AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಎಚ್ಚರಿಕೆ ನೀಡಿದ ತಜ್ಞರು

ಬೆಂಗಳೂರಿನಲ್ಲಿ ಸಲಿಂಗಿ ದಂಪತಿಯೊಬ್ಬರು ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಮತ್ತು ವೈರಲ್ AI ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದು ನಿಜವೋ ಅಥವಾ ಕೇವಲ AI ಸೃಷ್ಟಿಯೋ ಎಂಬ ಅನುಮಾನಗಳಿವೆ. ಸಲಿಂಗ ಸಂಬಂಧಗಳು ಹಾಗೂ AI ತಂತ್ರಜ್ಞಾನದ ಕುರಿತು ತಜ್ಞರು ಎಚ್ಚರಿಕೆ ನೀಡಿದ್ದು, ಇಂತಹ ಘಟನೆಗಳು ಸಮಾಜದಲ್ಲಿ ಸಲಿಂಗ ಪ್ರೇಮದ ಬಗ್ಗೆ ಮತ್ತಷ್ಟು ಚರ್ಚೆಗೆ ಕಾರಣವಾಗಿವೆ.

ಬೆಂಗಳೂರಿನಲ್ಲಿ ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಎಚ್ಚರಿಕೆ ನೀಡಿದ ತಜ್ಞರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jan 09, 2026 | 5:20 PM

Share

ಬೆಂಗಳೂರು, ಜ.9: ಪ್ರತಿಯೊಂದು ಹೆಣ್ಣಿಗೂ ತಾಯಿಯಾಗುವ ಹಕ್ಕಿದೆ. ಆದರೆ ಆ ಮಗುವನ್ನು ಪಡೆಯುವ ರೀತಿಯೂ ಮುಖ್ಯವಾಗಿರುತ್ತದೆ. ಈ ಪ್ರಕೃತಿಯ ಪ್ರಕಾರ ಒಂದು ಹೆಣ್ಣು ಗಂಡಿನಿಂದಲ್ಲೇ ಪಡೆಯಬೇಕು ಎಂಬ ನಿಯಮವಿದೆ. ಗಂಡು-ಹೆಣ್ಣು ಸೇರಿದಾಗ ಮಾತ್ರ ಸಂಬಂಧಗಳಿಗೆ ಅರ್ಥ ಇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆ ವಿರುದ್ಧವಾಗಿ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಈಗಿನ ಟ್ರೆಂಡ್​​ ಪ್ರಕಾರ ಸಮಲಿಂಗಿ ಸಂಬಂಧಗಳು ಅಂದರೆ ಸಲಿಂಗ ಪ್ರೇಮ, ಇದು ಸಾಮಾಜಿಕ ವ್ಯವಸ್ಥೆಯಲ್ಲಿ ಹಾಗೂ ಭಾರತದ ಪದ್ಧತಿಗೂ ವಿರುದ್ಧವಾಗಿದೆ. ಇಂದಿಗೂ ಕೂಡ ಸಲಿಂಗ ಸಂಬಂಧಕ್ಕೆ ಕಾನೂನತ್ಮಕ ಸ್ಥಾನಮಾನ ಬೇಕು ಎಂದು ಹೋರಾಟ ಮಾಡುತ್ತಿದ್ದಾರೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಒಂದು ವಿಚಿತ್ರ ಘಟನೆ ನಡೆದಿರುವ ಪೋಸ್ಟ್​ವೊಂದು ವೈರಲ್ ಆಗಿದೆ. ಬೆಂಗಳೂರಿನ ಸಲಿಂಗಕಾಮಿ ದಂಪತಿಯಲ್ಲಿ (lesbian couple) ಒಬ್ಬಾಕೆ ಗರ್ಭಿಣಿಯಾಗಿದ್ದಾಳೆ ಎಂಬ ಪೋಸ್ಟ್​​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ವ್ಯಾಪಕ ಚರ್ಚೆಗೂ ಕಾರಣವಾಗಿದೆ.

ಇದೀಗ ಈ ಬಗ್ಗೆ ಫೋಟೋವೊಂದು ಇನ್ಸ್ಟಾಗ್ರಾಮ್​​​ನಲ್ಲಿ ವೈರಲ್​​ ಆಗಿದೆ. ಕೆಲವರು ಈ ಸುದ್ದಿ ನಿಜವಲ್ಲ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಟೋವೊಂದು ವೈರಲ್​ ಆಗಿದೆ. ಈ ಜೋಡಿ ತಮ್ಮ ಸಂಬಂಧ ಹಾಗೂ ಗರ್ಭಿಣಿಯಾಗಿರುವ ಬಗ್ಗೆ ಎಲ್ಲೂ ಹಂಚಿಕೊಂಡಿಲ್ಲ. ಆದರೆ ಈ ಫೋಟೋವನ್ನು ನೋಡಿ ಅನೇಕರು ಇದು ಎಐಯಿಂದ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇಬ್ಬರೂ ಈ ಸಲಿಂಗ ಸಂಬಂಧವನ್ನು ಹೊಂದಿದ್ದಾರೆ ಎಂಬುದಕ್ಕೆ ಯಾವ ಮಾಹಿತಿ ಇಲ್ಲ. ಒಂದು ಹೆಣ್ಣಿನಿಂದ ಮತ್ತೊಂದು ಹೆಣ್ಣು ಮಗು ಪಡೆಯಲು ಹೇಗೆ? ಸಾಧ್ಯ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇದು ಸುಳ್ಳು ಸುದ್ದಿ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಜೀವನಶೈಲಿ ದುಬಾರಿ ಅಲ್ಲ: ತಿಂಗಳಿಗೆ 27,300 ರೂ ಖರ್ಚು ಮಾಡುವ ಯುವತಿಯ ಸಲಹೆ

ಇಲ್ಲಿದೆ ನೋಡಿ ಪೋಸ್ಟ್​​:

ಈ ಫೋಟೋವನ್ನು ನೋಡಿ ಹಲವು ತಜ್ಞರು ತುಂಬಾ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ. ತಮ್ಮ ಪೋಟೋಗಳನ್ನು ಎಐಗೆ ಹಾಕುವ ಮುನ್ನ ತಂತ್ರಿಕಾ ರಕ್ಷಣೆಯ ಬಗ್ಗೆ ನೋಡಬೇಕು. ಕೆಲವೊಂದು ಬಾರಿ ಎಐಗೆ ಹಾಕುವ ಕಾರಣ ಫೋಟೋಗಳನ್ನು ಕದಿಯುವ ಸಾಧ್ಯತೆಗಳು ಇದೆ ಎಂದು ಹೇಳಿದ್ದಾರೆ. ಅದರಲ್ಲಿಯೂ ನೋಡಲು ಸುಂದರ ಆಗಿರುವ ಯುವತಿಯರು ಇದರಲ್ಲಿ ಅಪ್ಲೋಡ್​​ ಮಾಡಿದ್ರೆ ಮುಗಿದೇ ಹೋಯ್ತು. ಇಂತಹ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗಿದೆ. ಸಲಿಂಗಿಗಳ ವಿವಾಹಕ್ಕೆ ಸುಪ್ರೀಂಕೋರ್ಟ್ ಅಕ್ಟೋಬರ್ 2023 ರಲ್ಲಿ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ್ದರೂ, ಅದಕ್ಕೂ ಮುನ್ನ ಅವರ ಹಕ್ಕುಗಳನ್ನು ಕೋರ್ಟ್ ಎತ್ತಿಹಿಡಿದಿದೆ, ಸಲಿಂಗ ಸಂಬಂಧಗಳು ಈಗ ಅಪರಾಧವಲ್ಲ ಎಂದು ಹೇಳಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Fri, 9 January 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್