ಕೋಟ್ಯಾಂತರ ಜನರ ಕರ್ಮಭೂಮಿ. ಲಕ್ಷಾಂತರ ಜನರಿಗೆ ಅನ್ನ ನೀರು ನೀಡಿರುವ ಬೆಂಗಳೂರಿನ ಇತಿಹಾಸ ಪರಿಚಯಿಸಲು ಲಾಲ್ ಬಾಗ್ ಮುಂದಾಗಿದೆ. ನಾಡ ಪ್ರಭು ಕೆಂಪೇಗೌಡರು ಕಟ್ಟಿದ ರಾಜಧಾನಿ ಬೆಂಗಳೂರಿನ ಇತಿಹಾಸ, ಪರಂಪರೆ ಬಗ್ಗೆ ಹೂಗಳ ಮೂಲಕ ತೋರಿಸೋಕೆ ತೋಟಗಾರಿಕೆ ಇಲಾಖೆ ಮುಂದಾಗಿದ್ದು ಸಿದ್ಧತೆ ಶುರುವಾಗಿದೆ. (ಚಿತ್ರ; ಸಾಮಾಜಿಕ ಜಾಲತಾಣ)
ಪ್ರತಿ ವರ್ಷದಂತೆ ಈ ವರ್ಷವೂ ಗಣರಾಜ್ಯೋತ್ಸವದ ಅಂಗವಾಗಿ ಜನವರಿ 20 ರಿಂದ 30 ರವರಗೆ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿದೆ. ನಗರದ ಲಾಲ್‌ಬಾಗ್ ನಲ್ಲಿ 213 ನೇ ಫ್ಲವರ್ ಶೋ ಆಯೋಜಿಸಲಾಗಿದೆ. ಈ ಪ್ರದರ್ಶನವನ್ನು ಜನವರಿ 20 ರಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. (ಚಿತ್ರ; ಸಾಮಾಜಿಕ ಜಾಲತಾಣ)
ಈ ಬಾರಿಯ ಫ್ಲವರ್ ಶೋಗೆ ಎರಡರಿಂದ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರು ಸಮಗ್ರ ಇತಿಹಾಸ ದರ್ಶನಕ್ಕೆ ತಯಾರಿ ನಡೆದಿದೆ. ಸದ್ಯ ಫ್ಲವರ್ ಶೋಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ತಯಾರಿ ಜೋರಾಗಿದೆ. (ಚಿತ್ರ: ತೋಟಗಾರಿಕೆ ಇಲಾಖೆ)
ಇನ್ನೂ ಬೆಂಗಳೂರು ಇತಿಹಾಸದ ಪ್ರತಿಬಿಂಬವಾಗಿ ದುರ್ಗ, ಲಾಲ್ ಬಾಗ್ ಬಂಡೆ, ವರ್ಟಿಕಲ್ ಗಾರ್ಡನ್ ರೂಪದಲ್ಲಿ ಗಡಿ ಗೋಪುರ, ಕಾಡುಮಲ್ಲೇಶ್ವರ ದೇವಾಲಯ, ಟಿಪ್ಪುವಿನ ಬೇಸಿಗೆ ಅರಮನೆ, ಹೈಕೋರ್ಟ್, ಬೆಂಗಳೂರು ಅರಮನೆ, ವಿಧಾನಸೌಧದ ಕಲಾಕೃತಿಗಳು ಬಣ್ಣ ಬಣ್ಣದ ಹೂಗಳ ನಡುವೆ ಅರಳಲಿವೆ. (ಚಿತ್ರ: ಆಶಾ ಕೃಷ್ಣಸ್ವಾಮಿ)
ಈ ಬಾರಿ ಒಟ್ಟು112 ಪುಷ್ಪ ಡೋಮ್ ಪ್ರದರ್ಶನವಿದ್ದು, ಹಾಲೆಂಡ್, ಕೊಲಂಬಿಯಾ, ಇಸ್ರೇಲ್, ಚಿಲಿ, ನೆದರ್ ಲ್ಯಾಂಡ್ಸ್, ಬೆಲ್ಜಿಯಂ, ಕೀನ್ಯಾ, ಆಸ್ಟ್ರೇಲಿಯಾ, ಯಥೋಪಿಯಾ ಸೇರಿದಂತೆ 11 ವಿದೇಶಗಳ 69 ಜಾತಿಯ ಹೂಗಳನ್ನು ಪ್ರದರ್ಶಿಸಲಾಗುತ್ತಿದೆ. (ಚಿತ್ರ: ಆಶಾ ಕೃಷ್ಣಸ್ವಾಮಿ)
ಡಾರ್ಜಿಲಿಂಗ್ ನ ಸಿಂಬಡಿಯ ಆರ್ಕಿಡ್ಸ್ ಹೂವು ಈ ಬಾರಿಯ ಮೇನ್ ಅರ್ಟ್ರಾಕ್ಷನ್ ಆಗಿದೆ. ಇನ್ನೂ ತೋಟಗಾರಿಕೆ ಇಲಾಖೆ ವತಿಯಿಂದಲೇ 6 ಲಕ್ಷ ಹೂವಿನ ಕುಂಡಗಳನ್ನು ಪ್ರದರ್ಶಿಸಲಾಗುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು10-12 ಲಕ್ಷಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇದೆ. (ಚಿತ್ರ: ಆಶಾ ಕೃಷ್ಣಸ್ವಾಮಿ)
ವಯಸ್ಕರಿಗೆ ಸಾಮಾನ್ಯ ದಿನಗಳಲ್ಲಿ 70 ರೂಪಾಯಿ, ರಾಜಾ ದಿನಗಳಲ್ಲಿ 75 ರೂಪಾಯಿ ನಿಗದಿ ಮಾಡಲಾಗಿದೆ. ಇನ್ನೂ 12 ವರ್ಷ ಒಳಗಿನ ಮಕ್ಕಳಿಗೆ ಎಲ್ಲಾ ದಿನಗಳಲ್ಲಿ 30 ರೂಪಾಯಿ ಫಿಕ್ಸ್ ಮಾಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಾಲ್ಕು ಗೇಟ್ ಗಳಲ್ಲಿಯೂ ಟಿಕೆಟ್ ಕೌಂಟರ್ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. (ಚಿತ್ರ: ಆಶಾ ಕೃಷ್ಣಸ್ವಾಮಿ)
Published On - 11:23 am, Thu, 19 January 23