ಮಧ್ಯಪ್ರಿಯರಿಗೆ ನಿರಾಸೆ: ಬೆಂಗಳೂರಿನಲ್ಲಿ ಅಕ್ಟೋಬರ್ 21ರಿಂದ ಮದ್ಯ ಮಾರಾಟ ನಿಷೇಧ!

ಬೆಂಗಳೂರಿನಲ್ಲಿ ಮುಂಬರುವ ದಸರಾ ಮೆರವಣಿಗೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 21 ರಿಂದ ವಿವಿಧ ಪ್ರದೇಶಗಳಲ್ಲಿ ಮದ್ಯ ಮಾರಾಟದ ಮೇಲೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಬಾರ್ ಹಾಗೂ ಪಬ್‌ಗಳು ಮುಚ್ಚಿರಲಿದ್ದು, ಅಕ್ಟೋಬರ್ 27 ರ ಮತ ಎಣಿಕೆ ದಿನದಂದು ಸಹ ಹಲಸೂರು ಗೇಟ್ ವ್ಯಾಪ್ತಿಯಲ್ಲಿ ಡ್ರೈ ಡೇ ಜಾರಿಯಲ್ಲಿರಲಿದೆ ಎಂದು ಪೊಲೀಸ್ ಆಯುಕ್ತರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಮಧ್ಯಪ್ರಿಯರಿಗೆ ನಿರಾಸೆ: ಬೆಂಗಳೂರಿನಲ್ಲಿ ಅಕ್ಟೋಬರ್ 21ರಿಂದ ಮದ್ಯ ಮಾರಾಟ ನಿಷೇಧ!
ಸಾಂದರ್ಭಿಕ ಚಿತ್ರ
Image Credit source: GQ India

Updated on: Oct 20, 2026 | 8:35 AM

ಮುಖ್ಯಾಂಶಗಳು

  • ಅಕ್ಟೋಬರ್ 21ರಿಂದ ದಸರಾ ಹಾಗೂ ಎಂಎಲ್‌ಸಿ ಚುನಾವಣೆ ಹಿನ್ನೆಲೆ ಮದ್ಯ ನಿಷೇಧ.
  • ಆಯ್ದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾತ್ರ ತಾತ್ಕಾಲಿಕ ಡ್ರೈ ಡೇ ಜಾರಿ.
  • ಅಕ್ಟೋಬರ್ 27ರಂದು ಮತ ಎಣಿಕೆ ಕಾರಣ ಮದ್ಯ ಮಾರಾಟ ಬಂದ್.

ಬೆಂಗಳೂರು, ಅಕ್ಟೋಬರ್ 20: ನಗರದಲ್ಲಿ ಮುಂಬರುವ ದಸರಾ ಉತ್ಸವ, ಮೆರವಣಿಗೆಗಳು ಮತ್ತು ವಿಧಾನ ಪರಿಷತ್ (ಎಂಎಲ್‌ಸಿ) ಚುನಾವಣೆಗಳ ಹಿನ್ನೆಲೆಯಲ್ಲಿ ಅಕ್ಟೋಬರ್ 21ರಿಂದ ಕೆಲವು ಪ್ರದೇಶಗಳಲ್ಲಿ ಮದ್ಯ ಮಾರಾಟದ ಮೇಲೆ ತಾತ್ಕಾಲಿಕ ನಿರ್ಬಂಧಗಳನ್ನು ವಿಧಿಸಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸೋಮವಾರ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದ್ದಾರೆ.

ಎಲ್ಲೆಲ್ಲಿ ನಿರ್ಬಂಧ?

ಈ ನಿರ್ಬಂಧಗಳು ಮದ್ಯದಂಗಡಿಗಳು, ಬಾರ್‌ಗಳು, ಪಬ್‌ಗಳು ಮತ್ತು ಮದ್ಯ ಮಾರಾಟ ಮಾಡುವ ಇತರ ಮಳಿಗೆಗಳಿಗೆ ಅನ್ವಯಿಸಲಿವೆ. ಆದರೆ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಎಂದಿನಂತೆ ಆಹಾರ ಸೇವನೆಗೆ ಅವಕಾಶವಿರಲಿದೆ.

ವಿವಿಧ ಪ್ರದೇಶಗಳಲ್ಲಿ ಜಾರಿಗೆ ಬರುವ ಮದ್ಯ ಮಾರಾಟ ನಿಷೇಧದ ವಿವರಗಳು

  • ದಸರಾ ಮೆರವಣಿಗೆ: ಆರ್.ಟಿ. ನಗರ, ಜೆ.ಸಿ. ನಗರ ಮತ್ತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಟೋಬರ್ 21ರ ಮಧ್ಯಾಹ್ನ 12:00 ಗಂಟೆಯಿಂದ ಅಕ್ಟೋಬರ್ 22ರ ರಾತ್ರಿ 1:00 ಗಂಟೆಯವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ.
  • ಎಂಎಲ್‌ಸಿ ಚುನಾವಣೆಗಳು: ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ದಕ್ಷಿಣ-ಪೂರ್ವ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗಳ ಕಾರಣದಿಂದ, ಅಕ್ಟೋಬರ್ 21ರ ಸಂಜೆ 4:00 ಗಂಟೆಯಿಂದ ಅಕ್ಟೋಬರ್ 23ರ ಸಂಜೆ 4:00 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧವಿರಲಿದೆ. ಈ ನಿಯಮವು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಆಗ್ನೇಯ, ನೈಋತ್ಯ, ವಾಯುವ್ಯ, ಈಶಾನ್ಯ, ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಸೇರಿದಂತೆ ನಗರದ ಬಹುತೇಕ ಪೊಲೀಸ್ ವಿಭಾಗಗಳ ವ್ಯಾಪ್ತಿಗೆ ಅನ್ವಯಿಸಲಿದೆ.
  • ಮತ ಎಣಿಕೆ: ಮತ ಎಣಿಕೆ ಪ್ರಕ್ರಿಯೆ ನಡೆಯುವ ಕಾರಣ, ಅಕ್ಟೋಬರ್ 27ರಂದು ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 11:59 ಗಂಟೆಯವರೆಗೆ ಹಲಸೂರು ಗೇಟ್ (Ulsoor Gate) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಡ್ರೈ ಡೇ (ಮದ್ಯ ನಿಷೇಧ ದಿನ) ಜಾರಿಯಲ್ಲಿರಲಿದೆ.

ಉತ್ಸವಗಳು ಮತ್ತು ಚುನಾವಣಾ ಪ್ರಕ್ರಿಯೆಗಳು ಶಾಂತಿಯುತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕರು ಮತ್ತು ವ್ಯಾಪಾರ ಮಳಿಗೆಗಳು ಈ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸರು ಸೂಚಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us