AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್​ ಬಾಗ್​ ಫಲಪುಷ್ಪ ಪ್ರದರ್ಶನ: ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ 

Bengaluru Traffic Advisory: ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆ ಇದೆ. ಹೀಗಾಗಿ, ಸಂಚಾರ ದಟ್ಟಣೆಯನ್ನು ತಪ್ಪಿಸಲು, ಬೆಂಗಳೂರು ಸಂಚಾರ ಪೊಲೀಸರು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಿದ್ದಾರೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಮತ್ತು ವಾಹನಗಳ ನಿಲುಗಡೆಗೆ ನಿಗದಿತ ಸ್ಥಳಗಳನ್ನು ಒದಗಿಸಲಾಗಿದೆ. ಪ್ರದರ್ಶನ ವೀಕ್ಷಿಸಲು ಬರುವವರು ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ.

ಲಾಲ್​ ಬಾಗ್​ ಫಲಪುಷ್ಪ ಪ್ರದರ್ಶನ: ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ 
ಫಲಪುಷ್ಪ ಪ್ರದರ್ಶನ
ವಿವೇಕ ಬಿರಾದಾರ
|

Updated on: Jan 17, 2025 | 7:42 AM

Share

ಬೆಂಗಳೂರು, ಜನವರಿ 17: ಗಣರಾಜ್ಯೋತ್ಸವ ದಿನಾಚರಣೆ (Republic Day) ಪ್ರಯುಕ್ತ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ (Lal Bagh)​ ಫಲಪುಷ್ಪ ಪ್ರದರ್ಶನ (Flower Show) ಆರಂಭವಾಗಿದೆ. ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಗಣ್ಯವ್ಯಕ್ತಿಗಳು, ಸಾರ್ವಜನಿಕರು, ಪ್ರವಾಸಿಗರು ಹಾಗೂ ಶಾಲಾ ವಿದ್ಯಾರ್ಥಿಗಳನ್ನೊಳಗೊಂಡಂತೆ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು (Bengaluru City Traffic Police) ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್​ ನಿಷೇಧಿಸಿದ್ದಾರೆ. ಯಾವ್ಯಾವ ರಸ್ತೆಯಲ್ಲಿ ಸಂಚಾರ ಮತ್ತು ಪಾರ್ಕಿಂಗ್​ ನಿಷೇಧ, ಪರ್ಯಾಯ ಮಾರ್ಗ ಇಲ್ಲಿದೆ ವಿವರ.

ಸಂಚಾರ ನಿರ್ಬಂಧ

10ನೇ ಕ್ರಾಸ್ ಡಾ. ಮರಿಗೌಡ ರಸ್ತೆ: ಡೈರಿ ಸರ್ಕಲ್ ಕಡೆಯಿಂದ ಲಾಲ್‌ಬಾಗ ಕಡೆಗೆ ಬರುವ ವಾಹನಗಳಿಗೆ ನಿರ್ಬಂಧಿಸಲಾಗಿದೆ.

ಲಾಲ್​ಬಾಗ್ ರಸ್ತೆ, ಊರ್ವಶಿ ಜಂಕ್ಷನ್​​​: ಸುಬ್ಬಯ್ಯ ಸರ್ಕಲ್​ ಕಡೆಯಿಂದ ಲಾಲ್​ಬಾಗ್​ ಮುಖ್ಯ ದ್ವಾರದ ಕಡೆಗೆ ಬರುವ ವಾಹನಗಳಿಗೆ ನಿರ್ಬಂಧಿಸಲಾಗಿದೆ.

ಸಿದ್ದಯ್ಯ ರಸ್ತೆ ಕಡೆಯಿಂದ ಲಾಲ್​ಬಾಗ್​ ಮುಖ್ಯ ದ್ವಾರದ ಕಡೆಗೆ ಬರುವ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಪರ್ಯಾಯ ಮಾರ್ಗ:

10ನೇ ಕ್ರಾಸ್ ಡಾ. ಮರಿಗೌಡ ರಸ್ತೆ

ಡೈರಿ ಸರ್ಕಲ್ ಕಡೆಯಿಂದ ಲಾಲ್‌ಬಾಗ ಕಡೆಗೆ ಬರುವ ವಾಹನಗಳು 10ನೇ ಕ್ರಾಸ್ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಸಿ.ಟಿ ಮಾರ್ಕೇಟ್, ಮೆಜಿಸ್ಟಿಕ್, ಕಡೆಗೆ ಎಲ್ಸನ್ ಗಾರ್ಡನ್ ಮುಖ್ಯ ರಸ್ತೆಯ ಹಾಗೂ ಬಿಟಿಎಸ್ ರಸ್ತೆಯ ಮುಖಾಂತರ ಬಿಎಮ್ಟಿಸಿ (ಕೆ.ಹೆಚ್) ರಸ್ತೆಯ ಕಡೆಗೆ ಸಂಪರ್ಕಿಸಬಹುದಾಗಿದೆ.

ಊರ್ವಶಿ ಜಂಕ್ಷನ್, ಲಾಲ್‌ಬಾಗ್ ರಸ್ತೆ

ಸುಬ್ಬಯ್ಯ ಸರ್ಕಲ್ ಕಡೆಯಿಂದ, ಸಿಟಿ ಮಾರ್ಕೇಟ್ ಕಡೆಯಿಂದ, ಲಾಲ್ಬಾಗ, ಜಯನಗರ, ಎಲೇಕ್ಟ್ರಾನಿಕ್ ಸಿಟಿ, ಹೊಸೂರು ಕಡೆ ಸಂಚರಿಸುವ ವಾಹನಗಳು ಊರ್ವಶಿ ಜಂಕ್ಷನ್‌ನಲ್ಲಿ ನೇರ ಹಾಗೂ ಎಡ ತಿರುವು ಪಡೆದು ಸಿದ್ದಯ್ಯ ರಸ್ತೆಯ ಮುಖಾಂತರ ಸಂಚರಿಸಿ ಡಾ. ಮಂಗೌಡ ರಸ್ತೆಗೆ ಸಂಪರ್ಕಿಸಬಹುದಾಗಿದೆ.

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

  • ಡಾ. ಮರಿಗೌಡ ರಸ್ತೆ, ಲಾಲ್ ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ನಿಷೇಧಿಸಲಾಗಿದೆ.
  • ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ನಿಷೇಧಿಸಲಾಗಿದೆ.
  • ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಭಾಗ್ ಮುಖ್ಯದ್ವಾರದವರೆಗೆ ನಿಷೇಧಿಸಲಾಗಿದೆ.
  • ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್​ವರೆಗೆ ನಿಷೇಧಿಸಲಾಗಿದೆ.
  • ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್​ನಿಂದ ಪೋಸ್ಟ್ ಆಫೀಸ್ ರಸ್ತೆಯ ಎರಡೂ ಬದಿಗಳಲ್ಲಿ ನಿಷೇಧಿಸಲಾಗಿದೆ.
  • ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ ನಿಷೇಧಿಸಲಾಗಿದೆ.
  • ಲಾಲ್‌ಬಾಗ್ ವೆಸ್ಟ್ಗೇಟ್‌ನಿಂದ ಆರ್.ವಿ. ಟೀಚರ್ ಕಾಲೇಜ್​ವರೆಗೆ ನಿಷೇಧಿಸಲಾಗಿದೆ.
  • ಆರ್‌ವಿ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್​ವರೆಗೆ ನಿಷೇಧಿಸಲಾಗಿದೆ.
  • ಅಶೋಕ ಪಿಲ್ಲರ್‌ನಿಂದ ಸಿದ್ದಾಮರ ಜಂಕ್ಷನ್​ವರೆಗೆ ನಿಷೇಧಿಸಲಾಗಿದೆ.

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  • ಡಾ. ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  • ಕೆ.ಹೆಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  • ಡಾ. ಮರಿಗೌಡ ರಸ್ತೆ-ಹಾಪ್ ಕಾಮ್ಸ್ ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  • ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ಪ್ರಯಾಣಿಕರನ್ನು ಪಿಕಪ್​ ಮತ್ತು ಡ್ರಾಪ್​ ಮಾಡುವ ಸ್ಥಳಗಳು

ಲಾಲ್‌ಬಾಗ್ ಮುಖ್ಯ ದ್ವಾರ ಬಳಿ

  • ಲಾಲ್​​​ಬಾಗ್ ರಸ್ತೆಯ ಕಡೆಯಿಂದ ಹಾಗೂ ಡಾ. ಮರಿಗೌಡ ರಸ್ತೆಯ ಕಡೆಯಿಂದ ಬರುವ ವಾಹನಗಳು ಲಾಲ್​ಬಾಗ ಮುಖ್ಯ ದ್ವಾರದ ಬಳಿ.

ಲಾಲ್ ಬಾಗ್ ಪೂರ್ವ ದ್ವಾರ: (ಕೆ.ಹೆಚ್ ಸರ್ಕಲ್)

ಕೆ.ಹೆಚ್ ರಸ್ತೆಯ ಕಡೆಯಿಂದ ಹಾಗೂ ಡಾಕಿ ಮರಿಗೌಡ ರಸ್ತೆಯ ಕಡೆಯಿಂದ ಬರುವ ವಾಹನೆಗಳು ಲಾಲ್​ಬಾಗ್​ ಪೂರ್ವ ದ್ವಾರದ ಬಳಿ.

1 ತಿಂಗಳು ವಾಹನ ಸಂಚಾರ ನಿರ್ಬಂಧ

ಎನ್.ಟಿ.ಪೇಟೆಯ 1ನೇ ಮತ್ತು 2ನೇ ಮುಖ್ಯರಸ್ತೆ ಹಾಗೂ ಅಡ್ಡ ರಸ್ತೆಗಳಲ್ಲಿ ಬಿಬಿಎಂಪಿ ವೈಟ್‌ ಟ್ಯಾಪಿಂಗ್ ಕಾಮಗಾರಿ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಎನ್.ಟಿ ಪೇಟೆ 1ನೇ ಮತ್ತು 2ನೇ ಮುಖ್ಯರಸ್ತೆಗಳಲ್ಲಿ ಜನವರಿ 13 ರಿಂದ ಫೆಬ್ರವರಿ ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು:

ಪಿ.ಎಂ.ಕೆ ರಸ್ತೆಯಿಂದ ಮೈಸೂರು ರಸ್ತೆಗೆ ಹೋಗುವ ವಾಹನ ಸವಾರರು ಮಿಂಟೊ ಜಂಕ್ಷನ್ ಬಳಿ ಎಡ ತಿರುವನ್ನು ಪಡೆದು ಎವಿ ರಸ್ತೆಯಲ್ಲಿ ಚಲಿಸಿ ಹೊಸದಾಗಿ ನಿರ್ಮಿಸಿರುವ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆಯ ಬಳಿ ಬಲ ತಿರುವು ಪಡೆದು ಮೈಸೂರು ರಸ್ತೆಗೆ ಸಂಪರ್ಕ ಪಡೆದು ಸಂಚರಿಸಬಹುದಾಗಿದೆ.

ಪಿ.ಎಂ.ಕೆ ರಸ್ತೆಯಿಂದ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ವಾಹನ ಸವಾರರು ಮಿಂಟೊ ಜಂಕ್ಷನ್ ಬಳಿ ಬಲ ತಿರುವನ್ನು ಪಡೆದು ಎ.ವಿ ರಸ್ತೆಯ ಮೂಲಕ ಮೆಡಿಕಲ್ ಕಾಲೇಜು ಜಂಕ್ಷನ್ ಬಳಿ ಎಡ ತಿರುವನ್ನು ಪಡೆದು ಕೆ.ಆರ್ ರಸ್ತೆಯ ಮೂಲಕ ಮೆಜೆಸ್ಟಿಕ್ ಕಡೆಗೆ ಸಂಪರ್ಕ ಹೋಗಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್