AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರ ಗಮನಕ್ಕೆ: ಕಳೆದ 15 ದಿನಗಳಿಂದ ಬೆಂಗಳೂರಿನ ಈ ರಸ್ತೆ ಬಂದ್, ಆ ಕಡೆ ಹೋಗ್ಬೇಡಿ

ಬೆಂಗಳೂರಿನಲ್ಲಿ ರಸ್ತೆ, ಒಳಚರಂಡಿ, ಪಾದಚಾರಿ ಮಾರ್ಗಗಳ ಅಭಿವೃದ್ಧಿ ನೆಪದಲ್ಲೂ ನಾಗರಿಕರಿಗೆ ಕಿರಿಕಿರಿ ಉಂಟುಮಾಡಲಾಗುತ್ತಿದೆ. ಹೌದು... ನಿಗದಿತ ವೇಳೆಯಲ್ಲಿ ಕಾಮಗಾರಿಗಳನ್ನು ಮುಗಿಸದ ಪರಿಣಾಮ ವಾಹನಗಳ ಸಂಚಾರಕ್ಕೂ ಸಮಸ್ಯೆಯಾಗುತ್ತಿದೆ. ಅದೇ ರೀತಿ ಒಳಚರಂಡಿ ಪೈಪ್ ಲೈನ್ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಲ್ಯಾವೆಲ್ಲೆ ರಸ್ತೆ ಬಂದ್ ಮಾಡಲಾಗಿದೆ.

ವಾಹನ ಸವಾರರ ಗಮನಕ್ಕೆ: ಕಳೆದ 15 ದಿನಗಳಿಂದ ಬೆಂಗಳೂರಿನ ಈ ರಸ್ತೆ ಬಂದ್,  ಆ ಕಡೆ ಹೋಗ್ಬೇಡಿ
Lavelle Road
ರಮೇಶ್ ಬಿ. ಜವಳಗೇರಾ
|

Updated on:May 14, 2026 | 10:28 PM

Share

ಬೆಂಗಳೂರು, (ಮೇ 14): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಪ್ರತಿಷ್ಠಿತ ರಸ್ತೆಗಳಲ್ಲಿ ಒಂದಾದ ಯುಬಿ ಸಿಟಿ ಬಳಿಯ ಲ್ಯಾವೆಲ್ಲೆ ರಸ್ತೆ  (Lavelle Road) ಕಳೆದ 15 ದಿನಗಳಿಂದ ಬಂದ್ ಮಾಡಲಾಗಿದೆ. ಒಳಚರಂಡಿ ಪೈಪ್ ಲೈನ್ ಅಳವಡಿಕೆ ಹಿನ್ನೆಲೆ ರಸ್ತೆ ಪೂರ್ತಿ ಅಗೆಯಲಾಗಿದ್ದು, ವಾಹನ ಸಂಚಾರಕ್ಕೆ ಹೊಡೆತ ಬಿದ್ದಿದೆ. ಇನ್ನು ಫುಟ್ ಪಾತ್ ಕೂಡ ಇಲ್ಲದೆ ಪಾದಚಾರಿಗಳ ಓಡಾಟ ಕೂಡ ದುಸ್ತರವಾಗಿದೆ. ಇನ್ನು ಕಳೆದ ಹದಿನೈದು ದಿನಗಳಿಂದ ಕಾಮಗಾರಿ ನಡೆಯುತ್ತಿರುವ ಪರಿಣಾ ಈ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ. ಹೀಗಾಗಿ ವಾಹನ ಸವಾರರು ಈ ರಸ್ತೆ ಬಿಟ್ಟು ಬದಲಿ ಮಾರ್ಗ ಅನುಸರಿಸಬೇಕು. ಇನ್ನು ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

  • ಒಳಚರಂಡಿ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆ ಬಂದ್.
  • ಕಳೆದ 15 ದಿನಗಳಿಂದ ರಸ್ತೆ ಬಂದ್ ಮಾಡಿದ್ದರಿಂದ ವಾಹನ ಸವಾರರ ಪರದಾಟ.
  • ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ತಿಗೊಳಿಸುವಂತೆ ಸಾರ್ವಜನಿಕರಿಂದ ಒತ್ತಾಯ

ಸೇಂಟ್ ಮಾರ್ಕ್ಸ್ ರಸ್ತೆ, ಯುಬಿ ಸಿಟಿ ರಸ್ತೆಯಿಂದ ರಿಚ್ಮಂಡ್ ಸರ್ಕಲ್ ತಲುಪಲು ಇರುವ ಪ್ರಮುಖ ಸಂಪರ್ಕ ರಸ್ತೆ ಇದಾಗಿದೆ. ಸೂಕ್ತ ಪರ್ಯಾಯ ಮಾರ್ಗಗಳು ಇಲ್ಲದ ಕಾರಣ ದ್ವಿಚಕ್ರ ವಾಹನ ಸವಾರರು ಸರ್ಕಸ್ ಮಾಡುತ್ತಾ ಅಂಕು ಡೊಂಕಿನ ರಸ್ತೆಯಲ್ಲೇ ಹೆಣಗಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ವಾಹನ ಸವಾರರಿಗೆ ಹೊಸ ಸಮಸ್ಯೆ

ಇನ್ನು ಲ್ಯಾವೆಲ್ಲೆ ರಸ್ತೆಯಲ್ಲಿರುವ ಹೋಟೆಲ್, ರೆಸ್ಟೋರೆಂಟ್, ಕೆಫೆ ಸೇರಿ ಎಲ್ಲಾ ಅಂಗಡಿ ಮುಗ್ಗಟ್ಟುಗಳು ವ್ಯಾಪಾರವಿಲ್ಲದೆ ಖಾಲಿ ಹೊಡೆಯುತ್ತಿವೆ. ಒಟ್ಟಿನಲ್ಲಿ ಕಾಮಗಾರಿ ನೆಲದಲ್ಲಿ ಸಾರ್ವಜನಿಕರು ಪರದಾಟ ನಡೆಸುವುದು ಎಷ್ಟು ಸರಿ.. ಆದಷ್ಟು ಬೇಗ ಕಾಮಗಾರಿಯನ್ನು ಮುಗಿಸಿ, ಸಾರ್ವಜನಿಕರು ಹಾಗೂ ವಾಹನಗಳ ಓಡಾಟ ರಸ್ತೆಯನ್ನು ಮುಕ್ತ ಮಾಡಬೇಕಿದೆ.

ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

Published On - 10:07 pm, Thu, 14 May 26

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ