Lalbagh Flower Show: 2024ರ ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನದಲ್ಲಿ ವಚನ ಸಾಹಿತ್ಯ, ಬಸವೇಶ್ವರರ ಪ್ರತಿಕೃತಿ

ಪ್ರತಿ ವರ್ಷದಂತೆ 2024ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಲಾಲ್​ಬಾಗ್ ಸಜ್ಜಾಗುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಜಗಜ್ಯೋತಿ ಬಸವೇಶ್ವರ ಅವರ ಹೂವಿನ ಪ್ರತಿಕೃತಿ ಪ್ರಮುಖ ಆಕರ್ಷಣೆಯಾಗಲಿದೆ.

Lalbagh Flower Show: 2024ರ ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನದಲ್ಲಿ ವಚನ ಸಾಹಿತ್ಯ, ಬಸವೇಶ್ವರರ ಪ್ರತಿಕೃತಿ
ಲಾಲ್​ಬಾಗ್
Follow us
ವಿವೇಕ ಬಿರಾದಾರ
|

Updated on:Dec 27, 2023 | 8:43 AM

ಬೆಂಗಳೂರು, ಡಿಸೆಂಬರ್​ 27: ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನ (Lalbagh Flower Show) ಮನಮೋಹಕವಾಗಿರುತ್ತದೆ. ಪ್ರತಿ ವರ್ಷದಂತೆ 2024ರ ಗಣರಾಜ್ಯೋತ್ಸವ (Republic Day) ಫಲಪುಷ್ಪ ಪ್ರದರ್ಶನಕ್ಕೆ ಲಾಲ್​ಬಾಗ್ ಸಜ್ಜಾಗುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಜಗಜ್ಯೋತಿ ಬಸವೇಶ್ವರ ಅವರ ಹೂವಿನ ಪ್ರತಿಕೃತಿ ಪ್ರಮುಖ ಆಕರ್ಷಣೆಯಾಗಲಿದೆ. 11 ದಿನಗಳ ಫಲಪುಷ್ಪ ಪ್ರದರ್ಶನವು 2024ರ ಜನವರಿ 18 ರಂದು ಉದ್ಘಾಟನೆಗೊಳ್ಳಲಿದ್ದು ಜನವರಿ 28 ರಂದು ಮುಕ್ತಾಯಗೊಳ್ಳಲಿದೆ. ತೋಟಗಾರಿಕಾ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಮತ್ತು ಲಾಲ್‌ಬಾಗ್ ನಿರ್ದೇಶಕ ಡಿಎಸ್ ರಮೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಫಲಪುಷ್ಟ ಪ್ರದರ್ಶನದಲ್ಲಿ ಜಗಜ್ಯೋತಿ ಬಸವೇಶ್ವರ ವಚನ ಸಾಹಿತ್ಯವನ್ನು ಜನರಿಗೆ ತಿಳಿಸಲು ನಿರ್ಧರಿಸಲಾಗಿದೆ. 12 ನೇ ಶತಮಾನದ ವಚನಕಾರ ಮತ್ತು ಸಮಾಜ ಸುಧಾರಕ ಬಸವೇಶ್ವರರು ಲಿಂಗ ತಾರತಮ್ಯ, ಮೂಢನಂಬಿಕೆಯನ್ನು ವಿರೋಧಿಸಿದರು. ಅಲ್ಲದೆ ಸಮಾನತೆಯನ್ನು ಪ್ರತಿಪಾದಿಸಿದರು. ಅವರ ತತ್ವಶಾಸ್ತ್ರ ಮತ್ತು ಬೋಧನೆಗಳು ಇಂದು ಅತ್ಯಗತ್ಯ. ಹೀಗಾಗಿ ಈ ಬಾರಿ ಬಸವಣ್ಣ ಮತ್ತು ಅವರ ವಚನ ಸಾಹಿತ್ಯ ವಿಷಯ ಆಧರಿಸಿ ಹೂವಿನ ಮಾದರಿಗಳನ್ನು ರಚಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಇದನ್ನೂ ಓದಿ: ಲಾಲ್​ಬಾಗ್ ಫ್ಲವರ್ ಶೋಗೆ ತೆರೆ: ಈ ವರ್ಷ ಜನ ಕಡಿಮೆ, ಆದ್ರೂ ದಾಖಲೆಯ ಆದಾಯ, ಎಷ್ಟು ಗೊತ್ತಾ?

ಬಸವೇಶ್ವರ ಜೊತೆಗೆ ಅಕ್ಕ ಮಹಾದೇವಿ, ಮಡಿವಾಳ ಮಾಚಯ್ಯ, ಗಂಗಾಂಬಿಕೆ ಮುಂತಾದ ದಾರ್ಶನಿಕರ ಪ್ರತಿಮೆಗಳು, ಅವರ ‘ವಚನ’ಗಳು ಪ್ರದರ್ಶನಗೊಳ್ಳಲಿವೆ. ಹಾಗೇ ‘ಅನುಭವ ಮಂಟಪ’ದ ಪ್ರತಿಕೃತಿಯೂ ಇರಲಿದೆ. ‘ಬ್ಯಾಂಡ್ ಸ್ಟ್ಯಾಂಡ್’ (ವಾದ್ಯಗಾರರಿಗಾಗಿ ನಿರ್ಮಿಸಿದ ವೇದಿಕೆ)ಯಲ್ಲಿ ವಾಚನಗೋಷ್ಠಿಗಳು ನಡೆಯಲಿದ್ದು, ಇದು ವಿಶೇಷ ಆಕರ್ಷಣೆಯಾಗಿದೆ ಎಂದರು.

ಗಿಡಗಳು ಹೂ ಬಿಡಲು 45 ರಿಂದ 60 ದಿನಗಳು ಬೇಕಾಗುವುದರಿಂದ ನವೆಂಬರ್ ಮೊದಲ ವಾರದಲ್ಲಿ ಸುಮಾರು ಮೂರು ಲಕ್ಷ ಹೂವಿನ ಕುಂಡಗಳು ಸಿದ್ಧವಾಗಿವೆ. ಕೆಲವು ಹೂವುಗಳು ಮತ್ತು ಸಸ್ಯಗಳನ್ನು ಸಾಮಾನ್ಯವಾಗಿ ಡಾರ್ಜಿಲಿಂಗ್ ಮತ್ತು ಊಟಿಯಿಂದ ತರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ವರ್ಷವೂ ಸುಮಾರು 5 ಲಕ್ಷ ಗುಲಾಬಿಗಳು ಮತ್ತು 3 ಲಕ್ಷ ಸೇವಂತಿಗೆ ಹೂವುಗಳನ್ನು ಮುಖ್ಯ ಥೀಮ್​ಗಳಿಗಾಗಿ ಬಳಸಲಾಗುತ್ತದೆ. ಈ ವರ್ಷವೂ ಇದೇ ರೀತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:38 am, Wed, 27 December 23

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು