AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರಿನ ನೆಕ್ಸಸ್ ಮಾಲ್ ಗರ್ಭಿಣಿಯರಿಗಾಗಿ ವಿಶೇಷ ಗುಲಾಬಿ ಥೀಮ್ ಪಾರ್ಕಿಂಗ್ ವ್ಯವಸ್ಥೆ ಮಾಡಿದೆ. ಇದು ಮಾಲ್‌ನ ದಟ್ಟಣೆಯಂದ  ತಾಯಂದಿರು ತಪ್ಪಿಸಿಕೊಳ್ಳಲು ಹಾಗೂ ಸುರಕ್ಷತೆಯನ್ನು ಕಲ್ಪಿಸುತ್ತದೆ. ಅಕ್ಷಯ್ ರೈನಾ ಹಂಚಿಕೊಂಡ ಈ ವಿಡಿಯೋ ವೈರಲ್ ಆಗಿದ್ದು, ಮಾಲ್‌ನ ಈ ಪರಿಕಲ್ಪನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಇಂತಹ ವ್ಯವಸ್ಥೆಯನ್ನು ಇತರ ಮಾಲ್‌ಗಳೂ ಅಳವಡಿಸಿಕೊಳ್ಳಬೇಕೆಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Dec 27, 2025 | 3:07 PM

Share

ಬೆಂಗಳೂರು , ಡಿ.27: ಗರ್ಭಿಣಿಯರಿಗೆ (pregnant women) ಮೀಸಲಾದ ಪಾರ್ಕಿಂಗ್ ಸ್ಥಳದ ಒಂದು ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಾಲ್​​​ವೊಂದರಲ್ಲಿ ಈ ದೃಶ್ಯ ಕಂಡು ಬಂದಿದೆ. ಮಹಿಳೆಯರಿಗಾಗಿ, ಅದರಲ್ಲೂ ಗರ್ಭಿಣಿಯರಿಗೆ ಈ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಮಾಲ್​​ನ ಈ ಪರಿಕಲ್ಪನೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಾಲ್​​​ನ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಸಣ್ಣದಾಗಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಅಕ್ಷಯ್ ರೈನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದು “ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ” ಎಂಬ ಬೋರ್ಡ್​​ನ್ನು ಕೂಡ ಈ ಪಾರ್ಕಿಂಗ್​ ಸ್ಥಳದಲ್ಲಿ ಹಾಕಲಾಗಿದೆ. ಗುಲಾಬಿ ಥೀಮ್‌ ಮೂಲಕ ಈ ಪಾರ್ಕಿಂಗ್​​ ಸ್ಥಳವನ್ನು ವಿನ್ಯಾಸ ಮಾಡಲಾಗಿದೆ. ಇದು ತುಂಬಾ ವಿಶೇಷವಾಗಿ ಕಂಡು ಬಂದಿದೆ. ದೊಡ್ಡ ಶಾಪಿಂಗ್ ಮಾಲ್​​ನಲ್ಲಿ ಜನ ಹಾಗೂ ವಾಹನ ದಟ್ಟಣೆ ಇರುವುದು ಸಹಜ. ಇದರಿಂದ ಗರ್ಭಿಣಿಯರಿಗೆ ಯಾವುದೇ ತೊಂದರೆ ಆಗಬಾರದು ಎಂದು ಈ ವ್ಯವಸ್ಥೆಯನ್ನು ಮಾಡಲಾಗಿದೆ. ಪಿಂಕ್​​ ಕಲರ್​​​ನಿಂದ ಈ ಪಾರ್ಕಿಂಗ್​​ ಸ್ಥಳವನ್ನು ಅಲಂಕಾರ ಮಾಡಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ದೃಶ್ಯದ ಬಗ್ಗೆ ಅಕ್ಷಯ್ ರೈನಾ ಅದ್ಭುತವಾಗಿ ವಿವರಿಸಿದ್ದಾರೆ. “ತುಂಬಾ ಒಳ್ಳೆಯ ಪರಿಕಲ್ಪನೆ ಮತ್ತು ನನಗೆ ಅದು ತುಂಬಾ ಇಷ್ಟವಾಯಿತು. ಈ ದೃಶ್ಯ ಕಂಡು ಬಂದದ್ದು ನೆಕ್ಸಸ್ ಮಾಲ್​​ನಲ್ಲಿ, ಸಾಂಪ್ರದಾಯಿಕ ಸೌಲಭ್ಯಗಳನ್ನು ಮೀರಿ ಯೋಚಿಸಿದ್ದಕ್ಕಾಗಿ ಮಾಲ್ ಆಡಳಿತ ಮಂಡಳಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ. ಮಹಿಳೆಯರಿಗೆ, ವಿಶೇಷವಾಗಿ ತಾಯಂದಿರಿಗೆ ಪ್ರತ್ಯೇಕ ಸ್ಥಳವನ್ನು ಇಟ್ಟುಕೊಂಡಿರುವ ಬೆಂಗಳೂರಿನ ನೆಕ್ಸಸ್‌ಮಾಲ್‌ಗಳಿಗೆ ಹ್ಯಾಟ್ಸ್ ಆಫ್. ಭಾರತದ ಇತರ ಎಲ್ಲಾ ಮಾಲ್‌ಗಳು ಇದನ್ನು ಜಾರಿಗೆ ತರಬೇಕು ಎಂದು ಈ ವಿಡಿಯೋದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಅನೇಕರು ಈ ವಿಡಿಯೋವನ್ನು ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ತುಂಬಾ ಸಹಾಯಕವಾಗಿದೆ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಇದು ಮಾಲ್‌ಗಳ ಜನದಟ್ಟಣೆ ಮತ್ತು ಗೊಂದಲಮಯ ಪಾರ್ಕಿಂಗ್‌ನಲ್ಲಿ ಬಹಳ ಅವಶ್ಯಕವಾದ ಸ್ಥಳವಾಗಿದೆ, ಇದರಿಂದಾಗಿ ತಾಯಂದಿರು ತಮ್ಮ ವಾಹನವನ್ನು ಸುಲಭವಾಗಿ ನಿಲ್ಲಿಸಿ ಮಾಲ್‌ಗೆ ಸುಲಭವಾಗಿ ಹೋಗಬಹುದು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದು ನೋಡಲು ತುಂಬಾ ಹೃದಯಸ್ಪರ್ಶಿಯಾಗಿದೆ ಎಂದು ಇನ್ನೊಬ್ಬರು ಕಮೆಂಟ್​​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ