AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರ ಗಮನಕ್ಕೆ… ಬೆಂಗಳೂರಿನಲ್ಲಿ ಇನ್ಮುಂದೆ ಸಿಗಲ್ಲ ವಡೆ, ಬಜ್ಜಿ, ಪಕೋಡ: ಸ್ನ್ಯಾಕ್ಸ್ ತಿಂಡಿಗೂ ಕೋಕ್

ರಾಜಧಾನಿಯಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದ ಹೋಟೆಲ್‌ಗಳು ಸಂಕಷ್ಟದಲ್ಲಿವೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ವ್ಯತ್ಯಯದಿಂದ ಗ್ಯಾಸ್ ಹೆಚ್ಚು ಬೇಕಾಗುವ ವಡೆ, ಬಜ್ಜಿ, ಪೂರಿಯಂತಹ ಸ್ನ್ಯಾಕ್ಸ್ ತಯಾರಿಕೆ ಸ್ಥಗಿತಗೊಳಿಸಿವೆ. ಹೋಟೆಲ್‌ಗಳು ಕಡಿಮೆ ಗ್ಯಾಸ್ ಬಳಕೆಯ ರೈಸ್ ಐಟಂಗಳಿಗೆ ಆದ್ಯತೆ ನೀಡುತ್ತಿದ್ದು, ಗ್ರಾಹಕರಲ್ಲಿ ಸಹಕರಿಸುವಂತೆ ವಿನಂತಿಸಿವೆ. ಇದರಿಂದ ಆದಾಯದಲ್ಲಿ ಶೇ. 30-40ರಷ್ಟು ಕುಸಿತ ನಿರೀಕ್ಷಿಸಲಾಗಿದೆ.

ಗ್ರಾಹಕರ ಗಮನಕ್ಕೆ... ಬೆಂಗಳೂರಿನಲ್ಲಿ ಇನ್ಮುಂದೆ ಸಿಗಲ್ಲ ವಡೆ, ಬಜ್ಜಿ, ಪಕೋಡ: ಸ್ನ್ಯಾಕ್ಸ್ ತಿಂಡಿಗೂ ಕೋಕ್
ಸಾಂದರ್ಭಿಕಮಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on: Mar 11, 2026 | 9:08 AM

Share

ಬೆಂಗಳೂರು, ಮಾ.11: ರಾಜಧಾನಿಯಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಹಾಹಾಕಾರ ಮಿತಿಮೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರ ಪದಾರ್ಥಗಳನ್ನು ತಯಾರಿಸದಿರಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.ಅತಿ ಹೆಚ್ಚು ಗ್ಯಾಸ್ ವ್ಯಯವಾಗುವ ಉದ್ದಿನ ವಡೆ, ಬಜ್ಜಿ, ಪಕೋಡ, ಪೂರಿ ಮತ್ತು ಗೋಬಿ ಮಂಚೂರಿಯನ್ ನಂತಹ ಸ್ನ್ಯಾಕ್ಸ್ ತಿಂಡಿಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಕಡಿಮೆ ಗ್ಯಾಸ್ ಬಳಸಿ ಹೆಚ್ಚು ಜನರಿಗೆ ಉಣಬಡಿಸಬಹುದಾದ ಚಿತ್ರಾನ್ನ, ಪಲಾವ್, ಬಿಸಿಬೇಳೆ ಬಾತ್ ನಂತಹ ರೈಸ್ ಐಟಂಗಳ ತಯಾರಿಕೆಗೆ ಹೋಟೆಲ್‌ಗಳು ಹೆಚ್ಚಿನ ಒಲವು ತೋರುತ್ತಿವೆ. “ದಯವಿಟ್ಟು ಹೆಚ್ಚು ಆಯಿಲ್ ಬಳಕೆಯಾಗುವ ತಿಂಡಿಗಳನ್ನು ಕೇಳಬೇಡಿ, ರೈಸ್ ಐಟಂಗಳನ್ನು ಆರ್ಡರ್ ಮಾಡಿ ಸಹಕರಿಸಿ” ಎಂದು ಹೋಟೆಲ್ ಮಾಲೀಕರು ಭಕ್ಷಕರಲ್ಲಿ ವಿನಂತಿಸಿಕೊಳ್ಳುತ್ತಿದ್ದಾರೆ.

ವಾಣಿಜ್ಯ ಸಿಲಿಂಡರ್‌ಗಳ ದಾಸ್ತಾನು ಕುಸಿದಿರುವುದರಿಂದ, ಇರುವ ಅಲ್ಪ ಪ್ರಮಾಣದ ಗ್ಯಾಸ್ ಬಳಸಿ ದಿನದ ವ್ಯಾಪಾರ ಮುಗಿಸುವುದು ಹೋಟೆಲ್ ಮಾಲೀಕರಿಗೆ ಸವಾಲಾಗಿದೆ. ಎಣ್ಣೆಯಲ್ಲಿ ಕರೆಯುವ ತಿಂಡಿಗಳಿಗೆ ನಿರಂತರವಾಗಿ ಹೆಚ್ಚಿನ ಉರಿ ಬೇಕಾಗುತ್ತದೆ, ಇದು ಸಿಲಿಂಡರ್ ಶೀಘ್ರವಾಗಿ ಖಾಲಿಯಾಗಲು ಕಾರಣವಾಗುತ್ತದೆ. ಆದ್ದರಿಂದ ಅನಿವಾರ್ಯವಾಗಿ ಸ್ನ್ಯಾಕ್ಸ್ ವಿಭಾಗಕ್ಕೆ ಹೋಟೆಲ್‌ಗಳು ‘ಕೋಕ್’ ನೀಡಿವೆ. ಇದರಿಂದ ಹೋಟೆಲ್‌ಗಳ ಒಟ್ಟಾರೆ ಆದಾಯದಲ್ಲಿ ಶೇ. 30 ರಿಂದ 40 ರಷ್ಟು ಕುಸಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: “ಹೋಟೆಲ್ ಬಂದ್ ಮಾಡಿದ್ರೆ ನಮ್ಮ ಕುಟುಂಬದ ಗತಿ ಏನು?”: ರಾಜ್ಯದ ಹಲವು ಕಡೆ ಗ್ಯಾಸ್ ಸಿಲಿಂಡರ್ ಸಮಸ್ಯೆ

ವಡೆ, ಬಜ್ಜಿ, ಪಕೋಡ ಮತ್ತು ಗೋಬಿಯಂತಹ ಸ್ನ್ಯಾಕ್ಸ್ ಐಟಂಗಳು ಹೋಟೆಲ್‌ಗಳಿಗೆ ಹೆಚ್ಚು ಲಾಭ ತಂದುಕೊಡುವ ಪದಾರ್ಥಗಳು. ಇವುಗಳ ಮಾರಾಟ ನಿಂತರೆ ಲಾಭದ ಪ್ರಮಾಣ ಗಣನೀಯವಾಗಿ ಇಳಿಯುತ್ತದೆ.ಬೆಳಗ್ಗಿನ ಉಪಹಾರಕ್ಕೆ ವಡೆ-ಪೂರಿ ಇಲ್ಲದಿದ್ದರೆ ಅಥವಾ ಸಂಜೆಯ ಸ್ನ್ಯಾಕ್ಸ್‌ಗೆ ಬಜ್ಜಿ-ಬೋಂಡಾ ಸಿಗದಿದ್ದರೆ ಗ್ರಾಹಕರು ಹೋಟೆಲ್‌ಗೆ ಬರುವುದು ಕಡಿಮೆಯಾಗುತ್ತದೆ. ಬರಿ ರೈಸ್ ಐಟಂ ತಿನ್ನಲು ಎಲ್ಲರೂ ಇಷ್ಟಪಡುವುದಿಲ್ಲ.ಸಂಜೆ ವೇಳೆ ಪಾರ್ಸೆಲ್ ಕೊಂಡೊಯ್ಯುವವರಲ್ಲಿ ಹೆಚ್ಚಿನವರು ಸ್ನ್ಯಾಕ್ಸ್ ಮತ್ತು ಎಣ್ಣೆ ತಿಂಡಿಗಳನ್ನೇ ಬಯಸುತ್ತಾರೆ. ಇದು ಸ್ಥಗಿತಗೊಂಡರೆ ಸಂಜೆಯ ವ್ಯಾಪಾರ ಶೇ. 50 ರಷ್ಟು ಕುಸಿಯಬಹುದು ಎಂದು ಹೇಳಲಾಗಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು