AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್‌ಬಾಗ್‌ನಲ್ಲಿ ನಿರ್ಮಾಣವಾಗುತ್ತಿದೆ ಮಂಜಿನ ಲೋಕ! ಸಿಂಗಾಪುರ ಮಾದರಿಯ ಉದ್ಯಾನವನ; ವಿಶೇಷತೆಗಳೇನು?

ಬೆಂಗಳೂರಿನ ಸಸ್ಯ ಕಾಶಿ ಲಾಲ್​ಬಾಗ್​ಗೆ ಮತ್ತೊಂದು ವಿಶೇಷತೆ ಸೇರ್ಪಡೆಗೊಳ್ಳುತ್ತಿದೆ. ತೋಟಗಾರಿಕಾ ಇಲಾಖೆಯು 2.5 ಎಕರೆಯಲ್ಲಿ ಮಂಜಿನ ಉದ್ಯಾನವನ ನಿರ್ಮಾಣಕ್ಕೆ ಮುಂದಾಗಿದೆ. ಪ್ರಕೃತಿ ಪ್ರಿಯರು ಮತ್ತು ಸಾರ್ವಜನಿಕರಿಗಾಗಿ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ. ಈಗಾಗಲೇ ಸಕಲ ಕೆಲಸ ಕಾರ್ಯಗಳು ಭರದಿಂದ ಸಾಗಿವೆ. ಈ ಕುರಿತ ಮಾಹಿತಿ ಇಲ್ಲಿದೆ.

ಲಾಲ್‌ಬಾಗ್‌ನಲ್ಲಿ ನಿರ್ಮಾಣವಾಗುತ್ತಿದೆ ಮಂಜಿನ ಲೋಕ! ಸಿಂಗಾಪುರ ಮಾದರಿಯ ಉದ್ಯಾನವನ; ವಿಶೇಷತೆಗಳೇನು?
ಲಾಲ್‌ಬಾಗ್‌ನಲ್ಲಿ ಮಂಜಿನ ಫಾರ್ಕ್​​Image Credit source: tv9 kannada
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Oct 10, 2026 | 9:50 PM

Share

ಬೆಂಗಳೂರು, ಅಕ್ಟೋಬರ್​​ 10: ಬೆಂಗಳೂರಿನ ಸಸ್ಯ ಕಾಶಿ ಲಾಲ್​ಬಾಗ್​ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ. ಇದು ಕೇವಲ ಪ್ರಕೃತಿ ಪ್ರಿಯರ ನೆಚ್ಚಿನ ತಾಣ ಮಾತ್ರವಲ್ಲದೆ, ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು ಕೂಡ ಆಗಿದೆ. ಇದೀಗ ಇದೇ ಲಾಲ್‌ಬಾಗ್​ನಲ್ಲಿ ಮತ್ತೊಂದು ವಿಶೇಷ ಅನುಭವ ನೀಡಲು ತೋಟಗಾರಿಕಾ ಇಲಾಖೆ ಮುಂದಾಗಿದೆ.

ಲಾಲ್‌ಬಾಗ್​ನಲ್ಲಿ ಮಂಜಿನ ಉದ್ಯಾನವನ

ಬೆಂಗಳೂರಿನ ಲಾಲ್‌ಬಾಗ್​ಗೆ ಭೇಟಿ ನೀಡುವುದೆಂದರೆ ಅದೇನೋ ಬೆಂಗಳೂರು ಬಿಟ್ಟು ಹೊರಗೆ ಹೋದಂತಹ ಅನುಭವ. ಏಕೆಂದರೆ ಈ ಸಸ್ಯ ಕಾಶಿಯ ವಾತಾವರಣ ಅಷ್ಟು ಹಿತವೆನಿಸುತ್ತದೆ. ಇನ್ನು ಈ ಅನುಭವವನ್ನು ಮತ್ತಷ್ಟು ವಿಶೇಷವಾಗಿಸಲು ತೋಟಗಾರಿಕಾ ಇಲಾಖೆ ಮುಂದಾಗಿದೆ. 2.5 ಎಕರೆ ಹೊರಾಂಗಣ ಮಂಜಿನ ಉದ್ಯಾನವನ ತೆರೆಯಲು ಸಜ್ಜಾಗಿದ್ದು, ಇದು ನೈಸರ್ಗಿಕ ನೆರಳು, ಅಪರೂಪದ ಸಸ್ಯಗಳು ಮತ್ತು ಸುಮಾರು 300 ಫಾಗರ್‌ಗಳ ಸಂಯೋಜನೆಯ ಮೂಲಕ ಬಂಡೆಗಳು, ಕಾಲುವೆಗಳು, ಸೇತುವೆಗಳು ನಿರ್ಮಾಣವಾಗಲಿದೆ.

ಇದನ್ನೂ ಓದಿ: ಲಾಲ್​ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ

ಲಾಲ್‌ಬಾಗ್‌ನ ಡಬಲ್ ರೋಡ್ ಗೇಟ್ ಬಳಿಯ ನೈಸರ್ಗಿಕ ಕಣಿವೆಯ ಎರಡೂ ಬದಿಗಳಲ್ಲಿ ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯು ಈ ಉದ್ಯಾನವನವನ್ನು ಅಭಿವೃದ್ಧಿಪಡಿಸುತ್ತಿದೆ. ಈ ಸ್ಥಳವು ಥೈಲ್ಯಾಂಡ್, ಚೀನಾ ಮತ್ತು ಭಾರತದ ವಿವಿಧ ಭಾಗಗಳಿಂದ ತರಲಾದ ಸುಮಾರು 200 ಬಗೆಯ ವರ್ಣರಂಜಿತ ಸಸ್ಯಗಳನ್ನು ಒಳಗೊಂಡಿದೆ.

LIVE TV

ಒಂದು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ

ನೆಲ ಸಿದ್ಧತೆ, ಸ್ಪ್ರಿಂಕ್ಲರ್ ಅಳವಡಿಕೆ ಮತ್ತು ನೈಸರ್ಗಿಕ ಕಲ್ಲುಗಳ ನಿಯೋಜನೆ ಪೂರ್ಣಗೊಂಡಿದ್ದು, ಫಾಗಿಂಗ್ ಮೂಲಸೌಕರ್ಯ ಮತ್ತು ಇತರೆ ಸಸಿಗಳ ನೆಡುವುದು ಸೇರಿದಂತೆ ಉಳಿದ ಕೆಲಸಗಳು ಸುಮಾರು ಒಂದು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ‘ಈ ಮಂಜಿನ ಉದ್ಯಾನವನ ವಿಶೇಷ ಅನುಭವ ನೀಡಲಿದೆ’ ಎಂದು ಸಾರ್ವಜನಿಕರು ಹೇಳಿದ್ದಾರೆ.

ಇದನ್ನೂ ಓದಿ: ಬೇಡ್ತಿ, ಅಘನಾಶಿನಿ ನದಿ ಯೋಜನೆ ಕೈಬಿಡಿ: ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ: ಪ್ರತಿಭಟನಾಕರರು ಕೈಗೊಂಡ ನಿರ್ಣಯಗಳೇನು?

ಇನ್ನು ಈ ಯೋಜನೆ ಸಿಂಗಾಪುರದಲ್ಲಿರುವ ಮಂಜು ತೋಟದಿಂದ ಪ್ರೇರಿತವಾಗಿದ್ದು, ಹಲವು ಹೊಸ ಪರಿಕಲ್ಪನೆಗಳನ್ನ ಒಳವಡಿಸಿಕೊಳ್ಳಲಾಗಿದೆ. ಒಟ್ಟಾರೆ ಲಾಲ್​ಬಾಗ್​ಗೆ ಭೇಟಿ ನೀಡುವ ಜನರು ಕೆಲವೇ ದಿನಗಳಲ್ಲಿ ಮತ್ತೊಂದು ವಿಶೇಷತೆಗೆ ಸಾಕ್ಷಿಯಾಗುವುದು ಖಚಿತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:47 pm, Sat, 10 October 26

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ