AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

Bengaluru Traffic Restrictions: ಮಹಾಶಿವರಾತ್ರಿಯ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಇದರಿಂದಾಗಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಯಮಲೂರು ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಮತ್ತು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಕಾಡುಬೀಸನಹಳ್ಳಿ ಜಂಕ್ಷನ್‌ನಲ್ಲಿಯೂ ಸಂಚಾರ ನಿಯಂತ್ರಣಗಳಿವೆ. ಪಾರ್ಕಿಂಗ್ ಸ್ಥಳಗಳ ಮಾಹಿತಿಯನ್ನೂ ಒದಗಿಸಲಾಗಿದೆ.

ಮಹಾಶಿವರಾತ್ರಿ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ
ಬೆಂಗಳೂರು ಸಂಚಾರ ದಟ್ಟಣೆ
ವಿವೇಕ ಬಿರಾದಾರ
|

Updated on: Feb 26, 2025 | 7:21 AM

Share

ಬೆಂಗಳೂರು, ಫೆಬ್ರವರಿ 26: ಮಹಾಶಿವರಾತ್ರಿ (Maha Shivaratri) ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ನಗರದಲ್ಲಿನ ಶಿವನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಉತ್ಸವಗಳು ನಡೆಯುತ್ತಿವೆ. ಹೀಗಾಗಿ, ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು (Traffic Restrictions), ಮಾರ್ಗಬದಲಾವಣೆಯನ್ನು ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ತಿಳಿಸಿದ್ದಾರೆ.

ಯಮಲೂರು ಮುಖ್ಯರಸ್ತೆಯಲ್ಲಿರುವ ಶಿವನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬ ಮತ್ತು ಊರು ಹಬ್ಬದ ಪ್ರಯುಕ್ತ ಪೂಜಾ ಹಾಗೂ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ.

ಬುಧವಾರ ಬೆಳಗ್ಗೆ 06.00 ಗಂಟೆಯಿಂದ ಗುರುವಾರ ಮಧ್ಯಾಹ್ನ 03.00 ಗಂಟೆಯವರೆಗೆ ಯಮಲೂರು ಮುಖ್ಯ ರಸ್ತೆ, (ಯಮಲೂರು ಕೋಡಿ ಜಂಕ್ಷನ್‌ನಿಂದ ಗ್ಲೋರಿ ಜ್ಯೂಸ್ ಸೆಂಟರ್‌ವರೆಗೆ) ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ :

ಯಮಲೂರು ಕೋಡಿ ಕಡೆಯಿಂದ ವರ್ತೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಕೆಂಪಾಪುರ ಮುಖ್ಯರಸ್ತೆ ಮುಖಾಂತರ ಸಾಗಿ ರೋಹನ್ ಅಪಾರ್ಟ್‌ ಮೆಂಟ್ ಪಕ್ಕದ ರಸ್ತೆಗೆ ತಿರುವು ಪಡೆದು ವರ್ತೂರು ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.

ವರ್ತೂರು ರಸ್ತೆ ಕಡೆಯಿಂದ ಯಮಲೂರು ಕೋಡಿ ರಸ್ತೆ ಕಡೆಗೆ ಸಂಚರಿಸುವ ವಾಹನಗಳು ರೋಹನ್ ಅಪಾರ್ಟ್‌ಮೆಂಟ್ ಪಕ್ಕದ ರಸ್ತೆ ಮುಖಾಂತರ ಸಂಚರಿಸಿ ಕೆಂಪಾಪುರ ಮುಖ್ಯ ರಸ್ತೆಯ ಮೂಲಕ ಸಾಗಿ ಯಮಲೂರು ಕೋಡಿ ಕಡೆಗೆ ಸಂಚರಿಸಬಹುದಾಗಿದೆ.

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶಿವೋಹಂ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ನಡೆಯುತ್ತಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಬುಧವಾರ ಬೆಳಗ್ಗೆ 05.00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ, ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗುವ ಸಂಭವ ಇರುವುದರಿಂದ ಈ ರಸ್ತೆಯ ಬದಲಾಗಿ ಪರ್ಯಾಯ ರಸ್ತೆಗಳಾದ ಸುರಂಜನ್ ದಾಸ್ ರಸ್ತೆ, ಹಳೇ ಮದ್ರಾಸ್ ರಸ್ತೆ ಮತ್ತು ಜೆ.ಬಿ.ನಗರ ಮುಖ್ಯ ರಸ್ತೆಗಳಲ್ಲಿ ಸಂಚಾರ ಮಾಡಬಹುದಾಗಿದೆ.

ಟ್ವಿಟರ್​ ಪೋಸ್ಟ್​

ವಾಹನ ನಿಲುಗಡೆ ನಿಷೇಧಿತ ಸ್ಥಳಗಳು:

ಹಳೇ ವಿಮಾನ ನಿಲ್ದಾಣ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ವಾಹನ ನಿಲುಗಡೆ ಸ್ಥಳಗಳು:

ದೇವಸ್ಥಾನಕ್ಕೆ ವಾಹನಗಳಲ್ಲಿ ಆಗಮಿಸುವ ಭಕ್ತಾದಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸರ್.ಎಂ ವಿಶ್ವೇಶ್ವರಯ್ಯ ಕಾಲೇಜು ಮೈದಾನ. ಹಳೇ ವಿಮಾನ ನಿಲ್ದಾಣ ರಸ್ತೆ ಇಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

ಕಾಡುಬೀಸನಹಳ್ಳಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ, ಶುಕ್ರವಾರ (ಫೆ.28) ರಿಂದ ಮಾರ್ಚ್​ 7ರವರೆಗೆ ಕಾಡುಬೀಸನಹಳ್ಳಿ ಜಂಕ್ಷನ್ ಕಡೆಯಿಂದ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ದಕ್ಷಿಣ ಭಾರತದ ಅತಿ ದೊಡ್ಡ ಬೆಂಗಳೂರು -ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ

ಪರ್ಯಾಯ ಮಾರ್ಗ:

ಕಾಡುಬೀಸನಹಳ್ಳಿ ಜಂಕ್ಷನ್ ಕಡೆಯಿಂದ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸುವ ವಾಹನಗಳು ದೇವರಬೀಸನಹಳ್ಳಿ ಜಂಕ್ಷನ್ ಕಡೆಗೆ ಸಂಚರಿಸಿ ಯು ಟರ್ನ್ ಪಡೆದು ಸಕ್ರಾ ಆಸ್ಪತ್ರೆ ಮುಖ್ಯ ರಸ್ತೆ ಮೂಲಕ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸಬಹುದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್