AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆತಂಕದಲ್ಲಿ ಟೆಕ್ಕಿ!

ಬೆಂಗಳೂರಿನ ಮಹದೇವಪುರದಲ್ಲಿ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಸ್ನಾನ ಮಾಡುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ವಿಡಿಯೋ ಚಿತ್ರೀಕರಿಸಿದ ಅಮಾನವೀಯ ಘಟನೆ ನಡೆದಿದೆ. ಪಕ್ಕದ ಕಟ್ಟಡದಿಂದ ಮೊಬೈಲ್ ಮೂಲಕ ಈ ಕೃತ್ಯ ಎಸಗಲಾಗಿದ್ದು, ಯುವತಿ ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿಡಿಯೋ ಹರಡುವ ಭೀತಿಯಲ್ಲಿರುವ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಯುತ್ತಿದೆ.

ಬೆಂಗಳೂರು: ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆತಂಕದಲ್ಲಿ ಟೆಕ್ಕಿ!
ಸಾಂದರ್ಭಿಕ ಚಿತ್ರ Image Credit source: AI image
ಅಕ್ಷಯ್​ ಪಲ್ಲಮಜಲು​​
|

Updated on: May 06, 2026 | 8:47 AM

Share

ಬೆಂಗಳೂರು, ಮೇ.6 : ಸಿಲಿಕಾನ್ ಸಿಟಿಯ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಡಿಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಅವರ ವಿಡಿಯೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಚಿತ್ರೀಕರಿಸಿರುವ ಬಗ್ಗೆ ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಯುವತಿಯು ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಬುಧವಾರ ಬೆಳಿಗ್ಗೆ ಸುಮಾರು 9.30ರ ಸುಮಾರಿಗೆ ಅವರು ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಯಾರೋ ಒಬ್ಬರು ಮೊಬೈಲ್ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: 5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ!

ಇನ್ನು ಈ ಘಟನೆಯಿಂದ ಯುವತಿಯು ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಬಹುದು ಎಂಬ ಆತಂಕ ಅವರನ್ನು ಕಾಡುತ್ತಿದೆ. ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತೀವ್ರ ತನಿಖೆ ಆರಂಭಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?