತ್ಮಕ ಸ್ಪಂದನೆ

ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಶಾಲಾ ಮಕ್ಕಳಿಗೆ ಪ್ರವೇಶ ಉಚಿತ

ಶಾಲಾ ಮಕ್ಕಳಿಗೆ ಉಚಿತ ಪ್ರದರ್ಶನ ಇರಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಜಪಾನಿಸ್ ಕಲೆಗಳ ಪ್ರದರ್ಶನ ಕೂಡಾ ಇರಲಿದೆ. 65 ಕ್ಕೂ ಹೆಚ್ಚು ವಾರ್ಷಿಕ ಸಸ್ಯಗಳ ಪ್ರದರ್ಶನ ಇರಲಿದೆ. ವಿದೇಶದಿಂದ ಬರುವ ಹೂವಗಳ ಪ್ರದರ್ಶನ ಇರಲಿದೆ. ಡಾರ್ಜಲಿಂಗ್ ನಿಂದ ಕೂಡಾ ಹೂವುಗಳು ಪ್ರದರ್ಶನಕ್ಕೆ ಬರ್ತಿವೆ. ಲಾಲ್ ಬಾಗ್ ನಲ್ಲಿ ಈ ಬಾರಿ ನಾಲ್ಕು ಗೇಟ್​ಗಳಿಂದ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಸದ್ಯ ಫಲ ಪುಷ್ಪ ಪ್ರದರ್ಶನಕ್ಕಾಗಿಯೇ ಸುಮಾರು ಒಂದು ತಿಂಗಳಿನಿಂದ ನಿರಂತರವಾಗಿ ತೋಟಗಾರಿಕೆ ಇಲಾಖೆ ಕೆಲಸ ಮಾಡ್ತಿದೆ. ಎರಡರಿಂದ ಮೂರು ಕೋಟಿ ವೆಚ್ಚದಲ್ಲಿ ಫಲಪುಷ್ಪ ಪ್ರರ್ದಶನ ಮಾಡಲಾಗ್ತಿದೆ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:35 pm, Mon, 16 January 23

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ