ಬೆಂಗಳೂರು: ಬೆಸ್ಕಾಂ‌ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಸಾವು, ಚೀಮಸಂದ್ರ ಬಳಿ ದುರ್ಘಟನೆ

ಲೈನ್‌ಮ್ಯಾನ್ ಸಿದ್ದರಾಜು ಮಧ್ಯಾಹ್ನ ಲೈನ್ ಸರಿಪಡಿಸಲು ಹೋಗಿದ್ದರು. ಲೈನ್ ಸರಿಪಡಿಸುವುದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಹೇಳಿದ್ದರು. ಬೆಸ್ಕಾಂ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಸಿದ್ದರಾಜು ಅವರು ದುರಸ್ತಿ ಮಾಡಲಿರುವ ಲೈನ್‌ ಬದಲಾಗಿ ಬೇರೆ ಲೈನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು

ಬೆಂಗಳೂರು: ಬೆಸ್ಕಾಂ‌ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಸಾವು, ಚೀಮಸಂದ್ರ ಬಳಿ ದುರ್ಘಟನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Nov 25, 2023 | 4:08 PM

ಬೆಂಗಳೂರು, ನವೆಂಬರ್ 25: ಬೆಸ್ಕಾಂ (BESCOM) ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್​ ಬಲಿಯಾದ ದುರ್ಘಟನೆ ಬೆಂಗಳೂರು ಪೂರ್ವ ತಾಲೂಕಿನ ಚೀಮಸಂದ್ರ (Cheemasandra) ಬಳಿ ನಡೆದಿದೆ. ಫ್ಯೂಸ್‌ ಬದಲಾವಣೆ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಿದ್ದರಾಜು (32) ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಮಗು ಮೃತಪಟ್ಟ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಈ ದುರಂತ ಸಂಭವಿಸಿದೆ.

ಲೈನ್‌ಮ್ಯಾನ್ ಸಿದ್ದರಾಜು ಮಧ್ಯಾಹ್ನ ಲೈನ್ ಸರಿಪಡಿಸಲು ಹೋಗಿದ್ದರು. ಲೈನ್ ಸರಿಪಡಿಸುವುದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಹೇಳಿದ್ದರು. ಬೆಸ್ಕಾಂ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಸಿದ್ದರಾಜು ಅವರು ದುರಸ್ತಿ ಮಾಡಲಿರುವ ಲೈನ್‌ ಬದಲಾಗಿ ಬೇರೆ ಲೈನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು ಎಂಬ ಅನುಮಾನ ಇದಿಗ ವ್ಯಕ್ತವಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆಂದು ಕಂಬ ಹತ್ತಿದ್ದ ಲೈನ್‌ಮ್ಯಾನ್, ವಿದ್ಯುತ್‌ ಶಾಕ್‌ನಿಂದ ಲೈನ್‌ಮ್ಯಾನ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿದರಹಳ್ಳಿಯ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಗೊಳಿಸಲಾಗಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಹೋಪ್​ ಫಾರ್ಮ್​ ಜಂಕ್ಷನ್ ಬಳಿಯ ಗೋಪಾಲ್ ಕಾಲೊನಿ ನಿವಾಸಿ ಸೌಂದರ್ಯ, ಮಗು ಸುವಿಕ್ಷಾ ಜತೆ ಭಾನುವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದರು. ವಿದ್ಯುತ್​ ಪ್ರವಹಿಸಿ ಮೃತಪಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ, ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟರೆ, ಮತ್ತೊಬ್ಬ ಬಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ